Wednesday, December 3, 2025
Homeರಾಜ್ಯಸ್ಮಾರ್ಟ್ ಮೀಟರ್ ಅಕ್ರವು ಆರೋಪ ವಜಾ : ಇಂಧನ ಸಚಿವ ಕೆ.ಜೆ. ಜಾರ್ಜ್‌ ನಿರಾಳ

ಸ್ಮಾರ್ಟ್ ಮೀಟರ್ ಅಕ್ರವು ಆರೋಪ ವಜಾ : ಇಂಧನ ಸಚಿವ ಕೆ.ಜೆ. ಜಾರ್ಜ್‌ ನಿರಾಳ

Smart meter fraud charges dismissed: Energy Minister K.J George relieved

ಬೆಂಗಳೂರು,ಡಿ.2-ರಾಜ್ಯದಲ್ಲಿ ಸಾರ್ಟ್‌ ಮೀಟರ್‌ ಅಳವಡಿಕೆಗೆ ಸಂಬಂಧಿಸಿದ ಟೆಂಡರ್‌ನಲ್ಲಿ ಅಕ್ರಮ ನಡೆದಿರುವುದಕ್ಕೆ ಸಂಬಂಧಿಸಿದಂತೆ ಇಂಧನ ಸಚಿವ ಕೆ.ಜೆ.ಜಾರ್ಜ್‌ ಸೇರಿದಂತೆ ಅಧಿಕಾರಿಗಳ ವಿರುದ್ಧ ಬಿಜೆಪಿ ನಾಯಕರು ಹೂಡಿದ್ದ ಖಾಸಗಿ ದೂರನ್ನು ಕರ್ನಾಟಕ ಹೈಕೋರ್ಟ್‌ ವಜಾಗೊಳಿಸಿದೆ.

ಇದರಿಂದ ಸಾವಿರಾರೂ ಕೋಟಿ ಅಕ್ರಮದ ಆರೋಪ ಮಾಡಿದ್ದ ಬಿಜೆಪಿ ನಾಯಕರಿಗೆ ಮುಖಭಂಗವಾಗಿದ್ದು, ಸಚಿವ ಜಾರ್ಜ್‌ ನಿರಾಳರಾಗಿದ್ದಾರೆ.ಬಿಜೆಪಿ ನಾಯಕರು ಸಲ್ಲಿಸಿದ್ದ ಈ ಪ್ರಕರಣದಲ್ಲಿ ನ್ಯಾಯಮೂರ್ತಿ ಎಂ.ಐ. ಅರುಣ್‌ ಅವರಿದ್ದ ಹೈಕೋರ್ಟ್‌ ಪೀಠವು, ಸಚಿವ ಕೆ.ಜೆ.ಜಾರ್ಜ್‌ ವಿರುದ್ಧದ ಖಾಸಗಿ ದೂರನ್ನು ರದ್ದುಪಡಿಸಿ ಆದೇಶ ಹೊರಡಿಸಿದೆ. ಜಾರ್ಜ್‌ ಅವರ ಜೊತೆಗೆ ಇಂಧನ ಇಲಾಖೆಯ ಗೌರವ್‌ ಗುಪ್ತ, ಬೆಸ್ಕಾಂನ ಮಹಾಂತೇಶ ಬೀಳಗಿ ಹಾಗೂ ಹೆಚ್‌.ಜೆ. ರಮೇಶ್‌ ವಿರುದ್ಧದ ಪ್ರಕರಣಗಳನ್ನೂ ಹೈಕೋರ್ಟ್‌ ರದ್ದುಪಡಿಸಿದೆ.

