ಬೆಂಗಳೂರು,ಜ.1- ಬಿಬಿಎ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸುಧಾಮನಗರದಲ್ಲಿ ಕುಟುಂಬ ದೊಂದಿಗೆ ವಾಸವಾಗಿದ್ದ ವರ್ಷಿಣಿ(21) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ.
ಜಯನಗರದ ಕಾಲೇಜೊಂದರಲ್ಲಿ ವರ್ಷಿಣಿ ಬಿಬಿಎ ವ್ಯಾಸಂಗ ಮಡುತ್ತಿದ್ದರು. ನಿನ್ನೆ ಮನೆಯಲ್ಲಿ ವರ್ಷಿಣಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎಷ್ಟು ಹೊತ್ತಾದರೂ ರೂಂನಿಂದ ಮಗಳು ಹೊರಗೆ ಬಾರದಿದ್ದಾಗ ಪೋಷಕರು ರೂಂ ಬಳಿ ಹೋಗಿ ನೋಡಿದಾಗ ನೇಣು ಬಿಗಿದುಕೊಂಡಿರುವುದು ಕಂಡು ತಕ್ಷಣ ಕುಣಿಕೆಯಿಂದ ಕೆಳಗಿಳಿಸಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.
ವೈದ್ಯರು ವರ್ಷಿಣಿಯನ್ನು ಪರೀಕ್ಷಿಸಿ ಮೃತಪಟ್ಟದ್ದಾಳೆಂದು ತಿಳಿಸಿದ್ದಾರೆ. ಕಿಮ್ಸ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಮೃತದೇಹವನ್ನು ಹಸ್ತಾಂತರಿಸಲಾಗಿದೆ. ವಿಲ್ಸನ್ಗಾರ್ಡನ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಉತ್ತಮ ವ್ಯಾಸಂಗ ಮಾಡುತ್ತಿದ್ದ ವರ್ಷಿಣಿ ಆತ್ಮಹತ್ಯೆಗೆ ನಿಖರ ಕಾರಣ ಸದ್ಯಕ್ಕೆ ತಿಳಿದುಬಂದಿಲ್ಲ. ನಿನ್ನೆ ಸ್ನೇಹಿತೆಯರೊಂದಿಗೆ ಹೊಸ ವರ್ಷಾಚರಣೆಗೆ ಹೋಗಬೇಕಿತ್ತು. ಆದರೆ ಮನೆಯಲ್ಲಿಯೇ ಇದ್ದಳು ಎಂದು ಪೋಷಕರು ಅಳಲು ತೋಡಿಕೊಂಡಿದ್ದಾರೆ.