Thursday, April 16, 2026
Homeರಾಷ್ಟ್ರೀಯಮನೆಯಲ್ಲಿ ನಗದು ಪತ್ತೆ ಪ್ರಕರಣ : ನ್ಯಾಯಮೂರ್ತಿ ಯಶವಂತ್‌ ವರ್ಮಾ ರಾಜೀನಾಮೆ

ಮನೆಯಲ್ಲಿ ನಗದು ಪತ್ತೆ ಪ್ರಕರಣ : ನ್ಯಾಯಮೂರ್ತಿ ಯಶವಂತ್‌ ವರ್ಮಾ ರಾಜೀನಾಮೆ

Justice Yashwant Varma, accused in cash-at-home scam, resigns

ನವದೆಹಲಿ,ಏ.10- ಮನೆಯಲ್ಲಿ ಅಪಾರ ಪ್ರಮಾಣದ ನಗದು ಪತ್ತೆಯಾದ ಪ್ರಕರಣದಲ್ಲಿ ಭಾರಿ ಸುದ್ದಿಯಾಗಿದ್ದ ಅಲಹಾಬಾದ್‌ ಹೈಕೋರ್ಟ್‌ ನ್ಯಾಯಮೂರ್ತಿ ಯಶವಂತ್‌ ವರ್ಮಾ ಅವರು ರಾಷ್ಟ್ರಪತಿಗಳಿಗೆ ತಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ.ದೆಹಲಿ ಹೈಕೋರ್ಟ್‌ನ ನ್ಯಾಯಾಧೀಶರಾಗಿ ಸೇವೆ ಸಲ್ಲಿಸುತ್ತಿದ್ದಾಗ ಅವರ ಅಧಿಕೃತ ನಿವಾಸದಲ್ಲಿ
ಅಪಾರ ಪ್ರಮಾಣದ ನಗದು ಪತ್ತೆಯಾಗಿತ್ತು.

ನಗದು ಪತ್ತೆಯಾದ ಆರೋಪ ಕೇಳಿ ಬಂದ ಬಳಿಕ ಅವರನ್ನು ಕಳೆದ ವರ್ಷದ ಏಪ್ರಿಲ್‌ನಲ್ಲಿ ದೆಹಲಿ ಹೈಕೋರ್ಟ್‌ನಿಂದ ಅಲಹಾಬಾದ್‌ಗೆ ವರ್ಗಾಯಿಸಲಾಗಿತ್ತು.ಯಶವಂತ್‌ ವರ್ಮಾ ಪ್ರಸ್ತುತ ಆಂತರಿಕ ವಿಚಾರಣೆಯನ್ನು ಎದುರಿಸುತ್ತಿದ್ದರು.

2025ರ ಮಾರ್ಚ್‌ನಲ್ಲಿ ದೆಹಲಿಯ ಅವರ ನಿವಾಸದಲ್ಲಿ ಅಗ್ನಿ ಅವಘಡ ಸಂಭವಿಸಿದಾಗ ಸುಟ್ಟ ಮತ್ತು ಅರ್ಧ ಸುಟ್ಟ ಸ್ಥಿತಿಯಲ್ಲಿದ್ದ ಹೆಚ್ಚಿನ ಪ್ರಮಾಣದ ಹಣದ ಕಂತೆಗಳು ಪತ್ತೆಯಾಗಿದ್ದವು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ವಿರುದ್ಧ ಮಹಾಭಿಯೋಗ ಪ್ರಕ್ರಿಯೆಯನ್ನು ಪ್ರಾರಂಭಿಸಲು ಲೋಕಸಭಾ ಸ್ಪೀಕರ್‌ ತನಿಖಾ ಸಮಿತಿಯನ್ನು ರಚಿಸಿದ್ದರು.ತಮ ವಿರುದ್ಧದ ಈ ತನಿಖೆಯನ್ನು ಪ್ರಶ್ನಿಸಿ ನ್ಯಾಯಮೂರ್ತಿ ವರ್ಮಾ ಅವರು ಸುಪ್ರೆಂ ಕೋರ್ಟ್‌ ಮೆಟ್ಟಿಲೇರಿದ್ದರು. ಆದರೆ ಸುಪ್ರೆಂ ಕೋರ್ಟ್‌ ಅವರ ಮನವಿಯನ್ನು ತಿರಸ್ಕರಿಸಿ ತನಿಖೆಗೆ ತಡೆ ನೀಡಲು ನಿರಾಕರಿಸಿತ್ತು.

RELATED ARTICLES

Latest News