ಬೆಂಗಳೂರು, ಡಿ.31-ಡ್ರಗ್ಸ್ ಜಾಲದ ವಿರುದ್ಧ ಸಮರ ಸಾರಿರುವ ಸಿಸಿಬಿ ಪೊಲೀಸರು 2023ರಲ್ಲಿ ವಿದೇಶಿ ಡ್ರಗ್ ಪೆಡ್ಲರ್‍ಗಳು ಸೇರಿದಂತೆ 3 ಸಾವಿರ ಡ್ರಗ್ ಪೆಡ್ಲರ್‍ಗಳನ್ನು ಬಂಧಿಸಿ 102 ಕೋಟಿಗೂ ಹೆಚ್ಚು ಮೌಲ್ಯದ ಡ್ರಗ್ಸ್ ಅನ್ನು ವಶಪಡಿಸಿಕೊಂಡಿದ್ದಾರೆ.
ನಗರವನ್ನು ಡ್ರಗ್ಸ್ ಮುಕ್ತ ನಗರವನ್ನಾಗಿಸಿಕೊಳ್ಳಬೇಕೆಂಬ ಗುರಿ ಹೊಂದಿರುವ ಸಿಸಿಬಿ ಪೊಲೀಸರು ನಿರಂತರವಾಗಿ ಡ್ರಗ್ಸ್ ಅಡ್ಡೆಗಳ ಮೇಲೆ ದಾಳಿ ಮಾಡಿ ಆರೋಪಿಗಳನ್ನು ಬಂಧಿಸಿದ್ದಾರೆ. ಈ ವರ್ಷದ ಆರಂಭದ 8 ತಿಂಗಳಲ್ಲೇ 41 ಕೋಟಿಗೂ ಹೆಚ್ಚು ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡಿದ್ದರೆ, ಕಳೆದ 4 ತಿಂಗಳಿಂದ 61 ಕೋಟಿಗೂ ಹೆಚ್ಚು ಬೆಲೆಯ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಹೊಸ ವರ್ಷಾಚರಣೆ : 2 ಗಂಟೆವರೆಗೂ ಬಿಎಂಟಿಸಿ ಬಸ್ ಸಂಚಾರ
ಹೊಸ ವರ್ಷ ಆಚರಣೆ ಹಿನ್ನೆಲೆಯಲ್ಲಿ ಮಾದಕ ವಸ್ತುಗಳ ಮಾರಾಟ ಹೆಚ್ಚಾಗುವ ಸಾಧ್ಯತೆಗಳಿದ್ದು, ನಗರದೆಲ್ಲೆಡೆ ಸಿಸಿಬಿ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದು ತೀವ್ರ ತಪಾಸಣೆ ನಡೆಸುತ್ತಿದ್ದಾರೆ.