Tuesday, April 21, 2026
Homeರಾಜ್ಯರಾಜ್ಯಕ್ಕಾಗಮಿಸಿದ ಪ್ರಧಾನಿಯನ್ನು ಆತ್ಮೀಯವಾಗಿ ಸ್ವಾಗತಿಸಿದ ಸಿಎಂ ಸಿದ್ದರಾಮಯ್ಯ

ರಾಜ್ಯಕ್ಕಾಗಮಿಸಿದ ಪ್ರಧಾನಿಯನ್ನು ಆತ್ಮೀಯವಾಗಿ ಸ್ವಾಗತಿಸಿದ ಸಿಎಂ ಸಿದ್ದರಾಮಯ್ಯ

CM Siddaramaiah warmly welcomes the Prime Minister on his arrival in the state

ಬೆಂಗಳೂರು,ಏ.15- ಮಂಡ್ಯ ಜಿಲ್ಲೆ ಆದಿಚುಂಚನಗಿರಿ ಶ್ರೀಕ್ಷೇತ್ರದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀಗುರು ಭೈರವೈಕ್ಯ ಮಂದಿರ ಉದ್ಘಾಟನೆಗೆ ಆಗಮಿಸಿದ ಪ್ರಧಾನಿ ನರೇಂದ್ರಮೋದಿ ಅವರನ್ನು ಬೆಂಗಳೂರಿನ ಎಚ್‌ಎಎಲ್‌ ವಿಮಾನ ನಿಲ್ದಾಣದಲ್ಲಿ ಆತೀಯವಾಗಿ ಸ್ವಾಗತಿಸಲಾಯಿತು.

ದೆಹಲಿಯಿಂದ ವಿಶೇಷ ವಿಮಾನದಲ್ಲಿ ಬೆಳಗ್ಗೆ 10.20ಕ್ಕೆ ಆಗಮಿಸಿದ ಮೋದಿ ಅವರನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ, ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮಾಯಿ, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಸರ್ಕಾರದ ಮುಖ್ಯ ಕಾರ್ಯದರ್ಶಿ, ಶಾಲಿನಿ ರಜನೀಶ್‌, ರಾಜ್ಯ ಪೊಲೀಸ್‌‍ ಮಹಾನಿರ್ದೇಶಕ ಡಾ.ಸಲೀಂ, ಬೆಂಗಳೂರು ನಗರ ಪೊಲೀಸ್‌‍ ಆಯುಕ್ತ ಸೀಮಂತ್‌ಕುಮಾರ್‌ ಸಿಂಗ್‌ ಮತ್ತಿತರರು ಬರಮಾಡಿಕೊಂಡರು.

ಪ್ರಧಾನಿಗೆ ಹೂಗುಚ್ಛ ನೀಡಿ ಶಿಷ್ಟಾಚಾರದಂತೆ ಸ್ವಾಗತ ಕೋರಲಾಯಿತು. ನಂತರ ಭಾರತೀಯ ವಾಯುಪಡೆಗೆ ಸೇರಿದ ಹೆಲಿಕಾಪ್ಟರ್‌ನಲ್ಲಿ ಮೋದಿಯವರು ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ತೆರಳಿದರು. ಆದಿಚುಂಚನಗಿರಿಯ ತಪೋವನದ ಹೆಲಿಪ್ಯಾಡ್‌ಗೆ ಆಗಮಿಸಿ ಅಲ್ಲಿಂದ ರಸ್ತೆ ಮೂಲಕ ಬೆಟ್ಟದ ತಪ್ಪಲಿನಲ್ಲಿರುವ ಶ್ರೀ ಕ್ಷೇತ್ರಕ್ಕೆ ಆಗಮಿಸಿದರು.

ಮೊದಲು ಗೋರಕ್ಷನಾಥ ತಪ್ಪಸ್ಸು ಮಾಡಿ ಜಾಲಾಪೀಠಕ್ಕೆ ಭೇಟಿ ನೀಡಿದರು. ನಂತರ ಕಾಲಭೈರೇಶ್ವರ ಸ್ವಾಮಿ ಸನ್ನಿಧಿಗೆ ತೆರಳಿ ಸ್ವಾಮಿಯ ದರ್ಶನ ಪಡೆದು, ನೂತನವಾಗಿ ನಿರ್ಮಾಣಗೊಂಡಿರುವ ಶ್ರೀಗುರು ಭೈರವೈಕ್ಯ ಮಂದಿರವನ್ನು ಲೋಕಾರ್ಪಣೆ ಮಾಡಿದರು. ಮಂದಿರ ಲೋಕಾರ್ಪಣೆಗೊಳ್ಳುತ್ತಿದ್ದಂತೆ ನೆರೆದಿದ್ದ ಸಾವಿರಾರು ಸಂಖ್ಯೆಯ ಭಕ್ತರ ಹರ್ಷೋದ್ಘಾರ ಮುಗಿಲು ಮುಟ್ಟಿತ್ತು.

RELATED ARTICLES

Latest News