Homeರಾಷ್ಟ್ರೀಯಅಧಿಕಾರಕ್ಕಾಗಿ ಡಿಎಂಕೆ ಬೆನ್ನಿಗೆ ಚೂರಿ ಹಾಕಿದ ಕಾಂಗ್ರೆಸ್‌‍ ಪಕ್ಷವನ್ನು ಯಾರೊಬ್ಬರೂ ನಂಬಬಾರಾಡು : ಮೋದಿ

ಅಧಿಕಾರಕ್ಕಾಗಿ ಡಿಎಂಕೆ ಬೆನ್ನಿಗೆ ಚೂರಿ ಹಾಕಿದ ಕಾಂಗ್ರೆಸ್‌‍ ಪಕ್ಷವನ್ನು ಯಾರೊಬ್ಬರೂ ನಂಬಬಾರಾಡು : ಮೋದಿ

No one should trust Congress party which stabbed DMK | PM Modi

ಬೆಂಗಳೂರು,ಮೇ10- ಅಧಿಕಾರದ ಆಸೆಗಾಗಿ ಯಾವುದೇ ಪಕ್ಷದೊಳಗೆ ಓಡಿಹೋಗುವ, ನಂಬಿದವರಿಗೆ ಕೈಕೊಡುವ, ಡಿಎಂಕೆ ಬೆನ್ನಿಗೆ ಚೂರಿ ಹಾಕಿರುವ ಕಾಂಗ್ರೆಸ್‌‍ ಪಕ್ಷವನ್ನು ಯಾರೊಬ್ಬರೂ ನಂಬಬಾರದೆಂದು ಪ್ರಧಾನಿ ನರೇಂದ್ರಮೋದಿ ಅವರು ದೇಶದ ಜನತೆಗೆ ಕರೆ ಕೊಟ್ಟಿದ್ದಾರೆ.

ತಮಿಳುನಾಡಿನ ಈಗಿನ ಪರಿಸ್ಥಿತಿ ನೋಡಿ. 30 ವರ್ಷಗಳಿಂದ ಕಾಂಗ್ರೆಸ್‌‍ ಜೊತೆ ಡಿಎಂಕೆ ನಿಕಟ ಸಂಬಂಧ ಹೊಂದಿತ್ತು. 2014ರಿಂದ ಪಕ್ಷ ಉಳಿದಿದ್ದೇ ಮೈತ್ರಿ ಕಾರಣಕ್ಕಾಗಿ. ಅಧಿಕ್ಕಾರ ಕಳೆದುಕೊಳ್ಳುತ್ತಿದ್ದಂತೆ ಕಾಂಗ್ರೆಸ್‌‍ ಮೈತ್ರಿ ಮುರಿದುಕೊಂಡು ಡಿಎಂಕೆ ಬೆನ್ನಿಗೆ ಚೂರಿ ಇರಿದಿದೆ. ಶತಮಾನಗಳ ಇತಿಹಾಸವಿರುವ ಆ ಪಕ್ಷಕ್ಕೆ ಮತ್ತೊಂದು ಪಕ್ಷದ ಅಗತ್ಯವಿದೆ. ಹೀಗಾಗಿ ಯಾರೊಬ್ಬರೂ ನಂಬಬೇಡಿ ಎಂದು ಕಿವಿಮಾತು ಹೇಳಿದರು.

ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಅವರಿಗೆ ಎಚ್‌ಎಎಲ್‌ ವಿಮಾನ ನಿಲ್ದಾಣದಲ್ಲಿ ಬಿಜೆಪಿ ವತಿಯಿಂದ ಹಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡುತ್ತಾ, ಕರ್ನಾಟಕದ ಅಧಿಕಾರ ಹಂಚಿಕೆ, ಬಿಕ್ಕಟ್ಟು, ಆಡಳಿತ ವೈಫಲ್ಯ, ಭ್ರಷ್ಟಾಚಾರದ ಬಗ್ಗೆ ಉಲ್ಲೇಖ ಮಾಡಿದರು.

