ಬೆಂಗಳೂರು, ಏ.12- ಎಂಜಿನಿಯರಿಂಗ್ ಸೇರಿದಂತೆ ಇತರ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಸಂಬಂ ಸಿದಂತೆ ಏ.23 ಮತ್ತು 24 ರಂದು ನಡೆಯುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಹಾಗೂ ಏ.22ರಂದು ನಡೆಯುವ ಕನ್ನಡ ಭಾಷಾ ಪರೀಕ್ಷೆಗೆ ಕರ್ನಾಟಕ ಪರೀಕ್ಷಾ ಪ್ರಾ ಕಾರವು ಪ್ರವೇಶ ಪತ್ರ ಬಿಡುಗಡೆ ಮಾಡಿದೆ.
ಅರ್ಜಿ ಸಲ್ಲಿಸಿ, ಶುಲ್ಕ ಪಾವತಿಸಿರುವ ಅರ್ಹ ಅಭ್ಯರ್ಥಿಗಳು ಕೆಇಎ ವೆಬ್‌ಸೈಟ್‌ಗೆ ಭೇಟಿ ನೀಡಿ, ನಿಗದಿತ ಲಿಂಕ್ ಮೂಲಕ ಪ್ರವೇಶ ಪತ್ರ ಡೌನ್ ಲೋಡ್ ಮಾಡಿಕೊಳ್ಳಬಹುದು ಎಂದು ಪ್ರಾ ಕಾರದ ಪ್ರಕಟಣೆ ತಿಳಿಸಿದೆ.
ಪ್ರವೇಶ ಪತ್ರದ ಜತೆಗೆ ಅಭ್ಯರ್ಥಿಗಳಿಗೆ ನೀಡಲಾಗುವ ಸೂಚನೆಗಳನ್ನು ಡೌನ್‌ಲೋಡ್ ಮಾಡಿಕೊಳ್ಳಲು ಹಾಗೂ ಮಾರ್ಗದರ್ಶನಗಳನ್ನು/ಕಾರ್ಯವಿಧಾನಗಳನ್ನು ತಪ್ಪದೇ ಅನುಸರಿಸಲು ಸೂಚಿಸಲಾಗಿದೆ. ಹೊರನಾಡು ಮತ್ತು ಗಡಿನಾಡು ಅಭ್ಯರ್ಥಿಗಳಿಗೆ ಕನ್ನಡ ಭಾಷೆ ಪರೀಕ್ಷೆಯನ್ನು ಬೆಂಗಳೂರು, ಬೆಳಗಾವಿ ಮತ್ತು ಮಂಗಳೂರು ಕೇಂದ್ರಗಳಲ್ಲಿ ಮಾತ್ರ ನಡೆಸಲಾಗುತ್ತದೆ ಎಂದು ಹೇಳಿದೆ.
