ಪರ್ತ್,ಫೆ.7- ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಮುಂಚೂಣಿ ಆಟಗಾರ ಆ್ಯರೋನ್ ಫಿಂಚ್ ಅವರು ಅಂತರರಾಷ್ಟ್ರೀಯ ಕ್ರಿಕೆಟ್‍ಗೆ ಇಂದು ದಿಢೀರ್ ನಿವೃತ್ತಿ ಘೋಷಿಸಿದ್ದಾರೆ.
ಪ್ರಸ್ತುತ ಆಸ್ಟ್ರೇಲಿಯಾ ಟಿ-20 ತಂಡದ ನಾಯಕರಾಗಿದ್ದ ಫಿಂಚ್ ಇಂದು ಬೆಳಿಗ್ಗೆ ನಿವೃತ್ತಿ ಘೋಷಿಸಿ ಕ್ರಿಕೆಟ್ ಪ್ರಿಯರಿಗೆ ಶಾಕ್ ನೀಡಿದ್ದಾರೆ. ಈ ಮೂಲಕ ತಮ್ಮ 12 ವರ್ಷಗಳ ಅಂತರರಾಷ್ಟ್ರೀಯ ಕ್ರಿಕೆಟ್ ವೃತ್ತಿ ಜೀವನ ಅಂತ್ಯಗೊಳಿಸಿದ್ದಾರೆ.
ಮುಂದಿನ 2024ರ ಟಿ 20 ವಿಶ್ವಕಪ್ ವರೆಗೆ ನಾನು ಆಡುವುದು ಅನುಮಾನ. ಹೀಗಾಗಿ ಟಿ20 ನಾಯಕತ್ವದಿಂದ ಕೆಳಗಿಳಿಯಲು ಇದು ಸರಿಯಾದ ಸಮಯ. 12 ವರ್ಷಗಳ ಕಾಲ ಆಸ್ಟ್ರೇಲಿಯಾವನ್ನು ಪ್ರತಿನಿಧಿಸಲು ಮತ್ತು ಸಾರ್ವಕಾಲಿಕ ಶ್ರೇಷ್ಠ ಆಟಗಾರರೊಂದಿಗೆ ಆಡಲು ಸಾಧ್ಯವಾಗಿರುವುದು ನಂಬಲಾಗದ ಗೌರವವಾಗಿದೆ ಮತ್ತು ಹೆಮ್ಮೆಯಾಗುತ್ತದೆ ಎಂದು ಫಿಂಚ್ ಹೇಳಿದ್ದಾರೆ.
ಪೆರುವಿನಲ್ಲಿ ಭೂ ಕುಸಿತು, 36 ಮಂದಿ ಸಾವು
ಇಂಗ್ಲೆಂಡ್ ವಿರುದ್ಧದ ಕಳೆದ 2011ರಲ್ಲಿ ನಡೆದ ಪಂದ್ಯದಲ್ಲಿ ಆಸಿಸ್ ಆಟಗಾರನಾಗಿ ಅಂತರರಾಷ್ಟ್ರೀಯ ಕ್ರಿಕೆಟ್‍ಗೆ ಫಿಂಚ್ ಪದಾರ್ಪಣೆ ಮಾಡಿದ್ದರು. ಅಬ್ಬರದ ಬ್ಯಾಟಿಂಗ್ ಮೂಲಕ ಗಮನ ಸೆಳೆದಿದ್ದ ಫಿಂಚ್ ಕಳೆದ 2013ರಲ್ಲಿ ಇಂಗ್ಲೆಂಡ್ ವಿರುದ್ಧದ ಟಿ20ಯಲ್ಲಿ 63 ಎಸೆತದಲ್ಲಿ 156 ರನ್‍ಗಳಿಸಿ ಎಲ್ಲರ ಹುಬೇರುವಂತೆ ಮಾಡಿ ದಾಖಲೆ ನಿರ್ಮಿಸಿದ್ದರು.
ಆಸ್ಟ್ರೇಲಿಯಾ ಟಿ20 ಕ್ರಿಕೆಟ್ ತಂಡದ ನಾಯಕರಾಗಿ ದಾಖಲೆಯ 76 ಪಂದ್ಯಗಳಲ್ಲಿ ತಮ್ಮ ತಂಡವನ್ನು ಮುನ್ನಡೆಸಿರುವ ಆ್ಯರೋನ್ ಫಿಂಚ್ ಇದೀಗ ಎಲ್ಲ ಮಾದರಿಯ ಅಂತರರಾಷ್ಟ್ರೀಯ ಕ್ರಿಕೆಟ್‍ನಿಂದ ಹಿಂದೆ ಸರಿದಿದ್ದಾರೆ.
ಫಿಂಚ್ ಇಲ್ಲಿಯವರೆಗೂ ಏಕದಿನ ,ಟೆಸ್ಟ್ ಸೇರಿದಂತೆ 254 ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ಆಸ್ಟ್ರೇಲಿಯಾ ತಂಡವನ್ನು ಪ್ರತಿನಿಧಿಸಿದ್ದಾರೆ. ಇದರಲ್ಲಿ 19 ಶತಕಗಳೊಂದಿಗೆ 8804 ರನ್‍ಗಳನ್ನು ಸಿಡಿಸಿದ್ದಾರೆ. ಇಲ್ಲಿಯವರೆಗೂ 103 ಟಿ20 ಪಂದ್ಯಗಳಾಡಿರುವ ಅವರು, 76 ಪಂದ್ಯಗಳನ್ನು ಆಸ್ಟ್ರೇಲಿಯಾ ತಂಡವನ್ನು ಮುನ್ನಡೆಸಿದ್ದಾರೆ.
Aaron Finch, Announces, Retirement, International Cricket,