ಕ್ರಿಮಿನಲ್‌ ಅರ್ಜಿಗಳನ್ನು ತಿರಸ್ಕರಿಸಲಾಗಿದ್ದು, ವಿಚಾರಣಾಧೀನ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕ್ರಿಯೆಯನ್ನು ವಜಾಗೊಳಿಸಲಾಗಿದೆ. ಮೂರನೇ ಪ್ರತಿವಾದಿಯಾಗಿದ್ದ ಐಎಎಸ್‌‍ ಅಧಿಕಾರಿ ಮಹಾಂತೇಶ್‌ ಬೀಳಗಿ ಈಚೆಗೆ ರಸ್ತೆ ಅಪಘಾತದಲ್ಲಿ ನಿಧನರಾದ ಹಿನ್ನೆಲೆಯಲ್ಲಿ ಅವರ ವಿರುದ್ಧದ ಪ್ರಕರಣ ಕೈಬಿಡಲಾಗಿದೆ ಎಂದು ನ್ಯಾಯಾಲಯ ಆದೇಶಿಸಿತು.

ಅರ್ಜಿದಾರರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಸಿ.ವಿ.ನಾಗೇಶ್‌ ಅವರು ಪ್ರಕರಣದಲ್ಲಿ ಆರೋಪಿಗಳಾಗಿರುವವರು ಮಂತ್ರಿಯೂ ಸೇರಿದಂತೆ ಸಾರ್ವಜನಿಕ ಸೇವಕರಾಗಿದ್ದಾರೆ. ಪ್ರಾಸಿಕ್ಯೂಷನ್‌ ಆರಂಭಿಸಿ, ಸಂಜ್ಞೇ ಪರಿಗಣಿಸಿದಾಗ ಸಾರ್ವಜನಿಕ ಸೇವಕರಿಗೆ ಎರಡು ಹಂತದಲ್ಲಿ ರಕ್ಷಣೆ ಇರುತ್ತದೆ. ಸಾರ್ವಜನಿಕ ಸೇವಕರಿಗೆ ಭ್ರಷ್ಟಾಚಾರ ಪ್ರತಿಬಂಧಕ ಕಾಯಿದೆ ಸೆಕ್ಷನ್‌ 17ರ ಡಿ ರಕ್ಷಣೆ ಇರುತ್ತದೆ. ಈ ಆಕ್ಷೇಪಾರ್ಹವಾದ ಆದೇಶವನ್ನು ಮಾಡುವಂತೆಯೇ ಇಲ್ಲ.

ನಾವು ನಿರ್ಧಾರ ಕೈಗೊಂಡಿರುವುದರಿಂದ ಅಪರಾಧ ಆರಂಭವಾಗಿದೆ ಎಂದು ಆರೋಪಿಸಲಾಗಿದೆ. ಆದರೆ ಪಿಸಿ ಕಾಯಿದೆ ಸೆಕ್ಷನ್‌ 17ರಡಿ ಪೂರ್ವಾನುಮತಿ ಇಲ್ಲದೇ ಸಾರ್ವಜನಿಕ ಸೇವಕರ ವಿರುದ್ಧ ಯಾವುದೇ ಪೊಲೀಸ್‌‍ ಅಧಿಕಾರಿ ತನಿಖೆ ನಡೆಸುವಂತಿಲ್ಲ ಎಂದು ಕಾಯಿದೆ ಹೇಳುತ್ತದೆ. ಇಲ್ಲಿ ವಿಚಾರಣಾಧೀನ ನ್ಯಾಯಾಲಯವು ಅವಕಾಶ ಇಲ್ಲದಿದ್ದರೂ ವರದಿ ಕೇಳಿದೆ ಎಂದಿದ್ದರು.

ದೂರುದಾರರಾದ ಬಿಜೆಪಿ ನಾಯಕರ ಪರ ಹಿರಿಯ ವಕೀಲೆ ಲಕ್ಷಿ ಐಯ್ಯಂಗಾರ್‌ ಅವರು ಲೋಕಾಯುಕ್ತ ಪೊಲೀಸ್‌‍ ವರಿಷ್ಠಾಧಿಕಾರಿ ವರದಿ ನೀಡಿದ ಬಳಿಕ ಮ್ಯಾಜಿಸ್ಟ್ರೇಟ್‌ ಅವರು ಮೇಲಿನ ಶ್ರೇಣಿಯ ಅಧಿಕಾರಿಗಳಿಂದ ವರದಿ ಕೇಳುತ್ತಾರೆ. ಇಲ್ಲಿ ವಿಚಾರಣಾಧೀನ ನ್ಯಾಯಾಲಯವು ವರದಿ ನೀಡುವಂತೆ ಆದೇಶಿಸಿದೆಯಷ್ಟೇ. ಇದು ಇನ್ನೂ ಪ್ರಾಥಮಿಕ ಹಂತದ ಪ್ರಕ್ರಿಯೆಯಾಗಿದೆ. ಹೀಗಾಗಿ, ತಡೆ ನೀಡಬಾರದು ಎಂದಿದ್ದರು.

ಲೋಕಾಯುಕ್ತ ಪರ ವಕೀಲ ವೆಂಕಟೇಶ್‌ ಅರಬಟ್ಟಿ ಅವರು ದೇಶದಲ್ಲಿ 97 ಮತ್ತು ಅದಕ್ಕೂ ಹೆಚ್ಚು ಅರ್ಹ ಟೆಂಡರ್‌ದಾರರು ಸಾರ್ಟ್‌ ಮೀಟರ್‌ ಅಳವಡಿಕೆ ಕೆಲಸ ಮಾಡುತ್ತಾರೆ. ಇವರೆಲ್ಲರೂ ಬೇರೆಬೇರೆ ರಾಜ್ಯಗಳಲ್ಲಿ ಕೆಲಸ ಮಾಡುತ್ತಾರೆ. ಅವರೂ ಈ ಟೆಂಡರ್‌ ಪ್ರಕ್ರಿಯೆಯಲ್ಲಿ ಭಾಗವಹಿಸಲು ಅರ್ಹರಾಗಿದ್ದರು. ಇದರ ಸಂಬಂಧಿತ ಮಾಹಿತಿಯುಬೆಸ್ಕಾಂ ವೆಬ್‌ಸೈಟ್‌ನಲ್ಲಿ ಲಭ್ಯವಿದೆ. ಇದರಲ್ಲಿ ಮುಚ್ಚುಮರೆ ಏನೂ ಇಲ್ಲ. ಐವರು ಟೆಂಡರ್ದಾರರ ಜೊತೆ ಚರ್ಚೆ ನಡೆದಿದೆ. ಪುನರ್‌ ಬಿಡ್‌ ಸಹ ಐವರ ನಡುವೆ ನಡೆದಿದೆ. ಎಲ್ಲರೂ ಕರ್ನಾಟಕದವರೇ
ಇದ್ದರು. ಈ ಪೈಕಿ ಟೆಂಡರ್‌ ಐದು ಷರತ್ತುಗಳನ್ನು ಪೂರೈಸಲು ಮೂವರು ಬಿಡ್‌ದಾರರು ವಿಫಲವಾದ್ದರಿಂದ ಅನರ್ಹರಾಗಿದ್ದರು ಎಂದು ವರದಿಯಲ್ಲಿ ಹೇಳಲಾಗಿದೆ ಎಂದು ಅದನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ಪ್ರಕರಣದ ಹಿನ್ನಲೆ
ಸಾರ್ಟ್‌ ಮೀಟರ್‌ ವಿಚಾರದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಇಂಧನ ಇಲಾಖೆ ವಿರುದ್ಧ ಬಿಜೆಪಿ ಸಮರ ಸಾರಿತ್ತು. ಸಾರ್ಟ್‌ ಮೀಟರ್‌ ಖರೀದಿಯಲ್ಲಿ ಭಾರೀ ಅವ್ಯವಹಾರ ನಡೆದಿದೆ. ಇತರೆ ಕಂಪನಿಗಳನ್ನು ಕೈಬಿಟ್ಟು ದಾವಣಗೆರೆಯ ರಾಜಶ್ರೀ ಎಲೆಕ್ಟ್ರಿಕಲ್‌್ಸಗೆ ಗುತ್ತಿಗೆ ನೀಡಲಾಗಿದೆ. ಈ ಕಂಪನಿಗಾಗಿ ಇತರೆ ಕಂಪನಿಗಳು ಟೆಂಡರ್‌ನಲ್ಲಿ ಭಾಗವಹಿಸದಂತೆ ನೋಡಿಕೊಳ್ಳಲಾಗಿದೆ ಎಂದು ಬಿಜೆಪಿ ಆರೋಪಿಸಿತ್ತು. ಬೇರೆ ರಾಜ್ಯಗಳಲ್ಲಿ 900 ರೂ.ಗೆ ಸಿಗುವ ಸಾರ್ಟ್‌ ಮೀಟರ್‌ ಅನ್ನು 5 ಸಾವಿರದಿಂದ 10 ಸಾವಿರ ರೂ.ಗೆ ಗ್ರಾಹಕರಿಗೆ ನೀಡಲಾಗುತ್ತಿದೆ. ಹೀಗಾಗಿ ಇದೊಂದು ದೊಡ್ಡ ಹಗರಣ ಎಂದು ಆರೋಪಿಸಲಾಗಿತ್ತು.

