Thursday, April 30, 2026
Homeರಾಜಕೀಯ'ಕಾಂಗ್ರೆಸ್‌‍ ಜೊತೆ ಪ್ರೀತಿ, ಮೋದಿ ಜೊತೆ ಮದುವೆ' ಎಂದು ಟೀಕಿಸಿದ್ದ ಖರ್ಗೆಗೆ ಗೌಡರ ತಿರುಗೇಟು

‘ಕಾಂಗ್ರೆಸ್‌‍ ಜೊತೆ ಪ್ರೀತಿ, ಮೋದಿ ಜೊತೆ ಮದುವೆ’ ಎಂದು ಟೀಕಿಸಿದ್ದ ಖರ್ಗೆಗೆ ಗೌಡರ ತಿರುಗೇಟು

Deve Gowda hits back at Kharge for criticizing him

ನವದೆಹಲಿ, ಮಾ.24- ನಮ ಜತೆ ಪ್ರೀತಿ ಹೊಂದಿದ್ದರು, ಪ್ರಧಾನಿ ನರೇಂದ್ರ ಮೋದಿ ಅವರ ಜತೆ ಮದುವೆಯಾದರು ಎಂದು ತಮ ಬಗ್ಗೆ ಟೀಕೆ ಮಾಡಿದ್ದ ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡರು ರಾಜ್ಯಸಭೆಯಲ್ಲಿಯೇ ತಿರುಗೇಟು ನೀಡಿದ್ದಾರೆ.

ಈ ಬಗ್ಗೆ ರಾಜ್ಯಸಭೆಯಲ್ಲಿ ನಿನ್ನೆ ವಿಷಯ ಪ್ರಸ್ತಾಪಿಸಿದ ದೇವೇಗೌಡರು, ನಾನು ಸದನದಲ್ಲಿ ಇಲ್ಲದಿದ್ದ ಸಂದರ್ಭದಲ್ಲಿ ಖರ್ಗೆ ಅವರು ಈ ವಿಷಯ ಪ್ರಸ್ತಾಪಿಸಿ ಮಾತನಾಡಿದ್ದಾರೆ. ಅವರು ನಾನು ಅವರಿಗೆ, ಅವರ ಪಕ್ಷಕ್ಕೆ ದೋಹ ಬಗೆದಿದ್ದೇನೆ ಎಂದು ಅರ್ಥ ಬರುವ ರೀತಿಯಲ್ಲಿ ಮಾತನಾಡಿದ್ದಾರೆ. ಆದರೆ, ನಿಜವಾಗಿಯೂ ಕಾಂಗ್ರೆಸ್‌‍ ಪಕ್ಷದಿಂದ ದೋಹ ಆಗಿರುವುದು ನಮಗೆ, ನಮ ಪಕ್ಷಕ್ಕೆ ಎಂದು ಎಂದು ಹರಿಹಾಯ್ದಿದ್ದಾರೆ.

ಕಾಂಗ್ರೆಸ್‌‍ ಪಕ್ಷವು ನಮ ಪಕ್ಷಕ್ಕೆ ಒಂದಲ್ಲ, ಎರಡಲ್ಲ, ಅನೇಕ ಬಾರಿ ದೋಹ ಮಾಡಿದೆ. ಅದರ ಬಗ್ಗೆ ನಾನು ಸಾಕ್ಷಿ ಸಹಿತವಾಗಿ ಮಾತನಾಡಬಲ್ಲೆ. ಅದೆಲ್ಲವನ್ನು ಮರೆಮಾಚಲು ಖರ್ಗೆ ಅವರು ನನ್ನ ವಿಷಯ ಎಳೆದು ತಂದಿದ್ದಾರೆ. ಅದಕ್ಕೆ ನಾನು ಉತ್ತರ ನೀಡಬೇಕಿದೆ ಎಂದು ಅವರು ಹೇಳಿದ್ದಾರೆ.

