Wednesday, April 29, 2026
Homeರಾಜ್ಯಊರಿಗೆ ಕಳುಹಿಸಲಿಲ್ಲವೆಂದು ಸಬ್‌ ಇನ್‌ಸ್ಪೆಕ್ಟರ್‌ ಪತ್ನಿ ಆತ್ಮಹತ್ಯೆ

ಊರಿಗೆ ಕಳುಹಿಸಲಿಲ್ಲವೆಂದು ಸಬ್‌ ಇನ್‌ಸ್ಪೆಕ್ಟರ್‌ ಪತ್ನಿ ಆತ್ಮಹತ್ಯೆ

Sub-inspector's wife commits suicide after not being sent home

ಚಿಕ್ಕಮಗಳೂರು,ಏ.29- ಊರಿಗೆ ಕಳುಹಿಸಲಿಲ್ಲವೆಂಬ ಕಾರಣಕ್ಕೆ ಸಬ್‌ ಇನ್‌ಸ್ಪೆಕ್ಟರ್‌ ಅವರ ಪತ್ನಿ ರಾತ್ರಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತಹತ್ಯೆ ಮಾಡಿ ಕೊಂಡಿರುವ ಘಟನೆ ಬೀರೂರು ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಬೀರೂರು ಪೊಲೀಸ್‌‍ ಠಾಣೆಯ ಸಬ್‌ ಇನ್‌ಸ್ಪೆ ಕ್ಟರ್‌ ತಿಪ್ಪೇಶ್‌ ಎಂಬುವವರ ಪತ್ನಿ ಪದ್ಮ (34) ಆತಹತ್ಯೆಗೆ ಶರಣಾದವರು.

ದಂಪತಿ ಪ್ರೀತಿಸಿ ಮದುವೆಯಾಗಿದ್ದು, ಇವರಿಗೆ ಇಬ್ಬರು ಚಿಕ್ಕ ಮಕ್ಕಳಿದ್ದಾರೆ. ಮಕ್ಕಳಿಗೆ ಬೇಸಿಗೆ ರಜೆ ಇರುವುದರಿಂದ ಊರಿಗೆ ಕಳುಹಿಸುವ ವಿಚಾರದಲ್ಲಿ ಗಂಡ-ಹೆಂಡತಿ ನಡುವೆ ಮನಸ್ತಾಪವಾಗಿದೆ. ತನ್ನನ್ನು ಹಾಗೂ ಮಕ್ಕಳನ್ನು ಊರಿಗೆ ಕಳುಹಿಸಲಿಲ್ಲ
ಎಂಬ ಕಾರಣಕ್ಕೆ ಮನನೊಂದ ಪದ ದುಡುಕಿನ ನಿರ್ಧಾರ ತೆಗೆದುಕೊಂಡು ರಾತ್ರಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಹಿರಿಯ ಪೊಲೀಸ್‌‍ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೀರೂರು ಠಾಣೆ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿ, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

RELATED ARTICLES

Latest News