ಬೆಂಗಳೂರು,ಡಿ.18- ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಬೆಂಗಳೂರು ಇಸ್ಲಾಂ ಮೂಲಭೂತವಾದಿಗಳ ಸುರಕ್ಷಿತ ಅಡಗುತಾಣವಾಗಿ ಪರಿವರ್ತನೆಯಾಗಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಎನ್‍ಐಎ ದಾಳಿಯ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ರಾಷ್ಟ್ರೀಯ ತನಿಖಾ ದಳ ಬೆಂಗಳೂರಿನ 23 ಕಡೆ ಶಂಕಿತ ಉಗ್ರರ ಮೇಲೆ ದಾಳಿ ನಡೆಸಿದೆ. ಬೆಂಗಳೂರು ಕಾಂಗ್ರೆಸ್ ಆಡಳಿತದಲ್ಲಿ ಉಗ್ರರ ಸ್ಲೀಪರ್‌ಸೆಲ್ ಆಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಮ ಮಂದಿರ ಉದ್ಘಾಟನೆ, ಮಾಜಿ ಪ್ರಧಾನಿ ದೇವೇಗೌಡರಿಗೆ ಆಹ್ವಾನ
ಸಿದ್ದರಾಮಯ್ಯ ಅವರು ಈ ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ಪಿಎಫ್‍ಐ ಕಾರ್ಯಕರ್ತರ ವಿರುದ್ಧ 200 ಪ್ರಕರಣಗಳನ್ನು ಹಿಂಪಡೆದಿದ್ದರು. ಅದರ ಪರಿಣಾಮ ಇಂದು ಬೆಂಗಳೂರು ಉಗ್ರರ ತಾಣವಾಗಿದೆ. ಕಾಂಗ್ರೆಸ್‍ನ ತುಷ್ಟೀಕರಣದ ನೀತಿಯನ್ನು ಅನುಭವಿಸುವಂತಾಗಿದೆ ಎಂದು ಕಿಡಿಕಾರಿದ್ದಾರೆ.