ನವದೆಹಲಿ, ಡಿ.24- ಪ್ರಧಾನಿ ನರೇಂದ್ರ ಮೋದಿ ಡಿಸೆಂಬರ್ 30 ರಂದು ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ. ಅಯೋಧ್ಯೆಯಲ್ಲಿ ವಿಮಾನ ನಿಲ್ದಾಣ ಮತ್ತು ರೈಲು ನಿಲ್ದಾಣವನ್ನು ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಅಯೋಧ್ಯೆಯಲ್ಲಿ ಮೋದಿ ರೋಡ್ ಶೋ ಮತ್ತು ಸಾರ್ವಜನಿಕ ಸಭೆ ನಡೆಸಲಿದ್ದಾರೆ.
ಡಿ.30ರಂದು ಪ್ರಧಾನಿ ಅಯೋಧ್ಯೆಗೆ ಭೇಟಿ ನೀಡುವ ಕುರಿತು ಜಿಲ್ಲೆಯ ಉನ್ನತ ಅಧಿಕಾರಿಗಳು ಹಾಗೂ ರಾಮಮಂದಿರ ತೀರ್ಥ ಕ್ಷೇತ್ರ ಟ್ರಸ್ಟ್‍ನ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಲಾಯಿತು. ಪ್ರಧಾನಿ ಮೋದಿಯವರ ಅಯೋಧ್ಯೆ ಭೇಟಿಯ ಸಿದ್ಧತೆಗಳನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ. ಜನವರಿ 22 ರ ನಂತರ, ಅಂದಾಜು 50,000 ರಿಂದ 55,000 ಜನರು ಪ್ರತಿದಿನ ಅಯೋಧ್ಯೆಗೆ ಬರುತ್ತಾರೆ ಮತ್ತು ಆಡಳಿತವು ಅದಕ್ಕೆ ತಯಾರಿ ನಡೆಸುತ್ತಿದೆ ಎಂದು ಅಯೋಧ್ಯೆ ಸಿಟಿ ಕಮಿಷನರ್ ಗೌರವ್ ದಯಾಳ್ ತಿಳಿಸಿದ್ದಾರೆ.
ಅಯೋಧ್ಯೆ ನಗರಕ್ಕೆ ದಿನಕ್ಕೆ 50,000 ಜನರು ಬರುವ ನಿರೀಕ್ಷೆಯಿದ್ದು, ಅದಕ್ಕೆ ತಕ್ಕಂತೆ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಧಾನಿ ಮೋದಿ ಅವರು ವಿಮಾನ ನಿಲ್ದಾಣಕ್ಕೆ ಚಾಲನೆ ನೀಡಲಿದ್ದು, ವಿಮಾನ ನಿಲ್ದಾಣದಿಂದ ಅಯೋಧ್ಯೆ ರೈಲು ನಿಲ್ದಾಣದವರೆಗೆ ರೋಡ್ ಶೋ ನಡೆಸಲಿದ್ದಾರೆ. ಆ ಬಳಿಕ ವಿಮಾನ ನಿಲ್ದಾಣದ ಪಕ್ಕದ ಮೈದಾನದಲ್ಲಿ ಆಯೋಜಿಸಿರುವ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಿಜೆಪಿ ಪದಾಧಿಕಾರಿಗಳ ಪಟ್ಟಿಗೆ ಯತ್ನಾಳ್ ವ್ಯಂಗ್ಯ
ಡಿ.30ರಂದು ಪ್ರಧಾನಿ ಅಯೋಧ್ಯೆಗೆ ಭೇಟಿ ನೀಡುವ ಕುರಿತು ಶನಿವಾರ ಜಿಲ್ಲಾಧಿಕಾರಿಗಳು ಹಾಗೂ ರಾಮಮಂದಿರ ತೀರ್ಥ ಕ್ಷೇತ್ರ ಟ್ರಸ್ಟ್‍ನ ಅಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಲಾಯಿತು. ಜನವರಿ 21 ಮತ್ತು 22 ರಂದು ಭಕ್ತರಿಗೆ ರಾಮಲಲ್ಲಾನ ದರ್ಶನವಿಲ್ಲ, ಆದರೆ ಜನವರಿ 23 ರಿಂದ ದರ್ಶನ ಪ್ರಾರಂಭವಾಗಲಿದೆ ಎಂದು ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಚಾರ್ಟರ್ಡ್ ಫ್ಲೈಟ್‍ಗಳಲ್ಲಿ ಅನೇಕ ಅತಿಥಿಗಳು ಆಗಮಿಸುವ ನಿರೀಕ್ಷೆಯಿದೆ.