ಅಭಿಷೇಕ್ ಅಂಬರೀಷ್‍ – ಅವಿವಾ ಬಿದ್ದಪ್ಪ ನಿಶ್ಚಿತಾರ್ಥ

Social Share

ಬೆಂಗಳೂರು, ಡಿ.11- ನಟ ಯಂಗ್ ರೆಬೆಲ್‍ಸ್ಟಾರ್ ಅಭಿಷೇಕ್ ಅಂಬರೀಷ್ ಹಾಗೂ ಫ್ಯಾಷನ್ ಲೋಕದಲ್ಲಿ ಹೆಸರು ಮಾಡಿರುವ ಅವಿವಾ ಬಿದ್ದಪ್ಪ ಅವರ ನಿಶ್ಚಿತಾರ್ಥವು ಇಂದು ಖಾಸಗಿ ಹೊಟೇಲ್‍ನಲ್ಲಿ ಅದ್ಧೂರಿಯಾಗಿ ನೆರವೇರಿದೆ.

ಕೆಲವು ದಿನಗಳ ಹಿಂದೆಯಷ್ಟೇ ಅಭಿಷೇಕ್ ಅಂಬರೀಷ್ ಹಾಗೂ ಅವಿವಾ ಬಿದ್ದಪ್ಪ ಅವರು ಹಸೆಮಣೆ ಏರಲಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿದ್ದವು, ಅದಕ್ಕೆ ಇಂಬು ಕೊಡುವಂತೆ ಇಂದು ನಗರದ ಖಾಸಗಿ ಹೊಟೇಲ್‍ನಲ್ಲಿ ಅದ್ಧೂರಿಯಾಗಿ ನಿಶ್ಚಿತಾರ್ಥವು ನೆರವೇರಿದೆ.

ಬಲವಂತದ ಮತಾಂತರ : ಪಾಕ್ ಮೌಲಾನಗಳಿಗೆ ಬ್ರಿಟನ್ ನಿಷೇಧ

ನಗರದ ಪ್ರತಿಷ್ಠಿತ ಫೋರ್ ಸೀಸನ್ಸ್ ಹೊಟೇಲ್‍ನಲ್ಲಿ ನಡೆದ ನಿಶ್ಚಿತಾರ್ಥದಲ್ಲಿ ಅಂಬರೀಷ್ ಹಾಗೂ ಫ್ಯಾಷನ್ ಲೋಕದ ದಿಗ್ಗಜ ಪ್ರಸಾದ್ ಬಿದ್ದಪ್ಪರ ಕುಟುಂಬದವರು, ಸಚಿವ ಅಶ್ವತ್ಥ ನಾರಾಯಣ, ನಿರ್ದೇಶಕ ಆಯೋಗ್ಯ ಮಹೇಶ್, ರಾಕ್ ಲೈನ್ ವೆಂಕಟೇಶ್ ಸೇರಿದಂತೆ ಕೆಲ ನಿರ್ಮಾಪಕರು, ನಿರ್ದೇಶಕರು, ಆಪ್ತೇಷ್ಟರು ಮಾತ್ರ ಪಾಲ್ಗೊಂಡಿದ್ದರು.

ಎರಡು ಕುಟುಂಬದವರ ಸದಸ್ಯರು ಹಾಗೂ ಬಂಧುಗಳ ಸಮ್ಮುಖದಲ್ಲಿ ನಟ ಅಭಿಷೇಕ್ ಅಂಬರೀಷ್ ಹಾಗೂ ಅವಿವಾ ಬಿದ್ದಪ್ಪ ಅವರು ಪರಸ್ಪರ ಉಂಗುರಗಳನ್ನು ಬದಲಾಯಿಸಿ ಕೊಂಡು ನಿಶ್ಚಿತಾರ್ಥ ಮಾಡಿ ಕೊಂಡರು.

ಕೆಲವು ದಿನಗಳ ಹಿಂದಷ್ಟೇ ನಟಿ ಹಾಗೂ ಸಂಸದೆ ಮಗನ ಮದುವೆಗೆ ನೀವೇ ಹುಡುಗಿಯನ್ನು ಹುಡುಕಿ ಎಂದು ಅಭಿಮಾನಿಗಳಿಗೆ ಹೇಳುವ ಮೂಲಕ ಸದ್ಯಕ್ಕೆ ಅಭಿಷೇಕ್ ಅಂಬರೀಷ್ ಮದುವೆಯ ಯೋಚನೆ ಇಲ್ಲ ಎಂದು ಹೇಳಿದ್ದರು. ಆದರೆ ಇಂದು ಅಭಿಷೇಕ್ ಹಾಗೂ ಅವಿವಾ ನಿಶ್ಚಿತಾರ್ಥ ಮಾಡಿಕೊಂಡಿರುವುದು ಅಭಿಮಾನಿಗಳಿಗೆ ಸಪ್ರೈಸ್ ಆಗಿದೆ. ಸಾಮಾಜಿಕ ಜಾಲತಾಣ ಗಳಲ್ಲಿ ಅಭಿಮಾನಿಗಳು ಶುಭ ಕೋರಿದ್ದಾರೆ.

ಆಪರೇಷನ್ ಅಂತದ ಪುಟ್ಟ ಪಾತ್ರದಲ್ಲಿ ನಟಿಸಿದ್ದ ಅಭಿಷೇಕ್,ಅಮರ್ ಚಿತ್ರದ ಮೂಲಕ ಪೂರ್ಣ ಪ್ರಮಾಣದ ನಾಯಕರಾದರು. ಬ್ಯಾಡ್ ಮ್ಯಾನರ್ಸ್ ಹಾಗೂ ಅಯೋಗ್ಯ ಮಹೇಶ್‍ರ ಹೊಸ ಚಿತ್ರದಲ್ಲಿ ಅಭಿಷೇಕ್ ಅಂಬರೀಷ್ ನಟಿಸುತ್ತಿದ್ದಾರೆ.

ವಲಸಿಗರ ಚಲನವಲನಗಳ ಮೇಲೆ ಬಿಜೆಪಿ ಹದ್ದಿನ ಕಣ್ಣು

ಇತ್ತೀಚೆಗಷ್ಟೇ ನಟಿ ಅದಿತಿ ಪ್ರಭುದೇವ ಅದ್ದೂರಿಯಾಗಿ ಮದುವೆ ಮಾಡಿಕೊಂಡಿದ್ದರೆ, ನಟ ವಸಿಷ್ಠ ಸಿಂಹ ಹಾಗೂ ನಟಿ ಹರಿಪ್ರಿಯಾರ ನಿಶ್ಚಿತಾರ್ಥ ನಡೆದಿರುವುದರಿಂದ ಸ್ಯಾಂಡಲ್‍ವುಡ್‍ನಲ್ಲಿ ಈಗ ಮದುವೆ ಸಂಭ್ರಮಗಳು ಕಲೆಕಟ್ಟುವ ಮೂಲಕ ಅಭಿಮಾನಿಗಳ ಗಮನ ಸೆಳೆಯುತ್ತಿದೆ.

Abhishek Ambareesh, Aviva Bidapa, engaged,

Articles You Might Like

Share This Article