Saturday, July 27, 2024
Homeರಾಷ್ಟ್ರೀಯಕೇಜ್ರಿವಾಲ್ ಬಂಧನ ವಿರೋಧಿಸಿ ಸಾಮೂಹಿಕ ಉಪವಾಸ ಸತ್ಯಾಗ್ರಹ

ಕೇಜ್ರಿವಾಲ್ ಬಂಧನ ವಿರೋಧಿಸಿ ಸಾಮೂಹಿಕ ಉಪವಾಸ ಸತ್ಯಾಗ್ರಹ

ನವದೆಹಲಿ,ಏ.7- ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿಯನ್ನು ಬಂಧಿಸಿರುವುದನ್ನು ವಿರೋಧಿಸಿ ಆಮ್ ಆದ್ಮಿ ಪಕ್ಷದ (ಎಎಪಿ) ಮುಖಂಡರು ಮತ್ತು ಕಾರ್ಯಕರ್ತರು ಇಂದು ಸಾಮೂಹಿಕ ಉಪವಾಸ ಸತ್ಯಾಗ್ರಹ ಆಚರಿಸುತ್ತಿದ್ದಾರೆ.

ಅರವಿಂದ್ ಕೇಜ್ರಿವಾಲ್ ಅವರ ಬೆಂಬಲಿಗರು ಭಾರತ ಮತ್ತು ವಿದೇಶಗಳಲ್ಲಿ ಪಕ್ಷದ ಕಾರ್ಯಕರ್ತರು ಸಾಮೂಹಿಕ ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುತ್ತಿದ್ದಾರೆ ಎಂದು ಎಎಪಿ ನಾಯಕ ಗೋಪಾಲ್ ರೈ ತಿಳಿಸಿದ್ದಾರೆ.
ಜನರು ತಮ್ಮ ಮನೆಗಳಲ್ಲಿ ಉಪವಾಸವನ್ನು ಆಚರಿಸಬಹುದು ಮತ್ತು ದೆಹಲಿ ಮುಖ್ಯಮಂತ್ರಿಯನ್ನು ಬೆಂಬಲಿಸಬಹುದು ಎಂದು ಅವರು ಇದೇ ಸಂದರ್ಭದಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಎಎಪಿಯ ಎಲ್ಲಾ ಶಾಸಕರು, ಪದಾಧಿಕಾರಿಗಳು ಸಾಮೂಹಿಕ ಉಪವಾಸಕ್ಕಾಗಿ ಜಂತರ್ ಮಂತರ್‍ನಲ್ಲಿ ಜಮಾಯಿಸಿ ಪ್ರತಿಭಟನೆ ನಡೆಸುತ್ತಿರುವುದರಿಂದ ಪೊಲೀಸರು ಬಿಗಿ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಿದ್ದಾರೆ. ಪ್ರತಿಭಟನಾ ಸ್ಥಳಕ್ಕೆ ತೆರಳುವ ರಸ್ತೆಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಭಾರೀ ಬ್ಯಾರಿಕೇಡಿಂಗ್‍ನಿಂದಾಗಿ ಮಧ್ಯ ದೆಹಲಿಯ ಕೆಲವು ಭಾಗಗಳಲ್ಲಿ ಸಂಚಾರಕ್ಕೆ ಭಾರಿ ತೊಂದರೆಯಾಗಿದೆ. ಕೇಜ್ರಿವಾಲ್ ಜೈಲಿನಿಂದ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದರೂ ನಾಯಕತ್ವದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಎಎಪಿ ಸಮರ್ಥಿಸಿಕೊಂಡಿದೆ. ಏತನ್ಮಧ್ಯೆ, ಬಿಜೆಪಿಯು ಕೇಜ್ರಿವಾಲ್ ಅವರ ಜೈಲಿನಿಂದ ಕೆಲಸ ಯೋಜನೆಯನ್ನು ನೆಪವಾಗಿದೆ ಎಂದು ಬಣ್ಣಿಸಿದೆ.

RELATED ARTICLES

Latest News