Tuesday, April 14, 2026
Homeಜಿಲ್ಲಾ ಸುದ್ದಿಗಳುಕಲಬುರಗಿ : ಐಪಿಎಲ್‌ ಬೆಟ್ಟಿಂಗ್‌ನಲ್ಲಿ ಹಣ ಕಳೆದುಕೊಂಡು ಆತ್ಮಹತ್ಯೆ ಗೆ ಶರಣಾದ ವ್ಯಕ್ತಿ

ಕಲಬುರಗಿ : ಐಪಿಎಲ್‌ ಬೆಟ್ಟಿಂಗ್‌ನಲ್ಲಿ ಹಣ ಕಳೆದುಕೊಂಡು ಆತ್ಮಹತ್ಯೆ ಗೆ ಶರಣಾದ ವ್ಯಕ್ತಿ

Kalaburagi: Man commits suicide after losing money in IPL betting

ಕಲಬುರಗಿ,ಏ.11- ಐಪಿಎಲ್‌ ಬೆಟ್ಟಿಂಗ್‌ನಲ್ಲಿ ಹಣ ಕಳೆದುಕೊಂಡ ವ್ಯಕ್ತಿಯೊಬ್ಬ ಬೆಣ್ಣೆತೊರಾ ಜಲಾಶಯದ ಹಿನ್ನೀರಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಾಗೂರು ಸೇತುವೆಯಲ್ಲಿ ನಡೆದಿದೆ.

ಮೃತರನ್ನು ಕಾಳಗಿ ತಾಲ್ಲೂಕಿನ ರುಮನಗೂಡ್‌ ನಿವಾಸಿ ಚಂದ್ರಕಾಂತ್‌ ದೇಸಾಯಿ(40) ಎಂದು ಗುರುತಿಸಲಾಗಿದೆ. ಕ್ರಿಕೆಟ್‌ ಬೆಟ್ಟಿಂಗ್‌ಗಾಗಿ ಹಲವರ ಬಳಿ ಸಾಲ ಮಾಡಿಕೊಂಡಿದ್ದ.

ಸಾಲ ತೀರಿಸಲಾಗದೆ ಮಾನಸಿಕ ಖಿನ್ನತೆಗೊಳಗಾಗಿದ್ದು, ಇದರಿಂದ ಮನನೊಂದು ನಾಗೂರು ಸೇತುವೆ ಬಳಿ ದ್ವಿಚಕ್ರ ವಾಹನ ನಿಲ್ಲಿಸಿ ಮೊಬೈಲ್‌ ಗಾಡಿಯ ಮೇಲಿಟ್ಟು ಬೆಣ್ಣತೊರಾ ಜಲಾಶಯದ ಹಿನ್ನೀರಿಗೆ ಜಿಗಿದು ಆತಹತ್ಯೆ ಮಾಡಿಕೊಂಡಿದ್ದಾನೆ. ಈ ಸಂಬಂಧ ಮಹಾಗಾಂವ್‌ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

RELATED ARTICLES

Latest News