Homeರಾಜ್ಯಭಾನುವಾರ ಬೆಂಗಳೂರಿಗೆ ಪ್ರಧಾನಿ ಮೋದಿ

ಭಾನುವಾರ ಬೆಂಗಳೂರಿಗೆ ಪ್ರಧಾನಿ ಮೋದಿ

PM Modi to visit Bengaluru on Sunday

ಬೆಂಗಳೂರು,ಮೇ 6- ಪ್ರಧಾನಿ ನರೇಂದ್ರ ಮೋದಿ ಅವರು ಮೇ 10 ( ಭಾನುವಾರ) ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ. ನಗರದ ಆರ್ಟ್‌ ಆಫ್‌ ಲಿವಿಂಗ್‌ನ ಗುರುದೇವ ರವಿಶಂಕರ್‌ ಅವರೊಂದಿಗೆ ಪ್ರಧಾನಿ ಮೋದಿ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಹೀಗಾಗಿ ಮೇ 10 ರಂದು ಪ್ರಸಿದ್ಧ ಆಧ್ಯಾತಿಕ ಕೇಂದ್ರವಾಗಿರುವ ಆರ್ಟ್‌ ಆಫ್‌ ಲಿವಿಂಗ್‌ನ 45ನೇ ವರ್ಷಾಚರಣೆ ಹಾಗೂ ರವಿಶಂಕರ್‌ ಗುರೂಜಿಯವರ 70ನೇ ವರ್ಷದ ಹುಟ್ಟುಹಬ್ಬ ಆಚರಣೆ ನೆರವೇರಲಿದೆ.

ನಗರದ ಆರ್ಟ್‌ ಆಫ್‌ ಲಿವಿಂಗ್‌ ಆಶ್ರಮದಲ್ಲಿ ಕಾರ್ಯಕ್ರಮ ನಡೆಯಲಿದೆ. ಇದರಲ್ಲಿ ಭಾಗಿಯಾಗಲು ಪ್ರಧಾನಿ ಮೋದಿ ಆಗಮಿಸುವರು. ಇದೇ ವೇಳೆ ಆಶ್ರಮದ ಆವರಣದಲ್ಲಿ ನಿರ್ಮಾಣಗೊಂಡಿರುವ ನೂತನ ಧ್ಯಾನ ಮಂದಿರ ಉದ್ಘಾಟನೆಯಾಗಲಿದ್ದು, ಹಲವು ವಿಶೇಷಗಳನ್ನು ಹೊಂದಿರುವ ಧ್ಯಾನ ಮಂದಿರದ ಅನಾವರಣದ ಜತೆಗೆ ವಿಶೇಷ ಕಾರ್ಯಕ್ರಮಗಳು ಜರುಗಲಿವೆ.

ಆರ್ಟ್‌ ಆಫ್‌ ಲಿವಿಂಗ್‌ನ ಈ ನೂತನ ಧ್ಯಾನಮಂದಿರದಲ್ಲಿ ವಾರ್ಲಿ, ಮಧುಬನಿ, ಪಟ್ಟಚಿತ್ತ, ತಂಜಾವೂರು, ಸೋಹ್ರಾಹ್‌, ಕೊಹ್ಬರ್‌, ಗೊಂಡ್‌ ಮತ್ತು ಪಿಚ್ವಾಯಿ ಕಲೆಗಳನ್ನು ಬಳಕೆ ಮಾಡಲಾಗಿದ್ದು, ಈ ಸುಂದರ ಧ್ಯಾನ ಮಂದಿರದಲ್ಲಿ ಧ್ಯಾನ ಮಾಡಲು ಅಂದಿನಿಂದ ಅವಕಾಶ ಸಿಗಲಿದೆ.

ಮಾನಸಿಕ, ಆಧ್ಯಾತಿಕ ಸಾಧನೆಗಳ ಮೂಲಕ ಜನರಿಗೆ ಮಾರ್ಗದರ್ಶನ ನೀಡುತ್ತಾ ಬಂದಿರುವ ಆರ್ಟ್‌ ಆಫ್‌ ಲಿವಿಂಗ್‌, 45 ವರ್ಷಗಳನ್ನು ಪೂರೈಸುತ್ತಿದ್ದು, ಮೇ 10 ರಿಂದ 25ರವರೆಗೆ ಹಲವು ಕಾರ್ಯಕ್ರಮಗಳು ನಡೆಯಲಿವೆ. ನಾನಾ ಕ್ಷೇತ್ರಗಳ ಗಣ್ಯರು ಸಂಭ್ರಮಾಚರಣೆಯಲ್ಲಿ ಭಾಗಿಯಾಗಲಿದ್ದಾರೆ.

ಪ್ರಧಾನಿ ಮೋದಿ ಅವರು ಈ ಹಿಂದೆ ವಿಶ್ವ ಸಾಂಸ್ಕೃತಿಕ ಉತ್ಸವದಂತಹ ಪ್ರಮುಖ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದಾರೆ. ಭಾರತೀಯ ಸಂಸ್ಕೃತಿಯನ್ನು ಜಗತ್ತಿಗೆ ಪ್ರಚಾರ ಮಾಡುವಲ್ಲಿ ರವಿಶಂಕರ್‌ ಅವರ ಪ್ರಯತ್ನಗಳನ್ನು ಶ್ಲಾಘಿಸಿದ್ದಾರೆ. ಈ ಭೇಟಿ ಕೇವಲ ಶುಭಾಶಯಗಳಿಗೆ ಸೀಮಿತವಾಗಿರದೆ, ಸಮುದಾಯದ ಯೋಗಕ್ಷೇಮಕ್ಕಾಗಿ ವಿನ್ಯಾಸಗೊಳಿಸಲಾದ ಹಲವಾರು ಸೇವಾ ಕಾರ್ಯಕ್ರಮಗಳನ್ನು ಪ್ರಧಾನಿ ಮೋದಿ ಉದ್ಘಾಟಿಸಲಿದ್ದಾರೆ.

ಈ 45 ವರ್ಷಗಳ ಪ್ರಯಾಣದಲ್ಲಿ ಆರ್ಟ್‌ ಆಫ್‌ ಲಿವಿಂಗ್‌ ಯೋಗ ಮತ್ತು ಧ್ಯಾನದಲ್ಲಿ ಮಾತ್ರವಲ್ಲದೆ ನದಿ ಪುನರುಜ್ಜೀವನ, ಶೈಕ್ಷಣಿಕ ಅಭಿವೃದ್ಧಿ ಮತ್ತು ವಿಪತ್ತು ನಿರ್ವಹಣೆಯಂತಹ ಕ್ಷೇತ್ರಗಳಲ್ಲಿಯೂ ಗಮನಾರ್ಹ ಬದಲಾವಣೆಯನ್ನು ತಂದಿದೆ. 150ಕ್ಕೂ ಹೆಚ್ಚು ದೇಶಗಳಲ್ಲಿ ಹರಡಿರುವ ಈ ಸಂಸ್ಥೆಯು ಮಾನವೀಯ ಮೌಲ್ಯಗಳನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ.

RELATED ARTICLES

Latest News