ಬೆಂಗಳೂರು, ಜ.4- ನವ ವಿವಾಹಿತ ನೇಣು ಬಿಗಿದುಕೊಂಡು ಆತಹತ್ಯೆ ಮಾಡಿಕೊಂಡಿರುವ ಘಟನೆ ಆರ್ಟಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಆತಹತ್ಯೆ ಮಾಡಿಕೊಂಡಿರುವ ವ್ಯಕ್ತಿಯನ್ನು ರಾಜಸ್ಥಾನ ಮೂಲದ ದೇವಿಲಾಲ್ (25) ಎಂದು ಗುರುತಿಸಲಾಗಿದೆ.
ಠಾಣಾ ವ್ಯಾಪ್ತಿಯ ಚಾಮುಂಡಿನಗರದಲ್ಲಿ ನೆಲೆಸಿದ್ದ ದೇವಿಲಾಲ್ ಒಂದು ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ. ಆತ ನಿನ್ನೆ ಮನೆಯಲ್ಲಿ ಒಬ್ಬರೇ ಇದ್ದಾಗ ಫ್ಯಾನ್ಗೆ ನೇಣು ಬಿಗಿದುಕೊಂಡು ಆತಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಈ ಸಂಜೆಗೆ ತಿಳಿಸಿದ್ದಾರೆ.
ದೇವಿಲಾಲ್ ಅವರ ತಂದೆ ಆಭರಣ ಮಳಿಗೆ ಇಟ್ಟುಕೊಂಡಿದ್ದರು. ಅದರ ಉಸ್ತುವಾರಿಯನ್ನು ದೇವಿಲಾಲ್ ನೋಡಿಕೊಳ್ಳುತ್ತಿದ್ದರು ಎನ್ನಲಾಗಿದೆ. ಮನೆಯವರೆಲ್ಲ ರಾಜಸ್ಥಾನಕ್ಕೆ ತೆರಳಿದ್ದರು. ದೇವಿಲಾಲ್ ಇಂದು ರಾಜಸ್ಥಾನಕ್ಕೆ ಹೋಗಬೇಕಾಗಿತ್ತು. ಆದರೆ, ನಿನ್ನೆ ಮನೆಯಲ್ಲಿ ಆತಹತ್ಯೆ ಮಾಡಿಕೊಂಡಿರುವುದು ಕಂಡುಬಂದಿದೆ.
ದೇವಿಲಾಲ್ ಆತಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಆರ್ಟಿ ನಗರ ಠಾಣೆ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.