ಮ್ಯಾಡ್ರಿಡ್,ಅ.2- ಆಗ್ನೇಯ ಸ್ಪ್ಯಾನಿಷ್ ನಗರದ ಮುರ್ಸಿಯಾದಲ್ಲಿನ ನೈಟ್‍ಕ್ಲಬ್‍ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು ಅವಘಡದಲ್ಲಿ 13 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇಲ್ಲಿನ ಜನಪ್ರಿಯ ಟೀಟರ್ ನೈಟ್‍ಕ್ಲಬ್‍ನಲ್ಲಿ ಬೆಳಿಗ್ಗೆ 6 ಗಂಟೆಗೆ ಕಾಣಿಸಿಕೊಂಡ ಬೆಂಕಿ ತಕ್ಷಣ ಇತರ ಪ್ರದೇಶಗಳಿಗೂ ಹಬ್ಬಿದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಬೆಂಕಿ ಅವಘಡಕ್ಕೆ ಕಾರಣವೇನು ಎಂಬುದು ತಕ್ಷಣಕ್ಕೆ ತಿಳಿದುಬಂದಿಲ್ಲ.
ಅಗ್ನಿಶಾಮಕ ದಳದವರು, ಪೊಲೀಸರು ಮತ್ತು ತುರ್ತು ಸೇವೆಗಳ ಸಿಬ್ಬಂದಿಗಳು ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದಾರೆ.
ಎಸ್.ಎಂ.ಕೃಷ್ಣರವರು ಆಕರ್ಷಕ ವ್ಯಕ್ತಿತ್ವ ಉಳ್ಳವರು : ಡಾ.ಬಿ.ಎಲ್.ಶಂಕರ್
ಘಟನೆಯಲ್ಲಿ ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆಗಳಿವೆ ಎಂದು ಅಧಿಕಾರಿಗಳು ವಿವರಣೆ ನೀಡಿದ್ದಾರೆ.
ಮುರ್ಸಿಯಾ ಪ್ರದೇಶದಾದ್ಯಂತ ಸಾರ್ವಜನಿಕ ಕಟ್ಟಡಗಳ ಮೇಲೆ ಧ್ವಜಗಳನ್ನು ಅರ್ಧದಷ್ಟು ಹಾರಿಸುವುದರೊಂದಿಗೆ ನಗರ ಸಭೆಯು ಮೂರು ದಿನಗಳ ಶೋಕಾಚರಣೆಯನ್ನು ಘೋಷಿಸಿದೆ.