ರಾಯಚೂರು,ಏ.29- ಹೈಕಮಾಂಡ್ ನಮ್ಮ ತಂದೆ ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ಇಳಿಸಿದರೆ ದಲಿತ ಸಿಎಂ ವಿಚಾರ ಮತ್ತೆ ಮುನ್ನೆಲೆಗೆ ಬರುವುದು ಸಹಜ ಎಂದು ಎಂಎಲ್ಸಿ ಡಾ.ಯತೀಂದ್ರ ಹೇಳಿದರು.
ಮಾಧ್ಯಮಗಳ ಜೊತೆ ಇಲ್ಲಿ ಮಾತನಾಡಿದ ಅವರು ಡಿಸಿಎಂ ಡಿ.ಕೆ ಶಿವಕುಮಾರ್ ಅವರು ತಮ ಹುಟ್ಟುಹಬ್ಬಕ್ಕೆ ಹೈಕಮಾಂಡ್ನಿಂದ ಗುಡ್ ನ್ಯೂಸ್ ಸಿಗಲಿದೆ ಎಂಬ ವಿಚಾರಕ್ಕೆ ಅವರು ಪ್ರತಿಕ್ರಿಯಿಸಿದರು. ಹೈಕಮಾಂಡ್ ಏನು ತೀರ್ಮಾನ ತೆಗೆದುಕೊಳ್ಳುತ್ತದೆಯೋ ಅದಕ್ಕೆ ಎಲ್ಲರೂ ಬದ್ಧರಾಗಿರುತ್ತೇವೆ ಎಂದರು.
ಮೇ 15 ರೊಳಗೆ ಸಿಎಂ ಬದಲಾವಣೆ ಹಾಗೂ ಸಂಪುಟ ವಿಸ್ತರಣೆ ವಿಚಾರವಾಗಿ ನವೆಂಬರ್ನಿಂದಲೂ ಹೇಳುತ್ತಿದ್ದಾರೆ. ನಾನೂ ಅದಕ್ಕೆಲ್ಲ ಉತ್ತರ ಕೊಟ್ಟುಕೊಂಡು ಬರುತ್ತಿದ್ದೇನೆ. ಈ ವಿಚಾರದಲ್ಲಿ ಏನು ಹೇಳಬೇಕೋ ಗೊತ್ತಿಲ್ಲ ಎಂದರು.
ಈಗಾಗಲೇ ಎಲ್ಲಾ ಹೇಳಿ ಆಗಿದೆ. ನಾನು ಈ ವಿಷಯವಾಗಿ ಏನು ಮಾತನಾಡುವುದಿಲ್ಲ. ಏನೇ ಇದ್ದರೂ ಸಿಎಂ ಹಾಗೂ ಹೈಕಮಾಂಡ್ನ್ನೇ ಕೇಳಬೇಕು ಎಂದು ಹೇಳಿರುವುದು ಅಚ್ಚರಿ ಮೂಡಿಸಿದೆ.
