ಬೆಂಗಳೂರು,ಡಿ.18- ರಾಜ್ಯದ ವಿವಿಧ ನಿಗಮಗಳಿಗೆ ನೇಮಕಾತಿ ಮಾಡುವ ಪಟ್ಟಿಯನ್ನು ಅಂತಿಮಗೊಳಿಸಿಕೊಂಡೇ ದೆಹಲಿಯಿಂದ ವಾಪಸ್ಸಾಗುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಗಮ ಮಂಡಳಿ ನೇಮಕ ವಿಚಾರವಾಗಿ ಈಗಾಗಲೇ ಸಭೆ ಮಾಡಿ ಪಟ್ಟಿಯನ್ನು ಹೈಕಮಾಂಡ್ಗೆ ಕಳುಹಿಸಿಕೊಟ್ಟಿದ್ದೇವೆ. ಈ ಮಧ್ಯೆ ಬೇರೆ ಬೇರೆ ರಾಜ್ಯಗಳ ವಿಧಾನಸಭೆ ಚುನಾವಣೆಗಳ ಕಾರಣ ಅದು ಅಂತಿಮವಾಗಿಲ್ಲ ಎಂದು ತಿಳಿಸಿದರು.
ಪಾತಕಿ ದಾವೂದ್ ಇಬ್ರಾಹಿಂಗೆ ವಿಷಪ್ರಾಶನ, ಆಸ್ಪತ್ರೆಗೆ ದಾಖಲು
ನಾನು ಹಾಗೂ ಮುಖ್ಯಮಂತ್ರಿಗಳು ದೆಹಲಿಗೆ ತೆರಳುತ್ತಿದ್ದು, ನಿಗಮ ಮಂಡಳಿ ನೇಮಕ ಪಟ್ಟಿ ಅಂತಿಮ ಮಾಡಿಸಿಕೊಂಡು ಬರುತ್ತೇವೆ ಎಂದು ಸ್ಪಷ್ಟಪಡಿಸಿದರು. ಮುಖ್ಯಮಂತ್ರಿಗಳ ಭೇಟಿಗೆ ಪ್ರಧಾನಮಂತ್ರಿಗಳು ಸಮಯಾವಕಾಶ ನೀಡಿದ್ದಾರಂತಲ್ಲ ಎಂದು ಕೇಳಿದಾಗ, ಅವರು ಹೋಗಿ ಭೇಟಿ ಮಾಡುತ್ತಾರೆ ಎಂದು ತಿಳಿಸಿದರು. ಇದೇ 21ಕ್ಕೆ ಸಿಡಬ್ಲ್ಯೂಸಿ ಸಭೆ ಬಗ್ಗೆ ಕೇಳಿದಾಗ, ಇಲ್ಲೂ ಇದೆ, ಹಾಗೂ ನಾಗ್ಪುರದಲ್ಲೂ ಸಭೆ ಇದೆ ಎಂದು ತಿಳಿಸಿದರು.