ಯಶವಂತ್ ಸಿನ್ಹಗೆ ಆಮ್ ಆದ್ಮಿ ಬೆಂಬಲ

Social Share

ನವದೆಹಲಿ, ಜು.16- ರಾಷ್ಟ್ರಪತಿ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಆಮ್ ಆದ್ಮಿ ಪಕ್ಷ ಪ್ರತಿಪಕ್ಷದ ಅಭ್ಯರ್ಥಿ ಯಶವಂತ್ ಸಿನ್ಹ ಅವರಿಗೆ ಬೆಂಬಲ ವ್ಯಕ್ತಪಡಿಸಿದೆ. ಆಮ್ ಆದ್ಮಿ ಪಕ್ಷದ ಸಂಜಯ್‍ಸಿಂಗ್ ಈ ಬಗ್ಗೆ ಹೇಳಿಕೆ ನೀಡಿದ್ದು, ಯಶವಂತ್ ಸಿನ್ಹ ಅವರನ್ನು ಬೆಂಬಲಿಸುವುದಾಗಿ ತಿಳಿಸಿದ್ದಾರೆ.

ಆಡಳಿತ ಪಕ್ಷ ಹಾಗೂ ಎನ್‍ಡಿಎ ಅಭ್ಯರ್ಥಿ ದ್ರೌಪತಿ ಮುರ್ಮು ಅವರನ್ನು ನಾವು ಗೌರವಿಸುತ್ತೇವೆ. ಪಕ್ಷದ ಸಂಸದೀಯ ವ್ಯವಹಾರಗಳ ಸಮಿತಿ ಸಭೆಯಲ್ಲಿ ತೆಗೆದುಕೊಂಡ ನಿರ್ಣಯದ ಪ್ರಕಾರ, ನಮ್ಮ ಶಾಸಕರು ಮತ್ತು ಸಂಸದರು ಯಶವಂತ್ ಸಿನ್ಹ ಅವರಿಗೆ ಮತ ಹಾಕಲಿದ್ದಾರೆ ಎಂದು ತಿಳಿಸಿದ್ದಾರೆ.

ಸೋಮವಾರ ರಾಷ್ಟ್ರಪತಿ ಆಯ್ಕೆಗೆ ಚುನಾವಣೆ ನಡೆಯಲಿದ್ದು, ಅಂತಿಮ ಹಂತದ ಪ್ರಚಾರ ಬಿರುಸು ಪಡೆದುಕೊಂಡಿದೆ. ಆಮ್ ಆದ್ಮಿ ಪಕ್ಷ ದೆಹಲಿ ಮತ್ತು ಪಂಜಾಬ್‍ನಲ್ಲಿ ಅಧಿಕಾರ ನಡೆಸುತ್ತಿದ್ದು, 10 ಸಂಸದರನ್ನು, ಪಂಜಾಬ್‍ನಲ್ಲಿ 92, ದೆಹಲಿಯಲ್ಲಿ 62, ಗೋವಾದಲ್ಲಿ ಇಬ್ಬರು ಶಾಸಕರನ್ನು ಹೊಂದಿದೆ.

Articles You Might Like

Share This Article