ಅಯೋಧ್ಯೆ (ಉತ್ತರಪ್ರದೇಶ),ಡಿ.25- ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೆ ದಿನಗಣನೆ ಆರಂಭವಾಗಿದೆ. ಇದಕ್ಕೂ ಮೊದಲು ಪ್ರಧಾನಿ ನರೇಂದ್ರಮೋದಿ ಅವರು ಡಿ.30ರಂದು ಅಯೋಧ್ಯೆಯಲ್ಲಿ ವಿಮಾನ ನಿಲ್ದಾಣ ಉದ್ಘಾಟಿಸಿ ರೋಡ್ ಶೋ ನಡೆಸಲಿದ್ದಾರೆ.
ಜೊತೆಗೆ 3,284.60 ಕೋಟಿ ವೆಚ್ಚದ 29 ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ನಂತರ ರೋಡ್ ಶೋ ಮತ್ತು ಸಾರ್ವಜನಿಕ ಸಭೆಯಲ್ಲೂ ಪಾಲ್ಗೊಳ್ಳಲಿದ್ದಾರೆ.
ವಿಮಾನ ನಿಲ್ದಾಣ ಮತ್ತು ರೈಲು ನಿಲ್ದಾಣಗಳ ನಡುವೆ 15 ಕಿ.ಮೀ.ವರೆಗೆ ರೋಡ್ ಶೋ ನಡೆಯಲಿದೆ. ಇದಾದ ನಂತರ ಪ್ರಧಾನಿ ಮೋದಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ. ರೋಡ್ ಶೋ ಹಾದುಹೋಗುವ 51 ಕಡೆಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಸಾಧು, ಸಂತರು ಮೋದಿ ಅವರನ್ನು ಆಶೀರ್ವದಿಸಲಿದ್ದಾರೆ.
ಕಾಂಗ್ರೆಸ್‍ಗೆ ತೀವ್ರ ಮುಜುಗರವನ್ನುಂಟುಮಾಡಿದ ಸಚಿವ ಶಿವಾನಂದ ಪಾಟೀಲ್ ಹೇಳಿಕೆ
ಅಯೋಧ್ಯೆಯಲ್ಲಿ ನವೀಕೃತ ರೈಲು ನಿಲ್ದಾಣವನ್ನು ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ. ರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆಗೆ ನೆರವೇರಲಿದೆ. ಪೂರ್ವಭಾವಿಯಾಗಿ ಮರ್ಯಾದಾ ಪುರುಷೋತ್ತಮ ಶ್ರೀರಾಮ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆಯಾಗಲಿದೆ.