Saturday, May 18, 2024
Homeರಾಜ್ಯಕ್ರಿಸ್‍ಮಸ್ ಪ್ರಯುಕ್ತ KSRTCಯಿಂದ 1000 ಹೆಚ್ಚುವರಿ ಬಸ್ಸುಗಳ ಸೇವೆ

ಕ್ರಿಸ್‍ಮಸ್ ಪ್ರಯುಕ್ತ KSRTCಯಿಂದ 1000 ಹೆಚ್ಚುವರಿ ಬಸ್ಸುಗಳ ಸೇವೆ

ಬೆಂಗಳೂರು, ಡಿ. 20- ವಾರಾಂತ್ಯದ ರಜೆ ಹಾಗೂ ಕ್ರಿಸ್‍ಮಸ್ ಹಬ್ಬದ ರಜೆಯ ಹಿನ್ನೆಲೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಒಂದು ಸಾವಿರ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಲಿದೆ. ಡಿ.23ರ ನಾಲ್ಕನೇ ಶನಿವಾರ, ಡಿ.24ರ ಭಾನುವಾರ ಹಾಗೂ ಡಿ.25ರಂದು ಕ್ರಿಸ್‍ಮಸ್ ಹಬ್ಬದ ರಜೆ ಇದೆ. ಈ ಮೂರು ದಿನಗಳಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುವುದರಿಂದ ಡಿ.22ರಿಂದ ಡಿ.24ರವರೆಗೆ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಬಸ್ ಸೌಲಭ್ಯ ಕಲ್ಪಿಸುವುದಾಗಿ ಕೆಎಸ್ಆರ್‌ಟಿಸಿ ಪ್ರಕಟಣೆ ತಿಳಿಸಿದೆ.

ಬೆಂಗಳೂರಿನಿಂದ 1000 ಹೆಚ್ಚುವರಿ ಬಸ್‍ಗಳ ವಿಶೇಷ ಸಾರಿಗೆ ವ್ಯವಸ್ಥೆಯನ್ನು ರಾಜ್ಯದ ಪ್ರಮುಖ ಸ್ಥಳಗಳು ಹಾಗೂ ಅಂತರರಾಜ್ಯದ ವಿವಿಧ ಸ್ಥಳಗಳಿಗೆ ಕಲ್ಪಿಸಿದೆ. ಅದೇ ರೀತಿ ಪ್ರಯಾಣಿಕರು ಮರಳಿ ಬೆಂಗಳೂರಿಗೆ ಬರಲು ಅನುಕೂಲವಾಗುವಂತೆ ಡಿ.25ರಂದು ವಿಶೇಷ ಬಸ್‍ಗಳ ಸೌಲಭ್ಯವಿರಲಿದೆ ಎಂದು ಹೇಳಿದೆ.

ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆ ಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗೀರಿ, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ವಿಶೇಷ ಬಸ್ ಸೌಲಭ್ಯ ಕಲ್ಪಿಸಲಾಗುತ್ತದೆ.

ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆಗೆ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಲಾಗಿದೆ. ತಮಿಳುನಾಡು ಮತ್ತು ಕೇರಳ ಕಡೆಗೆ ಅಂದರೆ ಮಧುರೈ, ಕುಂಭಕೋಣಂ, ಚೆನ್ನೈ, ಕೊಯಮತ್ತೂರ್, ತಿರುಚಿ, ಪಾಲಕ್ಕಾಡ್, ತ್ರಿಶೂರ್, ಎರ್ನಾಕುಲಂ, ಕೋಯಿಕೋಡ್, ಕ್ಯಾಲಿಕಟ್ ಮುಂತಾದ ಸ್ಥಳಗಳಿಗೆ ಹೋಗುವ ಪ್ರತಿಷ್ಠಿತ ಸಾರಿಗೆಗಳನ್ನು ಶಾಂತಿನಗರದಲ್ಲಿನ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದಿಂದ ಕಾರ್ಯಾಚರಣೆ ಮಾಡಲಾಗುವುದು ಎಂದು ಕೆಎಸ್‍ಆರ್‍ಟಿಸಿ ತಿಳಿಸಿದೆ.

ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯವÀನ್ನು ಕಲ್ಪಿಸಲಾಗಿದೆ. ಇ-ಟಿಕೇಟ್ ಬುಕಿಂಗ್‍ನ್ನು www.ksrtc.karnataka.gov.in ವೆಬ್ ಸೈಟ್ ಮುಖಾಂತರ ಮಾಡಬಹುದಾಗಿದೆ. ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೇಟು ಕಾಯ್ದಿರಿಸಿದಲ್ಲಿ ಶೇಕಡ 5 ರಷ್ಟು ಹಾಗೂ ಹೋಗುವ ಮತ್ತು ಬರುವ ಪ್ರಯಾಣದ ಟಿಕೇಟ್‍ನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವ ಪ್ರಯಾಣ ದರದಲ್ಲಿ ಶೇಕಡ 10 ರಷ್ಟು ರಿಯಾಯಿತಿ ನೀಡಲಾಗುವುದು.

ಅಲ್ಲದೇ, ನಿಗಮದ ಕಾರ್ಯಾಚರಣೆ ವ್ಯಾಪ್ತಿಯಲ್ಲಿನ ಎಲ್ಲಾ ತಾಲ್ಲೂಕು, ಜಿಲ್ಲಾ ಬಸ್ ನಿಲ್ದಾಣಗಳಿಂದ ಸಂಚಾರ ಒತ್ತಡಕ್ಕನುಗುಣವಾಗಿ ವಿಶೇಷ ಸಾರಿಗೆಗಳ ಕಾರ್ಯಾಚರಣೆ ಮಾಡಲಾಗುವುದು ಎಂದು ಹೇಳಿದೆ.

RELATED ARTICLES

Latest News