ಮೈಸೂರು,ಜು.25- ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳಲಿರುವ ಗಜಪಡೆಯ ಮೊದಲ ಪಟ್ಟಿ ಬಿಡುಗಡೆಯಾಗಿದ್ದು, ಈ ಬಾರಿಯೂ ಕ್ಯಾಪ್ಟನ್ ಅಭಿಮನ್ಯು ಅಂಬಾರಿ ಹೊರಲಿದ್ದಾನೆ.
2025ನೇ ಸಾಲಿನ ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳುವ ಒಟ್ಟು 14 ಆನೆಗಳ ಪೈಕಿ 9 ಅನೆಗಳ ಪಟ್ಟಿಯನ್ನು ಅರಣ್ಯ ಸಚಿವ ಈಶ್ವರ್ ಖಂಡ್ರೆ ಬಿಡಗಡೆ ಮಾಡಿದರು.ಸತತ ಐದನೇ ಬಾರಿಯೂ ಕ್ಯಾಪ್ಟನ್ ಅಭಿಮನ್ಯು ನಾಡದೇವಿ ಚಾಮುಂಡೇಶ್ವರಿ ತಾಯಿ ವಿಗ್ರಹವಿರುವ ಸುಮಾರು 750 ಕೆಜಿ ತೂಕದ ಅಂಬಾರಿಯನ್ನು ಹೊತ್ತು ಹೆಜ್ಜೆ ಹಾಕಲಿದ್ದಾನೆ.
ಆಗಸ್ಟ್ 4 ರಂದು ಹುಣಸೂರು ಬಳಿಯ ವೀರನಹೊಸಳ್ಳಿಯಿಂದ ಮೊದಲ ತಂಡದ ಗಜಪಯಣಕ್ಕೆ ಚಾಲನೆ ನೀಡಲಾಗುವುದು ಎಂದರು. ಮೊದಲ ಗಜಪಡೆಯ ಪಟ್ಟಿಯಲ್ಲಿ ಮತ್ತಿಗೋಡು ಆನೆ ಶಿಬಿರದ ಭೀಮ(24), ಕಂಜನ್ (24), ಧನಂಜಯ್(44), ಪ್ರಶಾಂತ(53), ಬಳ್ಳೆ ಆನೆ ಶಿಬಿರದಿಂದ ಮಹೇಂದ್ರ (42), ಲಕ್ಷ್ಮಿ (53), ದೊಡ್ಡಹರವೆ ಶಿಬಿರದ ಏಕಲವ್ಯ(40), ದುಬಾರೆ ಶಿಬಿರದ ಕಾವೇರಿ(45) ಆನೆಗಳು ಆ.4 ರಂದು ಅರಮನೆ ನಗರಿಯತ್ತ ತೆರಳಲಿವೆ.