ತಿರುವನಂತಪುರ,ನ.10- ಶಬರಿಮಲೆಗೆ ತೆರಳುವ ಅಯ್ಯಪ್ಪನ ಭಕ್ತರಿಗೆ ದೇವಸ್ಥಾನದ ಆಡಳಿತ ಮಂಡಳಿ ಆಧಾರ್ ಕಾರ್ಡ್ನ್ನು ಕಡ್ಡಾಯಗೊಳಿಸಿ ಮಹತ್ವದ ಸೂಚನೆ ನೀಡಿದೆ. ಕಾರ್ತಿಕ ಮಾಸವಾಗಿರುವುದರಿಂದ ಈ ಸಂದರ್ಭದಲ್ಲಿ ಹಲವು ದೇವಾಲಯಗಳಲ್ಲಿ ಭಕ್ತರ ಸಂಖ್ಯೆ ಹೆಚ್ಚಾಗಿ ಇರುತ್ತದೆ.
ಇನ್ನು ಕಾರ್ತಿಕ ಮಾಸದಲ್ಲಿ ಮಾಲೆ ಧರಿಸುವ ಸ್ವಾಮಿಗಳ ಸಂಖ್ಯೆಯೂ ಹೆಚ್ಚಿರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಎಂದು ತಿರುವಾಂಕೂರು ದೇವಸ್ಥಾನ ಮಂಡಳಿ ತಿಳಿಸಿದೆ.ಅಯ್ಯಪ್ಪ ದರ್ಶನಕ್ಕೆ ದಿನಕ್ಕೆ 70 ಸಾವಿರ ಭಕ್ತರಿಗೆ ಅವಕಾಶ ನೀಡುವುದಾಗಿ ತಿಳಿಸಿರುವ ತಿರುವಾಂಕೂರು ದೇವಸ್ಥಾನದ ಅಧ್ಯಕ್ಷ ಪ್ರಶಾಂತ್ ತಿಳಿಸಿದ್ದಾರೆ.
ಮಕರವಿಳಕ್ಕು ಋತುವಿನ ಪ್ರಕಾರ ಆನ್ಲೈನ್ ಬುಕಿಂಗ್ ಆಧಾರದ ಮೇಲೆ ಪ್ರತಿದಿನ 70,000 ಭಕ್ತರಿಗೆ ಪ್ರವೇಶಕ್ಕೆ ಅವಕಾಶ ನೀಡಲಾಗುವುದು, ತ್ವರಿತ ಬುಕಿಂಗ್ ಆಧಾರದ ಮೇಲೆ ಇನ್ನೂ 10,000 ಜನರಿಗೆ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ ಎಂದು ಅವರು ಹೇಳಿದ್ದಾರೆ.