ಮೊದಲಿಗೆ ಎಲ್ಲರಿಗೂ ನಮಸ್ಕಾರಗಳು ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಮೋದಿಯವರು, ಕರ್ನಾಟಕದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಧಿಕಾರದಲ್ಲಿ ಎಷ್ಟು ದಿನ ಇರುತ್ತಾರೋ ಗೊತ್ತಿಲ್ಲ. ಇಲ್ಲಿನ ಖಜಾನೆ ಮಾತ್ರ ಲೂಟಿಯಾಗುತ್ತಿದೆ ಎಂದು ಆರೋಪಿಸಿದರು.
ಜನರ ಸಮಸ್ಯೆಗಳನ್ನು ಪರಿಹರಿಸುವ ಬದಲು ಇಲ್ಲಿನ ಸರ್ಕಾರವು ಆಂತರಿಕ ವಿವಾದಗಳನ್ನು ಬಗೆಹರಿಸುವುದರಲ್ಲಿ ಹೆಚ್ಚಿನ ಸಮಯ ಕಳೆಯುತ್ತಿದೆ. ಮುಖ್ಯಮಂತ್ರಿ ಎಷ್ಟು ದಿನ ಅಧಿಕಾರದಲ್ಲಿರುತ್ತಾರೆ ಎಂಬುದು ನಿರ್ಧರಿಸಲಾಗಿಲ್ಲ. ಅವರು ತಮದೇ ಪಕ್ಷದ ನಾಯಕರಿಗೆ ಭರವಸೆ ನೀಡುತ್ತಾರೆ. ನಂತರ ಅವರ ಬೆನ್ನಿಗೆ ಚೂರಿ ಹಾಕುತ್ತಾರೆ. ಛತ್ತೀಸ್‌‍ಗಢ, ರಾಜಸ್ಥಾನದಲ್ಲೂ ಅದೇ ಆಯಿತು. ಕರ್ನಾಟಕದಲ್ಲಿ ಅದೇ ಆಟ ನಡೆಯುತ್ತದೆ. ಈಗ ಕೇರಳದ ಸರದಿ ಎಂದು ಎಚ್ಚರಿಸಿದರು.

ಕಾಂಗ್ರೆಸ್‌‍ ನಿರಾಸೆಯಲ್ಲಿ ಮುಳುಗಿದೆ. ಕಾಂಗ್ರೆಸ್‌‍ ಪಕ್ಷದಲ್ಲಿ ಯಾವುದೇ ಸಿದ್ಧಾಂತ ಉಳಿದಿಲ್ಲ. ಲೋಕಕಲ್ಯಾಣ ಬಿಜೆಪಿಯ ಆದ್ಯತೆ. ಒಳ್ಳೆಯ ಸರ್ಕಾರ ನಮ ಮಾದರಿ. 50 ಕೋಟಿ ಜನ ಬಡತನದಿಂದ ಹೊರಬಂದಿರುವುದು ಇದಕ್ಕೆ ಉದಾಹರಣೆ ಎಂದು ಸಮರ್ಥಿಸಿಕೊಂಡರು.
ಹಿಮಾಚಲಪ್ರದೇಶದಲ್ಲಿ ಸಫಾಯಿ ಕರ್ಮಚಾರಿಗಳಿಗೆ ವೇತನ ಕೊಡಲಾಗುತ್ತಿಲ್ಲ, ತೆಲಂಗಾಣದಲ್ಲಿ ರೈತರ ಆತಹತ್ಯೆ ಹೆಚ್ಚಾಗಿದೆ. ಕೇರಳದಲ್ಲಿ ಬಹುಮತದೊಂದಿಗೆ ಚುನಾವಣೆ ಗೆದ್ದರೂ ಇನ್ನೂ ಸಿಎಂ ಆಯ್ಕೆ ಮಾಡಲು ಸಾಧ್ಯವಾಗಿಲ್ಲ. ರಾಜಸ್ಥಾನದಲ್ಲಿ ಏನಾಯಿತು ಎಂಬುದು ನಿಮಗೆ ಗೊತ್ತಿದೆ. ಕರ್ನಾಟಕದಲ್ಲೂ ಅದೇ ಮುಂದುವರೆಯುತ್ತದೆ ಎಂದು ಪುನರುಚ್ಚರಿಸಿದರು.

ಭಾಷಣದುದ್ದಕ್ಕೂ ಪಶ್ಚಿಮ ಬಂಗಾಳದ ಫಲಿತಾಂಶದ ಬಗ್ಗೆ ಮಾತನಾಡಿದ ಅವರು, ಬಂಗಾಳದ ಜನರು ಇತಿಹಾಸ ನಿರ್ಮಿಸಿದ್ದಾರೆ. ದಶಕಗಳ ಅರಾಜಕತೆಯನ್ನು ಕೊನೆಗಾಣಿಸಿ ವಿಕಾಸದ ಹಾದಿ ಹಿಡಿದಿದ್ದಾರೆ. ಈ ಗೆಲುವು ಕೇವಲ ಬಿಜೆಪಿಯದ್ದಲ್ಲ, ಇದು ಪ್ರಜಾಪ್ರಭುತ್ವದ ಗೆಲುವು. ಅಸ್ಸಾಂನಲ್ಲಿ ಸತತ ಎರಡನೇ ಬಾರಿಗೆ ಜನಾದೇಶ ನೀಡಿರುವುದು ನವ ಭಾರತದ ನಿರ್ಮಾಣಕ್ಕೆ ಸಿಕ್ಕ ಶಕ್ತಿ ಎಂದು ಅವರು ಹರ್ಷ ವ್ಯಕ್ತಪಡಿಸಿದರು.

ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ಅಸ್ತಿತ್ವವೇ ಇರಲಿಲ್ಲ. ಕೊನೆಗೆ 3 ಸ್ಥಾನ ದೊರೆಯಿತು. ಮತ್ತೆ ಚುನಾವಣೆಯಲ್ಲಿ ಮೂರು ಸ್ಥಾನಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಯಿತು. ಅದೇ ರಾಜ್ಯದಲ್ಲಿ ಈಗ 200ಕ್ಕೂ ಹೆಚ್ಚು ಸ್ಥಾನ ಗಳಿಸಿ ಸರ್ಕಾರ ರಚಿಸಿದ್ದೇವೆ. ಕೇರಳದಲ್ಲಿಯೂ ಈಗ 3 ಸ್ಥಾನ ಗಳಿಸಿದ್ದೇವೆ. ಮುಂದಿನ ದಿನಗಳಲ್ಲಿ ಬಂಗಾಳದ ರೀತಿ ಕೇರಳದಲ್ಲಿಯೂ ಕಮಲ ಅರಳಲಿದೆ ಎಂದು ಮೋದಿ ಹೇಳಿದರು.

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಕಾಂಗ್ರೆಸ್‌‍ ವಿರೋಧಿಸಿದ್ದನ್ನು ಪ್ರಸ್ತಾಪಿಸಿದ ಪ್ರಧಾನಿ, ಕಾಂಗ್ರೆಸ್‌‍ನವರು ಮಹಿಳಾ ಮೀಸಲಾತಿಯನ್ನು ತಡೆದರು. ಇದು ಜಾರಿಯಾಗಿದ್ದರೆ ಸಾಮಾನ್ಯ ವರ್ಗದ ಮಹಿಳೆಯರು ಕೂಡ ಇಂದು ವಿಧಾನಸಭೆ ಮತ್ತು ಸಂಸತ್ತಿಗೆ ಆಯ್ಕೆಯಾಗಿರುತ್ತಿದ್ದರು. ಕರ್ನಾಟಕದ ಮಹಿಳೆಯರು ಈ ದ್ರೋಹವನ್ನು ಎಂದಿಗೂ ಕ್ಷಮಿಸಬಾರದು ಎಂದು ಕರೆ ನೀಡಿದರು.

ಕಾಂಗ್ರೆಸ್‌‍ ದೇಶದ ಅತಿ ದೊಡ್ಡ ಮಹಿಳಾ ವಿರೋಧಿ ಪಕ್ಷ. ಮಹಿಳಾ ಬಿಲ್‌ ಸಂಸತ್ತಲ್ಲಿ ಪಾಸ್‌‍ ಆಗಿದ್ದರೆ ಮಹಿಳೆಯರ ಶಕ್ತಿ ಹೆಚ್ಚುತ್ತಿತ್ತು. ಕರ್ನಾಟಕದಿಂದಲೂ ಹೆಚ್ಚಿನ ಸಂಖ್ಯೆಯ ಮಹಿಳಾ ಶಾಸಕರು, ಸಂಸದರು ಬರಬಹುದಿತ್ತು. ಕಾಂಗ್ರೆಸ್‌‍ನ ಈ ದ್ರೋಹವನ್ನು ದೇಶದ ಜನ ಕ್ಷಮಿಸಲ್ಲ ಎಂದು ವಾಗ್ದಾಳಿ ನಡೆಸಿದರು.

ರಾಷ್ಟ್ರ ನೀತಿಯ ರಾಜನೀತಿ ನಮಗೆ ಬೇಕಿದೆ. ಕರ್ನಾಟಕ ಬಿಜೆಪಿಗೆ ಒಂದು ಶಕ್ತಿಯನ್ನ ನೀಡಿತ್ತು. ಆಂಧ್ರದಲ್ಲಿ ಎನ್‌ಡಿಎ ಸರ್ಕಾರ ಇದೆ. ಲೋಕಸಭಾ ಸದಸ್ಯರ ಲೆಕ್ಕದಲ್ಲಿ ಕರ್ನಾಟಕದಲ್ಲಿ ಬಿಜೆಪಿ ನಂಬರ್‌ 1, ತೆಲಂಗಾಣದಲ್ಲಿ ಎರಡನೇ ಸ್ಥಾನದಲ್ಲಿದ್ದೇವೆ. ಈ ಹಿಂದೆ 3 ಶಾಸಕರಿದ್ದ ಪಶ್ಚಿಮ ಬಂಗಾಳದಲ್ಲಿ 200ಕ್ಕೂ ಹೆಚ್ಚು ಶಾಸಕರಿದ್ದಾರೆ. ಕೇರಳದಲ್ಲಿ 3 ಎಂಎಲ್‌ಎಗಳು ಗೆದ್ದಿದ್ದಾರೆ ಎಂದರು.

