ಬೆಂಗಳೂರು,ಸೆ.23- ಹೊಸ ವರ್ಷದ ಸಂಭ್ರಮಾಚರಣೆ ಯಲ್ಲಿ ಭಾಗವಹಿಸುವ ಮಹಿಳೆಯರಿಗೆ ಯಾವುದೇ ರೀತಿಯ ತೊಂದರೆ ಮತ್ತು ಕಿರುಕುಳ ಆಗದಂತೆ ಮುಂದಿನ ವಾರದೊಳಗೆ ಸೂಕ್ತ ಮಾರ್ಗಸೂಚಿ ಬಿಡುಗಡೆ ಮಾಡಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ತಿಳಿಸಿದ್ದಾರೆ.
ದೊಮ್ಮಲೂರಿನ ಬೆಂಗಳೂರು ಇಂಟರ್ ನ್ಯಾಷನಲ್ ಸೆಂಟರ್‍ನಲ್ಲಿ ಇಂದು ಏರ್ಪಡಿಸಿದ್ದ ಮಾಸಿಕ ಜನಸಂಪರ್ಕ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಗರದ ಎಂ.ಜಿ.ರೋಡ್, ಬಿಗ್ರೇಡ್ ರೋಡ್ ಸೇರಿದಂತೆ ಇತರೆ ಸ್ಥಳಗಳಲ್ಲಿ ಹೊಸ ವರ್ಷ ಸಂಭ್ರಮಾಚರಣೆ ನಡೆಯಲಿದೆ.
ಸಂಭ್ರಮಾಚರಣೆಯಲ್ಲಿ ಭಾಗವಹಿಸುವವರಿಂದ ಸಾರ್ವಜನಿಕರಿಗೆ ತೊಂದರೆಯಾಗದಂತೆ, ಮದ್ಯಪಾನ ಮಾಡಿ ಅತಿರೇಕವಾಗಿ ವರ್ತಿಸಿದರೆ ಮತ್ತು ಇತರೆ ದುರ್ಘಟನೆಗಳು ತಡೆಗಟ್ಟಲು ಈ ಹಿಂದೆ ನಡೆದ ಪ್ರಕರಣಗಳನ್ನು ಅವಲೋಕಿಸಿ ಕ್ರಮ ವಹಿಸಲು ಇಲಾಖೆ ಸಿದ್ದವಾಗಿದೆ. ಈ ಬಗ್ಗೆ ಬಿಬಿಎಂಪಿ, ಬೆಸ್ಕಾಂ, ಬಿಎಂಟಿಸಿ, ಮೆಟ್ರೋ ಮತ್ತು ಅಬಕಾರಿ ಇಲಾಖೆಗಳ ಜೊತೆ ಎರಡು ಸುತ್ತಿನ ಸಭೆ ನಡೆಸಿ ಚರ್ಚಿಸಲಾಗಿದೆ ಎಂದು ಆಯುಕ್ತರು ತಿಳಿಸಿದರು.
“ಶಿಕ್ಷಣ ಕ್ಷೇತ್ರವನ್ನು ಕಲುಷಿತಗೊಳಿಸುವ ಕೆಲಸಕ್ಕೆ ಸ್ವತಃ ಸಿಎಂ ಅವರೇ ಕೈ ಹಾಕಿರುವುದು ದುರದೃಷ್ಟ”
ಜನಸಂಪರ್ಕ ಸಭೆಯಲ್ಲಿ ಭಾಗವಹಿಸಿದ ಸಾರ್ವಜನಿಕರ ಪ್ರಶ್ನೆಗಳಿಗೆ ಉತ್ತರಿಸಿದ ಆಯುಕ್ತರು, ಪೊಲೀಸ್ ಇಲಾಖೆಯನ್ನು ಮತ್ತಷ್ಟು ಜನಸ್ನೇಹಿ ಮಾಡಲು ಸಾರ್ವಜನಿಕ ಸ್ಥಳಗಳಾದ ಪಾರ್ಕ್ ಮತ್ತು ಅಂಗಡಿ ಮುಗ್ಗಟ್ಟುಗಳ ಮುಂದೆ ಕ್ಯೂಆರ್ ಕೋಡ್ ಅಳವಡಿಸಲು ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ ಎಂದು ಅವರು ಹೇಳಿದರು.
ಯಾವುದೇ ಅನಾಹುತ ಅಥವಾ ದುರ್ಘಟನೆ ಸಂಭವಿಸಿದಾಗ ಆ ಸ್ಥಳ ಯಾವ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುತ್ತದೆ ಮತ್ತು ಅಲ್ಲಿಂದ ಎಷ್ಟು ದೂರದಲ್ಲಿದೆ. ಠಾಣೆಯ ಲೊಕೇಷನ್ ಸಹಿತ ಮಾರ್ಗವನ್ನು ಸೂಚಿಸುವ ವ್ಯವಸ್ಥೆಯನ್ನು ಅದರಲ್ಲಿ ಮಾಡಲಾಗಿದೆ. ಇದರಿಂದ ಸಾರ್ವಜನಿಕರಿಗೆ ಯಾವ ಪೊಲೀಸ್ ಠಾಣೆ ಯಾವ ವ್ಯಾಪ್ತಿಯಲ್ಲಿ ಬರುತ್ತದೆ ಎಂದು ತಿಳಿಯಲು ಸಹಾಯವಾಗುತ್ತದೆ ಎಂದು ಆಯುಕ್ತರು ತಿಳಿಸಿದರು.