Thursday, April 16, 2026
Homeರಾಜ್ಯಏ.9ಕ್ಕೆ ದ್ವಿತೀಯ ಪಿಯು ಫಲಿತಾಂಶ

ಏ.9ಕ್ಕೆ ದ್ವಿತೀಯ ಪಿಯು ಫಲಿತಾಂಶ

Second PU Result on April 9

ಬೆಂಗಳೂರು,ಏ.7- ದ್ವಿತೀಯ ಪಿಯುಸಿ ಪರೀಕ್ಷೆ -1 ಫಲಿತಾಂಶದ ದಿನಾಂಕ ಪ್ರಕಟಣೆ ಗೊಂದಲಕ್ಕೆ ತೆರೆಬಿದ್ದಿದ್ದು, ಕರ್ನಾಟಕ ಪರೀಕ್ಷಾ ಮಂಡಳಿಯು ಇದೇ 9ರಂದು ಗುರುವಾರ ಫಲಿತಾಂಶ ಪ್ರಕಟಿಸುವ ಸಾಧ್ಯತೆ ಇದೆ.

ಏ.9ರಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಲಿದ್ದಾರೆ. ಅಧಿಕೃತ ವೆಬ್‌ಸೈಟ್‌ನಲ್ಲೂ ವಿದ್ಯಾರ್ಥಿ ಫಲಿತಾಂಶವನ್ನು ನೋಡಬಹುದಾಗಿದೆ. ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಗುರುವಾರ ಮತದಾನ ನಡೆಯಲಿದೆ. ಇದರಿಂದಾಗಿ ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಯಾವುದೇ ಪ್ರಮುಖ ಘೋಷಣೆಗಳನ್ನು ಮಾಡುವ ಮುನ್ನ ಚುನಾವಣಾ ಆಯೋಗದ ಅನುಮತಿ ಪಡೆಯುವುದು ಕಡ್ಡಾಯವಾಗಿದೆ.

ಫಲಿತಾಂಶ ಬಿಡುಗಡೆ ಮಾಡಲು ಶಿಕ್ಷಣ ಇಲಾಖೆಯು ಚುನಾವಣಾ ಆಯೋಗದ ಅನುಮತಿಗಾಗಿ ಕಾಯುತ್ತಿದೆ. ಯಾವುದೇ ಕ್ಷಣದಲ್ಲಿ ಅನುಮತಿ ದೊರೆಯುವ ಸಂಭವಿದೆ. ಸಾಮಾನ್ಯವಾಗಿ ಫಲಿತಾಂಶವನ್ನು ಶಿಕ್ಷಣ ಸಚಿವರ ಉಪಸ್ಥಿತಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಪ್ರಕಟಿಸಲಾಗುತ್ತದೆ.

ಆದರೆ, ನೀತಿ ಸಂಹಿತೆ ಇರುವುದರಿಂದ ಸಚಿವರು ಅಧಿಕೃತವಾಗಿ ಫಲಿತಾಂಶ ಪ್ರಕಟಿಸಲು ಚುನಾವಣಾ ಆಯೋಗದಿಂದ ಅನುಮತಿ ಪಡೆಯಬೇಕಾಗುತ್ತದೆ. ಹಾಗಾಗಿ ಆಯೋಗದಿಂದ ಅಧಿಕೃತ ಒಪ್ಪಿಗೆ ಸಿಗುವವರೆಗೂ ಮಂಡಳಿಯು ಯಾವುದೇ ದಿನಾಂಕವನ್ನು ಘೋಷಿಸಿರಲಿಲ್ಲ.

ಫೆ.28ರಿಂದ ಮಾರ್ಚ್‌ 17ವರೆಗೂ ದ್ವಿತಿಯ ಪಿಯುಸಿ ಪರೀಕ್ಷೆ ನಡೆದಿತ್ತು. ಪರೀಕ್ಷೆಯಲ್ಲಿ ಒಟ್ಟು 7,10,363 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. 1217 ಪರೀಕ್ಷಾ ಕೇಂದ್ರದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆದಿತ್ತು.

ಈ ವರ್ಷ 7.10 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಕಲಾ, ವಾಣಿಜ್ಯ ಮತ್ತು ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ತಮ ಮುಂದಿನ ಭವಿಷ್ಯದ ಹಾದಿಯನ್ನು ನಿರ್ಧರಿಸಲು ಈ ಫಲಿತಾಂಶ ಬಹಳ ಮುಖ್ಯವಾಗಿದೆ.

RELATED ARTICLES

Latest News