400ಕ್ಕೂ ಅಧಿಕ ಸ್ಥಾನದಲ್ಲಿ ಕಾಂಗ್ರೆಸ್‌‍ಗೆ ಕಳೆದ ಮೂರು ಚುನಾವಣೆಗಳಲ್ಲಿ ಅವಕಾಶ ಇಲ್ಲದಂತಾಗಿದೆ. ಅವರ ಬಳಿಕ ಅಜೆಂಡಾ ಇಲ್ಲ, ನಿರಾಶರಾಗಿದ್ದಾರೆ. ನಮ ಮಂತ್ರ ಸಬ್‌ ಕಾ ಸಾಥ್‌ ಸಬ್‌ ಕಾ ವಿಕಾಸ್‌‍ , ನಮದು ಒಳ್ಳೆಯ ಆಡಳಿತ ನೀಡುವ ಮಂತ್ರ. ಅದಕ್ಕೆ ನಮಗೆ ಪದೇ ಪದೇ ಜನ ಅವಕಾಶ ಕೊಡುತ್ತಿದ್ದಾರೆ ಎಂದು ಸಮರ್ಥಿಸಿಕೊಂಡರು.

ಭಾರತದ ಭವಿಷ್ಯ ಬೆಂಗಳೂರು:
ಬೆಂಗಳೂರನ್ನು ಭಾರತದ ಭವಿಷ್ಯದ ಎಂಜಿನ್‌ ಎಂದು ಕರೆದ ಪ್ರಧಾನಿ, ಇಂದು ಇಡೀ ಜಗತ್ತು ಡಿಜಿಟಲ್‌ ಇಂಡಿಯಾದ ಬಗ್ಗೆ ಮಾತನಾಡುತ್ತಿದ್ದರೆ ಅದಕ್ಕೆ ಬೆಂಗಳೂರಿನ ಯುವಶಕ್ತಿಯೇ ಕಾರಣ. ಕರ್ನಾಟಕದ ಐಟಿ ನೈಪುಣ್ಯ ಮತ್ತು ಸಂಶೋಧನೆಗಳು ದೇಶವನ್ನು ಸ್ವಾವಲಂಬಿಯಾಗಿಸುತ್ತಿವೆ ಎಂದರು.

ಭಾರತವು ಬಲಿಷ್ಠವಾಗಬೇಕಾದರೆ ಅದು ಕೇವಲ ಆರ್ಥಿಕತೆಯಿಂದ ಸಾಧ್ಯವಿಲ್ಲ. ನಮಗೆ ಮಾನಸಿಕ ಶಾಂತಿ ಮತ್ತು ಆಧ್ಯಾತಿಕ ಬಲವೂ ಬೇಕು. ಶ್ರೀರವಿಶಂಕರ್‌ ಗುರೂಜಿಯವರಂತಹ ಮಹನೀಯರು ಈ ಕೆಲಸವನ್ನು ಜಾಗತಿಕ ಮಟ್ಟದಲ್ಲಿ ಮಾಡುತ್ತಿದ್ದಾರೆ. ಅವರ 70ನೇ ಜನೋತ್ಸವದ ಸಂದರ್ಭದಲ್ಲಿ ಹೊಸ ಧ್ಯಾನ ಮಂದಿರ ಉದ್ಘಾಟಿಸುತ್ತಿರುವುದು ನನ್ನ ಸೌಭಾಗ್ಯ ಎಂದು ಹೇಳಿದರು.

ಕೇಂದ್ರ ಸಚಿವರಾದ ಪ್ರಲ್ಹಾದ್‌ ಜೋಶಿ, ವಿ.ಸೋಮಣ್ಣ, ಶೋಭಾ ಕರಂದ್ಲಾಜೆ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಧಾನಸಭೆ ವಿಪಕ್ಷ ನಾಯಕ ಅಶೋಕ್‌, ಪರಿಷತ್‌ ವಿಪಕ್ಷ ನಾಯಕ ಛಲವಾಧಿ ನಾರಾಯಣಸ್ವಾಮಿ, ಶಾಸಕ ಅಶ್ವತ್‌್ಥ ನಾರಾಯಣ್‌, ಎಸ್‌‍.ಆರ್‌.ವಿಶ್ವನಾಥ್‌, ಮಾಜಿ ಸಿಎಂ ಬಿ.ಎಸ್‌‍.ಯಡಿಯೂರಪ್ಪ ಮತ್ತಿತರರು ಉಪಸ್ಥಿತರಿದ್ದರು.

RELATED ARTICLES

Latest News