Tuesday, May 5, 2026
Homeರಾಷ್ಟ್ರೀಯಸಿಎಂ ಸ್ಥಾನಕ್ಕೆ ಸ್ಟಾಲಿನ್‌ ರಾಜೀನಾಮೆ

ಸಿಎಂ ಸ್ಥಾನಕ್ಕೆ ಸ್ಟಾಲಿನ್‌ ರಾಜೀನಾಮೆ

Stalin resigns as CM

ಚೆನ್ನೈ, ಮೇ 5 (ಪಿಟಿಐ)- ಡಿಎಂಕೆ ಅಧ್ಯಕ್ಷ ಎಂ ಕೆ ಸ್ಟಾಲಿನ್‌ ಅವರು ಇಂದು ತಮಿಳುನಾಡು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ರಾಜೀನಾಮೆ ಪತ್ರವನ್ನು ರಾಜ್ಯಪಾಲ ರಾಜೇಂದ್ರ ವಿಶ್ವನಾಥ್‌ ಅರ್ಲೇಕರ್‌ ಅವರ ಕಚೇರಿಗೆ ರವಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಏಪ್ರಿಲ್‌ 23 ರಂದು ನಡೆದ ವಿಧಾನಸಭಾ ಚುನಾವಣೆಯಲ್ಲಿ ವಿಜಯ್‌ ನೇತೃತ್ವದ ಟಿವಿಕೆ ವಿರುದ್ಧ ಡಿಎಂಕೆ ಸೋಲುಂಡಿದೆ. 234 ಸದಸ್ಯ ಬಲದ ತಮಿಳುನಾಡು ವಿಧಾನಸಭೆಯಲ್ಲಿ ಡಿಎಂಕೆ 59 ಸ್ಥಾನಗಳನ್ನು ಗೆದ್ದು ಪ್ರಮುಖ ವಿರೋಧ ಪಕ್ಷವಾಗಿ ಹೊರಹೊಮ್ಮಿದೆ.

ಎಐಎಡಿಎಂಕೆ 47 ಸ್ಥಾನಗಳನ್ನು ಗೆದ್ದಿದೆ.ಟಿವಿಕೆ 108 ಸ್ಥಾನಗಳನ್ನು ಗೆದ್ದಿದ್ದು, ಏಕೈಕ ದೊಡ್ಡ ಪಕ್ಷವಾಗಿದೆ. ಡಿಎಂಕೆ ಬಲಿಷ್ಠ ವಿರೋಧ ಪಕ್ಷವಾಗಿ ಕಾರ್ಯನಿರ್ವಹಿಸಲಿದೆ ಎಂದು ಸ್ಟಾಲಿನ್‌ ಹೇಳಿದ್ದಾರೆ.

RELATED ARTICLES

Latest News