ಈ ಸಂದರ್ಭದಲ್ಲಿ ತಮ್ಮ ಕಾಲದ ಕರ್ನಾಟಕ ರಾಜ್ಯದ ರಾಜಕಾರಣವನ್ನು ಮೆಲುಕು ಹಾಕಿದ ಅವರು, ಮಾಜಿ ಮುಖ್ಯಮಂತ್ರಿಗಳಾದ ನಿಜಲಿಂಗಪ್ಪ, ದೇವರಾಜ ಅರಸು, ಬಂಗಾರಪ್ಪ ಅವರಿಗೆ ಏನಾಯಿತು ಎಂಬುದು ಮಲ್ಲಿಕಾರ್ಜುನ ಖರ್ಗೆ ಅವರಿಗೂ ಗೊತ್ತಿದೆ. ಅವರು ಹೇಗೆ ಅಧಿಕಾರ ಕಳೆದುಕೊಂಡರು ಎಂಬುದನ್ನು ಖರ್ಗೆ ಅವರು ಹೇಳಬೇಕಾಗುತ್ತದೆ. ಅವರೆಲ್ಲರೂ ಅಧಿಕಾರ ಕಳೆದುಕೊಂಡಿದ್ದಕ್ಕೆ ನಾವು ಸಾಕ್ಷಿಗಳಾಗ್ದೆಿವು ಎಂದು ಟೀಕಾ ಪ್ರಹಾರ ನಡೆಸಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಒಳ್ಳೆಯ ವ್ಯಕ್ತಿ. ಅವರನ್ನು ಮುಖ್ಯಮಂತ್ರಿ ಸ್ಥಾನದಲ್ಲಿ ನೋಡಬೇಕೆಂದು ನಾವೆಲ್ಲರೂ ಆಶಿಸ್ದೆಿವು. ಆದರೆ, ಅವರ ಸ್ವಂತ ಪಕ್ಷವೇ ಅವರನ್ನು ಸಿಎಂ ಆಗಲು ಬಿಡಲಿಲ್ಲ. ನಿಜ ಹೇಳಬೇಕು ಎಂದರೆ, ನನ್ನ ಮತ್ತು ನರೇಂದ್ರ ಮೋದಿ ಅವರ ನಡುವಿನ ಮೈತ್ರಿ ಕಳೆದ ಲೋಕಸಭೆ ಚುನಾವಣೆಯಲ್ಲಿ ಶುರುವಾಗಿದ್ದಲ್ಲ.

2014ರಲ್ಲಿಯೇ ಆರಂಭವಾಯಿತು. ನಾನು ಅವತ್ತಿನ ಲೋಕಸಭೆ ಚುನಾವಣೆಯಲ್ಲಿ ಮೋದಿ ಅವರ ವಿರುದ್ಧ ಪ್ರಚಾರ ನಡೆಸ್ದೆಿ. ಅವರ ಬಗ್ಗೆ ಅತ್ಯಂತ ಕಟುವಾಗಿ ಮಾತನಾಡ್ದೆಿ. ಅವರು ಅಧಿಕಾರಕ್ಕೆ ಬಂದರೆ ಲೋಕಸಭೆ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಘೋಷಣೆ ಮಾಡ್ದೆಿ. ಬಳಿಕ ಅವರು ಗೆದ್ದ ನಂತರ ನಾನು ನಿಜವಾಗಿಯೂ ಲೋಕಸಭೆ ಸ್ಥಾನಕ್ಕೆ ರಾಜೀನಾಮೆ ಕೊಡಲು ಮುಂದಾದೆ. ಆದರೆ, ಮೋದಿ ಅವರು ಹಾಗೆ ಮಾಡಬೇಡಿ ಎಂದು ತಡೆದರು. ನಾನು ಅವತ್ತಿನ ಅವರ ನಡಳಿವಳಿಕೆಯಿಂದ ಪ್ರಭಾವಿತನಾದೆ ಎಂದು ದೇವೇಗೌಡರು ಹೇಳಿದ್ದಾರೆ.

ಆ ಘಟನೆ ನಡೆದ ನಂತರ ನಾನು ಅವರ ಮೈತ್ರಿಯಲ್ಲಿ ಇದ್ದೇನೆ. ರಾಷ್ಟ್ರಕ್ಕೆ ನರೇಂದ್ರ ಮೋದಿ ಅವರು ಸದೃಢ ನಾಯಕತ್ವ ನೀಡಿದ್ದಾರೆ. ಜನರು ಕೂಡ ಅವರ ಮೇಲೆ ಅಪರಿಮಿತ ವಿಶ್ವಾಸ ಇರಿಸಿ ಸತತವಾಗಿ ಆಯ್ಕೆ ಮಾಡುತ್ತಾ ಬರುತ್ತಿದ್ದಾರೆ. ಇದು ಅವರ ಜನಪ್ರಿಯತೆಗೆ ಸಾಕ್ಷಿಯಾಗಿದೆ ಎಂದು ಅವರು ತಿಳಿಸಿದ್ದಾರೆ.

RELATED ARTICLES

Latest News