ಕೋಲ್ಕತ್ತಾ,ಡಿ.27- ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ಆಡಳಿತಕ್ಕಿಂತ ಎಡಪಕ್ಷಗಳ ಆಡಳಿತ ಉತ್ತಮವಾಗಿತ್ತು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ವಾಗ್ದಾಳಿ ನಡೆಸಿದ್ದಾರೆ. ದೀದಿ ಅವರ ಆಡಳಿತ ಕೂನೆಗಾಣಿಸಲು ಬಂಗಾಳದಲ್ಲಿ ಬಿಜೆಪಿ ಗೆಲ್ಲಲೇಬೇಕು ಎಂದು ಈ ನಿಟ್ಟಿನಲ್ಲಿ ನೀವು ಕಾರ್ಯತಂತ್ರ ರೂಪಿಸಬೇಕು ಎಂದು ಅವರು ಬಿಜೆಪಿ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.
1977-2011ರವರೆಗೆ ಪಶ್ಚಿಮ ಬಂಗಾಳದಲ್ಲಿ 34 ವರ್ಷಗಳ ಸಿಪಿಐ(ಎಂ) ಸರ್ಕಾರದ ಆಡಳಿತವನ್ನು ಉಲ್ಲೇಖಿಸಿ, ಬಂಗಾಳದಲ್ಲಿ ಕಮ್ಯುನಿಸ್ಟ್ ಆಳ್ವಿಕೆಯು ದೀದಿ ಆಳ್ವಿಕೆಗಿಂತ ಉತ್ತಮವಾಗಿತ್ತು. ಅದನ್ನೇ ಜನರು ಇಲ್ಲಿ ಹೇಳುತ್ತಿದ್ದಾರೆ ಎಂದು ಹೇಳಿದ್ದಾರೆ.
ಇನ್ನು ಕೆಲವೇ ತಿಂಗಳುಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು, ತೃಣಮೂಲದ ತವರು ರಾಜ್ಯವಾದ ಬಂಗಾಳದಲ್ಲಿ ಬಿಜೆಪಿ ಪ್ರಮುಖ ಲಾಭದತ್ತ ಕಣ್ಣಿಟ್ಟಿದೆ. ಈ ಬಾರಿ ಬಂಗಾಳದ 42 ಲೋಕಸಭಾ ಸ್ಥಾನಗಳ ಪೈಕಿ 35 ಸ್ಥಾನಗಳನ್ನು ಪಕ್ಷ ಗೆಲ್ಲಲಿದೆ ಎಂದು ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕುಸ್ತಿಪಟುಗಳನ್ನು ಭೇಟಿಯಾದ ರಾಹುಲ್‍ಗಾಂಧಿ
ಮುಂದಿನ ವಿಧಾನಸಭಾ ಚುನಾವಣೆಯ ನಂತರ ನಾವು ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರವನ್ನು ರಚಿಸಲು ಕೆಲಸ ಮಾಡಬೇಕಾಗಿದೆ. ಬಿಜೆಪಿ ಸರ್ಕಾರವು ಒಳನುಸುಳುವಿಕೆ, ಹಸು ಕಳ್ಳಸಾಗಣೆ ಮತ್ತು ಸಿಎಎ ಮೂಲಕ ಧಾರ್ಮಿಕವಾಗಿ ಕಿರುಕುಳಕ್ಕೊಳಗಾದ ಜನರಿಗೆ ಪೌರತ್ವವನ್ನು ನೀಡುತ್ತದೆ ಎಂದು ಪಕ್ಷದ ಕಾರ್ಯಕ್ರಮದಲ್ಲಿ ಹೇಳಿದರು.