ಸಾರ್ಟ್‌ ಮೀಟರ್‌ ಟೆಂಡರ್‌ ಸುಮಾರ್‌ 10 ಸಾವಿರ ಕೋಟಿ ರೂ. ಮೊತ್ತದ್ದಾಗಿರುವ ಕಾರಣ ಜಾಗತಿಕ ಟೆಂಡರ್‌ ಕರೆಯಬೇಕಿತ್ತು. ಆದರೆ ಕೇವಲ 354 ಕೋಟಿ ರೂ. ವ್ಯವಹಾರ ನಡೆಸುವ ರಾಜಶ್ರೀ ಎಲೆಕ್ಟ್ರಿಕಲ್‌್ಸಗೆ ಟೆಂಡರ್‌ ನೀಡಲಾಗಿದೆ. 10 ವರ್ಷಕ್ಕೆ 5,296 ಕೋಟಿ ರೂ.ಗೆ ನೀಡಲಾಗಿರುವ ಟೆಂಡರ್‌ ಅನ್ನು ಬೇಕೆಂದೇ 997 ಕೋಟಿ ರೂ. ಟೆಂಡರ್‌ ಎಂಬಂತೆ ಬಿಂಬಿಸಲಾಗಿದೆ.

ಬೆಸ್ಕಾಂ ವ್ಯಾಪ್ತಿಗೆ ಮಾತ್ರ ಈ ಟೆಂಡರ್‌ ಅನ್ವಯವಾದರೂ ಇತರೆ ಎಸ್ಕಾಂಗಳಿಗೂ ಇದೇ ಸಾರ್ಟ್‌ ಮೀಟರ್‌ ಖರೀದಿಸಿರುವಂತೆ ಸೂಚಿಸಲಾಗಿದೆ. ಇದು ಸಂಪೂರ್ಣ ಕಾನೂನು ಬಾಹಿರ. ಕೇಂದ್ರದ ಆರ್ಡಿಎಸ್‌‍ಎಸ್‌‍ ಯೋಜನೆಯಡಿ 900 ರೂ.ಗೆ ಸಿಗುವ ಮೀಟರ್‌ ಅನ್ನು 5 ಸಾವಿರದಿಂದ 8,800 ರೂ.ಗೆ ಗ್ರಾಹಕರು ಖರೀದಿಸಬೇಕಾಗಿದೆ. ಇದಕ್ಕೆಲ್ಲಾ ಬೆಸ್ಕಾಂ ಅಧ್ಯಕ್ಷ ಹಾಗೂ ಇಂಧನ ಸಚಿವ ಕೆ.ಜೆ.ಜಾರ್ಜ್‌ ಹಾಗೂ ಇತರೆ ಅಧಿಕಾರಿಗಳೇ ಹೊಣೆ ಎಂದು ಬಿಜೆಪಿ ಆರೋಪ ಮಾಡಿತ್ತು.

RELATED ARTICLES

Latest News