ಬೆಂಗಳೂರು,ಡಿ.23- ರಾಜ್ಯದಲ್ಲಿ ಹಿಜಾಬ್ ನಿಷೇಧ ಆಗಿಯೇ ಇಲ್ಲ. ಎಲ್ಲಿ ಡ್ರೆಸ್ ಕೋಡ್ ಇದೆ ಅಲ್ಲಿ ಮಾತ್ರ ನಿಷೇಧವಿದೆ. ಮಹಿಳೆಯರು ಎಲ್ಲಿ ಬೇಕು ಅಲ್ಲಿ ಹಾಕಿಕೊಂಡು ಓಡಾಡುತ್ತಿದ್ದಾರೆ. ಹಿಜಾಬ್ ನಿಷೇಧ ಆಗಿಯೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಸಿದ್ದರಾಮಯ್ಯನವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ ಮಾತನಾಡಿದ ಅವರು, 1984ರಲ್ಲಿ ಸಮಗ್ರ ಶಿಕ್ಷಣ ಕಾಯ್ದೆ ಅಡಿ ಡ್ರೆಸ್ ಕೊಡ್ ಮಾಡಲಾಗಿದ್ದು, ಅದನ್ನು ಹಿಂದೆ ಪಡೆಯುವ ಮಾತನಾಡಿದ್ದಾರೆ. ಈಗಾಗಲೇ ಕೊರ್ಟ್‍ನಲ್ಲಿ ಪ್ರಕರಣ ಇದೆ. ರಾಜಕೀಯ ಕಾರಣಕ್ಕೆ ಹಿಜಾಬ್ ಪ್ರಸ್ತಾಪ ಮಾಡಿದ್ದಾರೆ. ಇದನ್ನು ಖಂಡಿಸುತ್ತೇನೆ ಎಂದರು.
ಬೆಳಗಾವಿ ಅಧಿವೇಶನ ನಡೆಯುತ್ತಿರುವಾಗ ಹುಬ್ಬಳ್ಳಿಯಲ್ಲಿ ಅಲ್ಪ ಸಂಖ್ಯಾತರಿಗೆ 10 ಸಾವಿರ ಕೋಟಿ ಕೊಡುವುದಾಗಿ ಘೋಷಣೆ ಮಾಡಿದರು. ಅಭಿವೃದ್ಧಿಗೆ ಇವರ ಬಳಿ ಹಣ ಇಲ್ಲ. ಅವರ ಪಕ್ಷದ ಶಾಸಕರೆ ಬಹಿರಂಗವಾಗಿ ಹೇಳಿದ್ದಾರೆ. ಪತ್ರ ಕೂಡ ಬರೆದಿದ್ದಾರೆ.
ರಾಜ್ಯದಲ್ಲಿ ಬರ ಇದೆ. ಮಹಿಳೆಯರಿಗೆ ರಕ್ಷಣೆ ಇಲ್ಲ. ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ತೊಳೆಸುವ ಮಟ್ಟಕ್ಕೆ ಇಳಿದಿದೆ. ಬರ ಇದೆ ಇದೆಲ್ಲ ಮರೆತು ರಾಜದಯದ ಜನರ ದಾರಿ ತಪ್ಪಿಸಲು ಈ ರೀತಿಯ ಹೇಳಿಕೆ ಕೊಡುತ್ತಿದ್ದಾರೆ. ಐಟಿ ರೇಡ್ ಆಗಿ ಕಾಂಟ್ರಾಕ್ಟರ್ ಬಳಿ ಕೋಟ್ಯಂತರ ಹಣ ಸಿಕ್ಕಿತು ಆಗಲೂ ದಾರಿ ತಪ್ಪಿಸುವ ಕೆಲಸ ಮಾಡಿದರು. ಯಾವುದೇ ಅಭಿವೃದ್ದಿ ಮಾಡದ ಸರ್ಕಾರ ರಾಜ್ಯದಲ್ಲಿ ಬಂದಿದೆ ಎಂದು ದೂರಿದರು.
