Friday, November 22, 2024
Homeರಾಷ್ಟ್ರೀಯ | Nationalಡ್ರಗ್ ಪೆಡ್ಲರ್ ಬಂಧನ : 8.40 ಲಕ್ಷ ಮೌಲ್ಯದ ಮಾದಕ ವಸ್ತು ಜಪ್ತಿ

ಡ್ರಗ್ ಪೆಡ್ಲರ್ ಬಂಧನ : 8.40 ಲಕ್ಷ ಮೌಲ್ಯದ ಮಾದಕ ವಸ್ತು ಜಪ್ತಿ

ಬೆಂಗಳೂರು,ಜ.2- ಹೊಸ ವರ್ಷದ ಸಂಭ್ರಮಾಚರಣೆ ಹಿನ್ನಲೆಯಲ್ಲಿ ಸಿಸಿಬಿ ಪೊಲೀಸರು ಡ್ರಗ್ ಪೆಡ್ಲರ್‍ಗಳ ಮೇಲೆ ವಿಶೇಷ ಕಾರ್ಯಾಚರಣೆ ನಡೆಸಿ ಡ್ರಗ್ ಪೆಡ್ಲರ್ ಒಬ್ಬನನ್ನು ಬಂಧಿಸಿ 8.40 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಹಲಸೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದೊಮ್ಮಲೂರಿನ ನಿವಾಸಿ, ಬಿಎ ಪದವೀಧರನಾಗಿರುವ ಈ ಡ್ರಗ್ ಪೆಡ್ಲರ್‍ನನ್ನು ಬಂಧಿಸಿ 25 ಗ್ರಾಂ ಎಂಡಿಎಂಎ ಕ್ರಿಸ್ಟಲ್, 30 ಎಕ್ಸ್‍ಟಸಿ ಮಾತ್ರೆಗಳು, 1.54 ಕೆಜಿ ಗಾಂಜಾ ಮತ್ತು ಕೃತ್ಯಕ್ಕೆ ಬಳಸಿದ್ದ ಇತರೆ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಲೋಕಾಯುಕ್ತ ಅಧಿಕಾರಿ ಹೆಸರಲ್ಲಿ ಹಣ ವಸೂಲಿ : ವಂಚಕ ಸೆರೆ

ಹೊಸ ವರ್ಷಾಚರಣೆ ಸಂದರ್ಭದಲ್ಲಿ ಡ್ರಗ್ ಪೆಡ್ಲಿಂಗ್ ಮಾಡಿ ಅಕ್ರಮ ಹಣ ಸಂಪಾದನೆ ಮಾಡುವ ಉದ್ದೇಶದಿಂದ ನಿಷೇಧಿತ ಮಾದಕವಸ್ತುಗಳಾದ ಎಂಡಿಎಂಎ ಕ್ರಿಸ್ಟಲ್, ಎಕ್ಸ್‍ಟಸಿ ಪಿಲ್ಸ್‍ಗಳು ಮತ್ತು ಗಾಂಜಾವನ್ನು ಸ್ಥಳೀಯ ಡ್ರಗ್ ಪೆಡ್ಲರ್‍ಗಳಿಂದ ಖರೀದಿಸಿ ಪರಿಚಯಸ್ಥ ಗಿರಾಕಿಗಳಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡಿ ಅಕ್ರಮ ಹಣ ಸಂಪಾದನೆಯಲ್ಲಿ ತೊಡಗಿದ್ದನು.

ಈತನ ವಿರುದ್ಧ ಹಲಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ. ಈ ಕಾರ್ಯಾ ಚರಣೆಯನ್ನು ಸಿಸಿಬಿ ಮಾದಕದ್ರವ್ಯ ನಿಗ್ರಹದಳದ ಅಕಾರಿ ಮತ್ತು ಸಿಬ್ಬಂದಿ ತಂಡವು ಯಶಸ್ವಿಯಾಗಿ ಕೈಗೊಂಡಿರುತ್ತಾರೆ.

RELATED ARTICLES

Latest News