ಬೆಂಗಳೂರು,ಡಿ.19- ಮನೆಗಳ ಮುಂದೆ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಮೂವರನ್ನು ಶೇಷಾದ್ರಿಪುರಂ ಠಾಣೆ ಪೊಲೀಸರು ಬಂಧಿಸಿ 25 ಲಕ್ಷ ರೂ. ಮೌಲ್ಯದ 20 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಮಂಡ್ಯದ ಅವಿನಾಶ್, ಹಾಸನದ ಶಶಿಕುಮಾರ್ ಮತ್ತು ರಾಹುಲ್ ಬಂಧಿತ ಆರೋಪಿಗಳು.
ಶೇಷಾದ್ರಿಪುರಂ ಪೊಲೀಸ್ ಠಾಣೆ ಸಿಬ್ಬಂದಿ ಗಸ್ತಿನಲ್ಲಿದ್ದಾಗ ಇಬ್ಬರು ವ್ಯಕ್ತಿಗಳು ನಂಬರ್ ಪ್ಲೇಟ್ ಇಲ್ಲದ ಬಜಾಜ್ ಪಲ್ಸರ್ ದ್ವಿಚಕ್ರ ವಾಹನವನ್ನು ನಿಲ್ಲಿಸಿಕೊಂಡು ಅನುಮಾನಸ್ಪದವಾಗಿ ವರ್ತಿಸುತ್ತಿದ್ದರು. ಇದನ್ನು ಗಮನಿಸಿದ ಗಸ್ತಿನಲ್ಲಿದ್ದ ಪೊಲೀಸರು ಆ ವ್ಯಕ್ತಿಗಳ ಬಳಿ ಹೋಗಿ ದ್ವಿಚಕ್ರ ವಾಹನದ ಸಮೇತ ಠಾಣೆಗೆ ಕರೆತಂದು ಸುದೀರ್ಘ ವಿಚಾರಣೆಗೊಳಪಡಿಸಿದಾಗ ಈ ಹಿಂದೆ ಕಳವು ಮಾಡಿದ 20 ದ್ವಿಚಕ್ರ ವಾಹನಗಳ ಬಗ್ಗೆ ಮಾಹಿತಿ ನೀಡಿದ್ದು, ಅವುಗಳನ್ನು ವಶಕ್ಕೆ ಪಡೆಯಲಾಗಿದ್ದು, ಇವುಗ¼ ಒಟ್ಟು ಬೆಲೆ 25 ಲಕ್ಷ ರೂ.ಗಳೆಂದು ಅಂದಾಜಿಸಲಾಗಿದೆ.
ಬಂಧಿತ ಆರೋಪಿಗಳಿಬ್ಬರು ಮತ್ತೊಬ್ಬ ಆರೋಪಿಯೊಂದಿಗೆ ಸೇರಿ ರಾಜ್ಯದಲ್ಲಿನ ವಿವಿಧ ಜಿಲ್ಲೆಗಳಾದ ಬೆಂಗಳೂರು ನಗರ, ಚಿಕ್ಕಮಗಳೂರು, ಮಂಡ್ಯ, ದಾವಣಗೆರೆ ಮತ್ತು ಹಾಸನ ಜಿಲ್ಲೆಗಳಲ್ಲಿ ಮನೆಗಳ ಮುಂದೆ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡಿರುವುದು ತನಿಖೆಯಿಂದ ತಿಳಿದುಬಂದಿದೆ.
ತೆಲಂಗಾಣದ BRS ನಾಯಕರಿಗೆ ಟಾಂಗ್ ಕೊಟ್ಟ ಸಿಎಂ ಸಿದ್ದರಾಮಯ್ಯ
ಈ ಪ್ರಕರಣದಿಂದ ರಾಜ್ಯಾದ್ಯಂತ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ಒಟ್ಟು 20 ದ್ವಿಚಕ್ರ ವಾಹನ ಕಳವು ಪ್ರಕರಣಗಳು ಪತ್ತೆಯಾಗಿರುತ್ತವೆ. ಕೇಂದ್ರ ವಿಭಾಗದ ಉಪಪೊಲೀಸ್ ಆಯುಕ್ತ ಶೇಖರ್ ಅವರ ಮಾರ್ಗದರ್ಶನದಲ್ಲಿ ಶೇಷಾದ್ರಿಪುರಂ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಪ್ರಕಾಶ್ ಅವರ ನೇತೃತ್ವದಲ್ಲಿ ಇನ್‍ಸ್ಪೆಕ್ಟರ್ ಮತ್ತು ಸಿಬ್ಬಂದಿ ತಂಡ ಪ್ರಕರಣವನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದೆ.