ಬೆಂಗಳೂರು, ಫೆ.9- ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಅವರು 2ನೇ ಮಗುವಿನ ತಂದೆಯಾಗುತ್ತಿದ್ದಾರೆ ಎಂದು ತಾವು ಹೇಳಿದ್ದ ಹೇಳಿಕೆಗೆ ಆರ್ಸಿಬಿಯ ಮಾಜಿ ಸ್ಪೋಟಕ ಆಟಗಾರ ಎಬಿಡಿವಿಲಿಯರ್ಸ್ ಅವರು ಉಲ್ಟಾ ಹೊಡೆದಿದ್ದಾರೆ.
ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ 5 ಪಂದ್ಯಗಳ ಟೆಸ್ಟ್ ಸರಣಿಯ ಆರಂಭಿಕ 2 ಪಂದ್ಯಗಳಿಂದ ವೈಯಕ್ತಿಕ ಕಾರಣ ನೀಡಿ ವಿರಾಟ್ ಕೊಹ್ಲಿ ಅವರು ವಿಶ್ರಾಂತಿ ಪಡೆದಿದ್ದರು, ಅದಕ್ಕೆ ಸ್ಪಷ್ಟ ಕಾರಣ ತಿಳಿಸುವಂತೆ ಅಭಿಮಾನಿಗಳು ಬಿಸಿಸಿಐ ಅನ್ನು ಆಗ್ರಹಿಸಿದ್ದರು.
ಈ ನಡುವೆ ವಿರಾಟ್ಕೊಹ್ಲಿಯ ಆಪ್ತ ಗೆಳೆಯ ಹಾಗೂ ದಕ್ಷಿಣ ಆಫ್ರಿಕಾದ ಮಾಜಿ ನಾಯಕ ಎಬಿಡಿವಿಲಿಯರ್ಸ್ ಅವರು ವಿರಾಟ್ ಕೊಹ್ಲಿ ಹಾಗೂ ಅನುಷ್ಕಾಶರ್ಮಾ ಅವರು ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಇಂತಹ ಸಮಯದಲ್ಲಿ ಅವರು ಕುಟುಂಬದೊಂದಿಗೆ ಕಾಲ ಕಳೆಯುವುದು ಮುಖ್ಯವಾಗುತ್ತದೆ. ಅವರ ನಿರ್ಧಾರವನ್ನು ನಾನು ಸ್ವೀಕರಿಸುತ್ತೇನೆ ಎಂದು ತಮ್ಮ ಅಧಿಕೃತ ಯುಟ್ಯೂಬ್ ಚಾನೆಲ್ನಲ್ಲಿ ಅಪ್ಲೋಡ್ ಮಾಡಿ ಸಂಚಲನ ಸೃಷ್ಟಿಸಿದ್ದರು.
ಈಶ್ವರಪ್ಪ ಆಟಕ್ಕುಂಟು, ಲೆಕ್ಕಕ್ಕಿಲ್ಲ : ಪ್ರಿಯಾಂಕ್ ಖರ್ಗೆ ಲೇವಡಿ
ಆದರೆ ಈಗ ಎಬಿಡಿವಿಲಿಯರ್ಸ್ ಅವರು ತಾನು ಈ ಹಿಂದೆ ಸುಳ್ಳು ಹೇಳಿಕೆಯನ್ನು ನೀಡಿದ್ದು , ಕೊಹ್ಲಿ ಇಂಗ್ಲೆಂಡ್ ಸರಣಿಯಿಂದ ಏಕೆ ವಿಶ್ರಾಂತಿ ಪಡೆದಿದ್ದಾರೆ ಎಂಬುದು ನನಗೆ ತಿಳಿದಿಲ್ಲ. ಅವರು ಶೀಘ್ರ ಆರೋಗ್ಯಕರ ಹಾಗೂ ತಾಜಾತನದಿಂದ ಮರಳುತ್ತಾರೆ ಎಂಬ ನಂಬಿಕೆ ನನಗಿದೆ ಎಂದು ಎಬಿ ಡಿವಿಲಿಯರ್ಸ್ ಹೇಳಿದ್ದಾರೆ.