ನವದೆಹಲಿ, ಏ.26 – ವಾಷಿಂಗ್ಟನ್‌ನಲ್ಲಿ ನಡೆದ ಆತಂಕಕಾರಿ ಘಟನೆ ಬಳಿಕ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಪ್ರಥಮ ಮಹಿಳೆ ಮೆಲಾನಿಯಾ ಟ್ರಂಪ್ ಹಾಗೂ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಸುರಕ್ಷಿತ ವಾಗಿದ್ದಾರೆ ಎಂಬ ಮಾಹಿತಿ ತಿಳಿದು ತಾನು ನಿರಾಳನಾದೆ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ಹೇಳಿದ್ದಾರೆ.
ಪ್ರಜಾಸತ್ತಾತಕ ವ್ಯವಸ್ಥೆಯಲ್ಲಿ ಹಿಂಸೆಗೆ ಯಾವುದೇ ಸ್ಥಳವಿಲ್ಲ, ಅದನ್ನು ಖಂಡಿಸಬೇಕು ಎಂದು ಮೋದಿ ಒತ್ತಿ ಹೇಳಿದ್ದಾರೆ.ವಾಷಿಂಗ್ಟನ್ ಡಿಸಿ ಹೋಟೆಲ್‌ನಲ್ಲಿ ನಡೆದ ಗುಂಡಿನ ದಾಳಿ ಘಟನೆ ಬಳಿಕ ಅಧ್ಯಕ್ಷ ಟ್ರಂಪ್, ಪ್ರಥಮ ಮಹಿಳೆ ಮತ್ತು ಉಪಾಧ್ಯಕ್ಷರು ಸುರಕ್ಷಿತವಾಗಿದ್ದಾರೆ ಎಂಬುದನ್ನು ತಿಳಿದು ಸಂತೋಷವಾಗಿದೆ. ಅವರ ಮುಂದಿನ ಸುರಕ್ಷತೆ ಮತ್ತು ಕಲ್ಯಾಣಕ್ಕಾಗಿ ಶುಭಾಶಯಗಳು.
ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಹಿಂಸೆಗೆ ಸ್ಥಳವಿಲ್ಲ, ಅದನ್ನು ಸ್ಪಷ್ಟವಾಗಿ ಖಂಡಿಸಬೇಕು,ಎಂದು ಮೋದಿ ಎಕ್ಸ್ ನಲ್ಲಿ ಪ್ರಕಟಿಸಿದ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.
