ಪುದುಚೇರಿ, ಏ.9- ಕೇವಲ 30 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಪುದುಚೇರಿಯಲ್ಲಿ ಇಂದು ಒಂದೇ ಹಂತದಲ್ಲಿ ಮತದಾನ ನಡೆಯುತ್ತಿದೆ. ಎನ್ಆರ್ಸಿ ಮತ್ತು ಬಿಜೆಪಿ ಮೈತ್ರಿಕೂಟ ಹಾಗೂ ಕಾಂಗ್ರೆಸ್ ನೇತೃತ್ವದ ಮೈತ್ರಿಕೂಟದ ನಡುವೆ ಇಲ್ಲಿ ನೇರ ಸಮರ ಏರ್ಪಟ್ಟಿದೆ.
ಬೆಳಗ್ಗೆ 7 ಗಂಟೆಯಿಂದಲೇ ಮತದಾನ ಆರಂಭವಾಗಲಿದೆ, ಜನರು ಉತ್ಸಾಹದಿಂದ ಮತಗಟ್ಟೆಗಳತ್ತ ಧಾವಿಸುತ್ತಿದ್ದಾರೆ. ಬಿಸಿಲಿನ ತಾಪ ಹೆಚ್ಚಾಗುವ ಮುನ್ನವೇ ಮತ ಚಲಾಯಿಸಲು ಹಿರಿಯ ನಾಗರಿಕರು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ.
ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.ಡಿಎಂಕೆ, ಎಐಎಡಿಎಂಕೆ, ಬಿಜೆಪಿ ಹಾಗೂ ಇನ್ನಿತರ ಕೆಲವು ಸ್ಥಳೀಯ ಪಕ್ಷಗಳ ಜೊತೆಗೆ ಈ ಬಾರಿ ಖ್ಯಾತ ಚಿತ್ರ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಕೂಡ ಕಣದಲ್ಲಿರುವುದರಿಂದ ಈ ಚುನಾವಣೆ ತೀವ್ರ ಕೂತುಹಲ ಕೆರಳಿಸಿದೆ.
