ಕೋಹಿಮಾ,ಜ.26-ಮುಂಬರುವ ನಾಗಾಲ್ಯಾಂಡ್ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಪಕ್ಷ ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳದೆ ಸಾಧ್ಯವಾದಷ್ಟು ಕ್ಷೇತ್ರಗಳಲ್ಲಿ ಏಕಾಂಗಿಯಾಗಿ ಸ್ರ್ಪಧಿಸಲಿದೆ ಎಂದು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ರಾಜೇಶ್ ಶರ್ಮ ತಿಳಿಸಿದ್ದಾರೆ.
ಇದೇ ಸಂದರ್ಭದಲ್ಲಿ ಅವರು ಮಾಜಿ ಶಾಸಕ ಆಶು ಕೇಹೋ ಅವರನ್ನು ನಾಗಾಲ್ಯಾಂಡ್ನ ಎಎಪಿ ಪಕ್ಷದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಘೋಷಿಸಿದರು. 60 ಕ್ಷೇತ್ರಗಳನ್ನೊಳಗೊಂಡಿರುವ ನಾಗಾಲ್ಯಾಂಡ್ ವಿಧಾನಸಭಾ ಕ್ಷೇತ್ರಗಳಿಗೆ ಬರುವ ಫೆ.27ರಂದು ಚುನಾವಣೆ ನಡೆಯಲಿದೆ.
ಇದೇ ಮೊದಲ ಬಾರಿಗೆ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಹಾರಾಡಿದ ತಿರಂಗಾ
ನಮ್ಮ ಪಕ್ಷ ಎಷ್ಟು ಸಾಧ್ಯವೋ ಅಷ್ಟು ಕ್ಷೇತ್ರಗಳಲ್ಲಿ ಸ್ರ್ಪಧಿಸಲಿದೆ ಯಾವುದೆ ಪಕ್ಷದೊಂದಿಗೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳದಿರಲು ತೀರ್ಮಾನಿಸಲಾಗಿದೆ ಎಂದು ಅವರು ಹೇಳಿದರು.
ಭ್ರಷ್ಟಾಚಾರ ಕಿತ್ತೊಗೆಯಲು ಹಾಗೂ ಉತ್ತಮ ಆಡಳಿತ ಬಯಸಿರುವ ನಾಗಾಲ್ಯಾಂಡ್ ಜನತೆ ಈ ಬಾರಿ ನಮ್ಮ ಪಕ್ಷಕ್ಕೆ ಅಭೂತಪೂರ್ವ ಬೆಂಬಲ ನೀಡಲಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
AAP, Nagaland, contest, upcoming, election,