ನವದೆಹಲಿ,ಫೆ.2-ಆಮ್ ಆದ್ಮಿ ಪಕ್ಷ ಹಾಗು ಬಿಜೆಪಿ ನಡುವಿನ ಸಮರ ದಿನೇ ದಿನೇ ಹೆಚ್ಚಾಗುತ್ತಿದೆ. ಪ್ರಸ್ತುತ ಚಂಡೀಗಢ ಮೇಯರ್ ಚುನಾವಣೆ ಅಕ್ರಮವಾಗಿ ನಡೆದಿದೆ ಎಂದು ಎಎಪಿ ಇಂದು ಬಿಜೆಪಿ ಪ್ರಧಾನ ಕಚೇರಿಯ ಹೊರಗೆ ಪ್ರತಿಭಟನೆ ನಡೆಸಿದರೆ ಮತ್ತೊಂದೆಡೆ ಅರವಿಂದ್ ಕೇಜ್ರಿವಾಲ್ ಸರ್ಕಾರದ ಭ್ರಷ್ಟಾಚಾರ ವಿರುದ್ಧ ಎಎಪಿ ಕೇಂದ್ರ ಕಚೇರಿ ಬಳಿ ಬಿಜೆಪಿ ಕಾರ್ಯಕರ್ತರು, ಮುಖಂಡರು ಪ್ರತಿಭಟನೆ ನಡೆಸಿದ್ದಾರೆ.
ದೆಹಲಿಯ ಕೇಂದ್ರ ಪ್ರದೇಶದಲ್ಲಿರುವ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಮಾರ್ಗದಲ್ಲಿಎರಡೂ ಪಕ್ಷದ ಕಚೇರಿ ಇದ್ದು ಭಧ್ರತೆಗಾಗಿ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಕಾನೂನು ಉಲ್ಲಂಘಿಸಲು ಯಾರಿಗೂ ಅವಕಾಶ ನೀಡುವುದಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿ ಹೇಳಿದ್ದು ಈ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ತೊಂದರೆಯಾಗಲಿದ್ದು, ಬದಲಿ ಮಾರ್ಗ ಮಾಡಲಾಗಿತ್ತು.
ಈಗಾಗಲೆ ಜಾರಿ ನಿರ್ದೇಶನಾಲಯ ನೀಡಿರುವ 5 ಸಮನ್ಸ್‍ಗಳಿಗೆ ಕ್ಯಾರೆ ಎನ್ನದ ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ರಾಷ್ಟ್ರೀಯ ಸಂಚಾಲಕ ಕೇಜ್ರಿವಾಲ್ ಮತ್ತು ಅವರ ಪಂಜಾಬ್ ಸಿಎಂ ಭಗವಂತ್ ಮಾನ್ ತಮ್ಮ ಪಕ್ಷದ ಪ್ರತಿಭಟನೆಯಲ್ಲಿ ಭಾಗವಹಿಸಿ ಬಿಜೆಪಿ ವಿರುದ್ದ ಹರಿಹಾಯ್ದಿದ್ದಾರೆ.
ಕರ್ನಾಟಕಕ್ಕೆ ಕೇಂದ್ರ ಹಣಕಾಸು ಸಚಿವರ ಕೊಡುಗೆ ಏನು..? : ಸಚಿವ ಖರ್ಗೆ ಪ್ರಶ್ನೆ
ದೆಹಲಿ ಬಿಜೆಪಿ ಅಧ್ಯಕ್ಷ ವೀರೇಂದ್ರ ಸಚ್‍ದೇವ ಮತ್ತು ದೆಹಲಿ ವಿಧಾನಸಭೆಯ ವಿರೋಧ ಪಕ್ಷದ ನಾಯಕ ರಾಮ್‍ವೀರ್ ಸಿಂಗ್ ಬಿಧುರಿ ಮತ್ತು ಇತರರು ಕೇಜ್ರಿವಾಲ್ ಸರ್ಕಾರದ ಭ್ರಷ್ಟಾಚಾರದ ವಿರುದ್ದ ಟೀಕಾ ಪ್ರಹಾರ ನಡೆಸಿದ್ದಾರೆ ಒಟ್ಟಾರೆ ದೆಹಲಿಯಲ್ಲಿ ಪ್ರತಿಭಟನಾ ಕಾವು ಜೋರಾಗಿತ್ತು.