ಲೋಕಸಭಾ ಚುನಾವಣೆ ಫಲಿತಾಂಶ ಬಳಿಕ ರಾಜ್ಯ ರಾಜಕೀಯದಲ್ಲಿ ಭಾರಿ ಬದಲಾವಣೆ ಸಾಧ್ಯತೆ..?

ಬೆಂಗಳೂರು,ಮೇ 15- ಲೋಕಸಭಾ ಚುನಾವಣೆ ಫಲಿತಾಂಶದ ಬಳಿಕ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಬದಲಾವಣೆಗಳಾಗಲಿದ್ದು, ನಿಗಮಮಂಡಳಿಗಳ ಅಧ್ಯಕ್ಷರ ಸ್ಥಾನಪಲ್ಲಟ ಹಾಗೂ ಸಚಿವ ಸಂಪುಟ ಪುನರ್‌ ರಚನೆ ಕುರಿತು ಚರ್ಚೆಗಳಾಗುವ ನಿರೀಕ್ಷೆಗಳಿವೆ. ನಿಗಮ ಮಂಡಳಿಗಳಿಗೆ ಕಳೆದ ಆರು ತಿಂಗಳಿಂದೀಚೆಗೆ ನೇಮಕಾತಿಗಳಾಗಿದ್ದು, ಎರಡೂವರೆ ವರ್ಷಗಳ ಕಾಲಾವಧಿ ಅಧಿಕಾರ ನೀಡಲಾಗಿದೆ. ಹೀಗಾಗಿ ಇನ್ನೂ ಎರಡು ವರ್ಷ ಅಧ್ಯಕ್ಷರ ಅವಧಿ ಅಬಾಧಿತ ಎಂದು ಬಿಂಬಿಸಲಾಗಿದೆ. ಆದರೆ ಬಹಳಷ್ಟು ಮಂದಿ ಲೋಕಸಭಾ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂಬ ದೂರುಗಳಿವೆ. ಅವರುಗಳನ್ನು ವಜಾಗೊಳಿಸಿ ಪಕ್ಷ … Continue reading ಲೋಕಸಭಾ ಚುನಾವಣೆ ಫಲಿತಾಂಶ ಬಳಿಕ ರಾಜ್ಯ ರಾಜಕೀಯದಲ್ಲಿ ಭಾರಿ ಬದಲಾವಣೆ ಸಾಧ್ಯತೆ..?