ಹಿಜಾಬ್ ವಿಚಾರದಲ್ಲಿ ಎಲ್ಲರಿಗೂ ಸ್ವಾತಂತ್ರ್ಯ ಸಿಗುವಂತೆ ನಿರ್ಧಾರ : ಸಚಿವ ಮಧು ಬಂಗಾರಪ್ಪ
ಶಾಲಾ ಮಕ್ಕಳಲ್ಲಿ ಒಡಕುಂಟು ಮಾಡುವ ಉದ್ದೇಶ ಇದರಲ್ಲಿದೆ. ಭವಿಷ್ಯದಲ್ಲಿ ಇದು ದೊಡ್ಡ ಮಟ್ಟದ ಪರಿಣಾಮ ಬೀರುತ್ತದೆ. ಮಕ್ಕಳಲ್ಲಿ ತಾವು ಯಾವ ಧರ್ಮಕ್ಕೆ ಸೇರಿದ್ದೇವೆ ಎಂದು ಬೀಜ ಬಿತ್ತುವ ಪ್ರಯತ್ನ ನಡೆಯುತ್ತಿದೆ. ಹಿಜಾಬ್ ವಿಚಾರದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಇರಾಕ್ ಇರಾನ್‍ನಲ್ಲಿ ಮಹಿಳೆಯರು ಸ್ವಾತಂತ್ರ್ಯ ಕ್ಕಾಗಿ ಹೋರಾಟ ಮಾಡುತ್ತಾರೆ. ಸುಪ್ರಿಂಕೋರ್ಟ್‍ನಲ್ಲಿ ಪ್ರಕರಣ ಇದ್ದಾಗ ಈ ಬಗ್ಗೆ ಹೇಳಿಕೆ ನೀಡುವ ಅಗತ್ಯ ಏನಿತ್ತು. ಕೋರ್ಟ್ ಈ ಬಗ್ಗೆ ಗಮನ ಹರಿಸುತ್ತದೆ ಎಂಬ ವಿಶ್ವಾಸವಿದೆ ಎಂದರು.
ಹಿಂದುಳಿದ ವರ್ಗದ ಆಯೋಗ ಮಾಡಿರುವುದು ಜಾತಿ ಗಣತಿಯೇ ಅಲ್ಲ. ಎಲ್ಲ ಸಮುದಾಯಗಳ ಶೈಕ್ಷಣಿಕ ಮತ್ತು ಆರ್ಥಿಕ ಪರಿಸ್ಥಿತಿ ಹೇಗಿದೆ ಎಂದು ಅಧ್ಯಯನ ಮಾಡಿದೆ. ರಾಜ್ಯ ಸರ್ಕಾರಕ್ಕೆ ಜಾತಿ ಗಣತಿ ಮಾಡುವ ಅಧಿಕಾರ ಇಲ್ಲ. ಬೇರೆ ರಾಜ್ಯಗಳ ಜಾತಿಗಣತಿಗಳ ಬಗ್ಗೆಯೂ ಸುಪ್ರೀಂ ಕೋರ್ಟ್‍ನಲ್ಲಿ ಚರ್ಚೆ ನಡೆಯುತ್ತಿದೆ ಎಂದು ಹೇಳಿದರು. ಈಗಿರುವ ಹಿಂದುಳಿದ ವರ್ಗದ ಅಧ್ಯಕ್ಷರು ಈಗಾಗಲೇ ಸಿದ್ಧವಾಗಿರುವ ವರದಿಯನ್ನು ಏಕೆ ಇಟ್ಟುಕೊಂಡಿದ್ದಾರೆ.
ನಾವೂ ಸಾಮಾಜಿಕ ನ್ಯಾಯದ ಪರವಾಗಿದ್ದೇವೆ. ಸಾಮಾಜಿಕ ನ್ಯಾಯ ಯಾವುದೇ ಒಂದು ಪಕ್ಷದ ಸ್ವತ್ತಲ್ಲ. ಅವರಿಗೆ ಎಲ್ಲರಿಗೂ ನ್ಯಾಯ ಕೊಡಿಸಬೇಕೆಂದು ಇದ್ದರೆ ಅಕೃತ ಜಾತಿ ಗಣತಿ ಮಾಡಲಿ. ನಾವು ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಹಿಂದುಳಿದ ವರ್ಗಗಳ ಅನೇಕ ಸಮುದಾಯಗಳಿಗೆ ನ್ಯಾಯ ಕೊಡಿಸಲು ಪ್ರಯತ್ನ ಮಾಡಿದ್ದೇವೆ. ಈ ವರದಿ ವೈಜ್ಞಾನಿಕವಾಗಿಲ್ಲ ಎಂಬ ಮಾತಿದೆ. ಈ ವರದಿ ಬರಲಿ ಏನು ಲೋಪ ಇದೆ ನೊಡೋಣ ಎಂದು ಸವಾಲು ಹಾಕಿದರು.