Friday, April 17, 2026
Homeರಾಜ್ಯಪಕ್ಷ ವಿರೋಧಿ ಚಟುವಟಿಕೆ ಆರೋಪ : ಕಾಂಗ್ರೆಸ್‌‍ನಿಂದ ಜಬ್ಬಾರ್‌ ಅಮಾನತು

ಪಕ್ಷ ವಿರೋಧಿ ಚಟುವಟಿಕೆ ಆರೋಪ : ಕಾಂಗ್ರೆಸ್‌‍ನಿಂದ ಜಬ್ಬಾರ್‌ ಅಮಾನತು

Anti-party activity charges: Jabbar suspended by Congress

ಬೆಂಗಳೂರು,ಏ.15- ದಾವಣಗೆರೆ ದಕ್ಷಿಣ ವಿಧಾನಸಭೆ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪದಡಿ ವಿಧಾನಪರಿಷತ್‌ ಸದಸ್ಯ ಅಬ್ದುಲ್‌ ಜಬ್ಬಾರ್‌ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯ ಸ್ಥಾನದಿಂದ ಅಮಾನತು ಗೊಳಿಸಲಾಗಿದೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ಅನಿರ್ದಿಷ್ಠಾವಧಿಯವರೆಗೂ ತಕ್ಷಣದಿಂದ ಜಾರಿಗೆ ಬರುವಂತೆ ಕಾಂಗ್ರೆಸ್‌‍ನ ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸುವುದಾಗಿ ಆದೇಶದಲ್ಲಿ ತಿಳಿಸಿದ್ದಾರೆ.

ಈ ಮೂಲಕ ದಾವಣಗೆರೆ ದಕ್ಷಿಣ ಕ್ಷೇತ್ರದ ಚುನಾವಣೆ ಮುಗಿದರೂ ಪಕ್ಷ ವಿರೋಧಿ ಚಟುವಟಿಕೆ ನಡೆಸಿದವರ ವಿರುದ್ಧದ ಕ್ರಮಗಳು ನಿಂತಿಲ್ಲ. ಅಬ್ದುಲ್‌ ಜಬ್ಬಾರ್‌ ಅವರು ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾಗಿದ್ದರು.

ಚುನಾವಣೆ ಸಂದರ್ಭದಲ್ಲಿ ಪ್ರಚಾರಕ್ಕೆ ಹೋಗದ ಅವರ ವಿರುದ್ಧ ಶಿಸ್ತಿನ ಕ್ರಮಗಳ ಬಗ್ಗೆ ಚರ್ಚೆಗಳು ನಡೆದಾಗ ಅವರು ಪಕ್ಷದ ಪ್ರಮುಖ ಹುದ್ದೆಗೆ ರಾಜೀನಾಮೆ ನೀಡಿದ್ದರು. ಅದು ಅಂಗೀಕಾರಗೊಂಡಿತ್ತು. ಅಷ್ಟಕ್ಕೆ ನಿಲ್ಲದೆ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದಲೂ ಅಮಾನತು ಮಾಡುವ ಮೂಲಕ ಡಿ.ಕೆ.ಶಿವಕುಮಾರ್‌ ಬಿಸಿ ಮಟ್ಟಿಸಿದ್ದಾರೆ.

ಇತ್ತ ಸಚಿವ ಜಮೀರ್‌ ಅಹಮದ್‌ ಖಾನ್‌ ಅವರಿಗೂ ಕ್ರಮದ ತೂಗು ಕತ್ತಿ ನೇತಾಡುತ್ತಿದೆ. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.

RELATED ARTICLES

Latest News