ಬೆಂಗಳೂರು,ಡಿ.23- ಧನುರ್ಮಾಸ ಶುಕ್ಲ ಪಕ್ಷದಲ್ಲಿ ಬರುವ ವೈಕುಂಠ ಏಕಾದಶಿಯಂದು ದೇವತೆಗಳು ಭೂ ಲೋಕಕ್ಕೆ ಬಂದು ಜಗದೊಡೆಯ ಶ್ರೀವಿಷ್ಣು ದೇವರನ್ನು ಪೂಜಿಸುತ್ತಾರೆ ಎಂದು ಪುರಾಣಗಳು ಹೇಳುತ್ತವೆ. ಆದುದರಿಂದಲೇ ಈ ದಿನದಂದು ದೇವಾಲಯದ ಉತ್ತರ ದ್ವಾರದ ಮೂಲಕ ವಿಷ್ಣುವಿನ ದರ್ಶನ ಮಾಡಿದರೆ ಸಕಲ ಪುಣ್ಯಗಳು ಪ್ರಾಪ್ತಿಯಾಗುತ್ತವೆ ಎಂಬುದು ನಂಬಿಕೆ ಇದ್ದು ನಾಡಿನೆಲ್ಲೆಡೆ ವೈಕುಂಠ ಏಕಾದಶಿ ಹಬ್ಬದ ಸಂಭ್ರಮ ಮನೆ ಮಾಡಿದೆ.
ಶ್ರೀ ವೆಂಕಟೇಶ್ವರ ಗೊವಿಂದನ ದೇಗುಲಗಳಲ್ಲಿ ಅದ್ದೂರಿಯಾಗಿ ವೈಕುಂಠ ಏಕಾದಶಿಯನ್ನು ಆಚರಿಸಲಾಗುತ್ತಿದ್ದು, ದೇವಸ್ಥಾನವನ್ನು ಸಿಂಗರಿಸಿ ವುಂಜಾನೆ 4 ಗಂಟೆಗೆ ಸುಪ್ರಭಾತ ಸೇವೆ ವಿಶೇಷ ಪೂಜೆ ನಡೆದಿದ್ದು ಭಕ್ತರ ದಂಡೇ ಹರಿದುಬಂದಿದೆ.
ಅರಸೀಕೆರೆ ಮಲೇಕಲ್ಲು ಅಮರಗಿರಿ ತಿರುಪತಿ ದೇವಾಲಯ ,ಮಾಲೂರಿನ ಚಿಕ್ಕತಿರುಪತಿ, ಮೈಸೂರು ,ಬೆಳಗಾವಿ ಹುಬ್ಬಳ್ಳಿ ಚಿಕ್ಕಮಗಳೂರು ,ಹಾಸನ ,ಶೀರಂಗಪಟ್ಟಣದ ರಂಗನಾಥ ಸೇರಿದಂತೆ ರಾಜ್ಯಾದ್ಯಂತ ಸಾವಿರಾರು ದೇಗುಲದಲ್ಲಿ ಪಂಚಾಭಿಷೇಕ, ಪುಷ್ಪಭಿಷೇಕ ಸೇರಿದಂತೆ ವಿವಿಧ ಪೋಜೆ ನಡೆಸಿ ನಂತರ ವಿಶೇಷ ಅಲಂಕಾರ ಮಾಡಿ ಭಕ್ತದಿಗಳಿಗೆ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ.
ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯ ಗ್ಯಾರಂಟಿ : ಬಿಜೆಪಿ
ಇನ್ನು ಬೆಮಗಳೂರಿನ ಮಲ್ಲೇಶ್ವರ ಹಾಗು ಜೆಪಿನಗರದ ಟಿಟಿಡಿ ದೇವಸ್ಥಾನದಲ್ಲಂತೂ ಸಂಭ್ರಮ ಮುಗಿಲುಮುಟ್ಟಿದೆ ವೈಕುಂಠ ಏಕಾದಶಿ ಪ್ರಯುಕ್ತವಾಗಿಯೇ ದೇವಸ್ಥಾನದ ಸುತ್ತಲೂ ದಕ್ಷಿಣ ಶೈಲಿಯ ಚಪ್ಪರ ಹಾಕಿ ಹೂವಿನಿಂದ ಅಲಾಂಕಾರ ಮಾಡಲಾಗಿದೆ. ಬೆಳಗ್ಗೆ 6 ಗಂಟೆಯಿಂದಲೇ ಭಕ್ತರು ಆಗಮಿಸಿ ವೆಂಕಟೇಶ್ವರನ ದರ್ಶನ ಪಡೆದಿದ್ದಾರೆ.
ದೇಗುಲಕ್ಕೆ ಬಂದ ಭಕ್ತರಿಗೆ ಪ್ರಸಾದ ವಿತರಣೆ ನಡೆಯುತ್ತಿದ್ದು, ಇಂದು ದೇವಸ್ಥಾನಕ್ಕೆ ಲಕ್ಷಾಂತರ ಸಂಖ್ಯೆಯಲ್ಲಿ ಜನರು ಬರುವ ನಿರೀಕ್ಷೆ ಇದ್ದು, ನೂಕು ನುಗ್ಗಲಾಗದಂತೆ ದೇವಸ್ಥಾನದ ಸುತ್ತಲೂ ಬ್ಯಾರೀಕೇಟ್ ಅಳವಡಿಸಲಾಗಿದೆ. ಇನ್ನು, ಕೋವಿಡ್ ಹೆಚ್ಚಾಗುತ್ತಿರುವ ಹಿನ್ನೆಲೆ ಕೆಲವೆಡೆ ಮಾಸ್ಕ್ ಹಾಕಿಕೊಂಡು ಭಕ್ತದಿಗಳು ದೇವಸ್ಥಾನಕ್ಕೆ ಬರಲು ಹೇಳಿ ಮಾಸ್ಕ ನೀಡಲಾಗಿದೆ. ದೇವಸ್ಥಾನದಲ್ಲಿ ಬೆಳಗ್ಗೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೂ ವಿಶೇಷ ಪೂಜೆ, ಹೊಮ, ಹವನಗಳು ನೆರವೇರಲಿದ್ದು, ಮಧ್ಯರಾತ್ರಿಯವರೆಗೂ ಭಕ್ತದಿಗಳು ದೇವಸ್ಥಾನಕ್ಕೆ ರಾಜಾಜಿನಗರದ ಭೂ-ಕೈಲಾಸ ವೈಕುಂಟ ದೇವಾಲಯ.
ಇಸ್ಕಾನ್ ದೇವಾಲಯ,ಮಹಾಲಕ್ಷ್ಮಿಲೇಔಟ್‍ನ ವೆಂಕಟೇಶ್ವರ ದೇವಾಲಯಕ್ಕೆ ಸಾವಿರಾರು ಭಕ್ತರು ಭೇಟಿ ನೀಡಿ ದೇವರ ದರ್ಶನ ಮಾಡಿದ್ದಾರೆ ಗೋವಿಂದ .ಗೋವಿಂದ ನಾಮ ಎಲ್ಲಡೆ ಪಸರಿಸಿದ್ದು ಸಂಭ್ರಮದಲ್ಲಿ ನಾಡಿನ ಜನತೆ ಮಿಂದಿದ್ದಾರೆ.