Friday, July 5, 2024
Homeರಾಜ್ಯಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ : ಸೂರಜ್ ರೇವಣ್ಣ 8 ದಿನಗಳ ಪೊಲೀಸ್ ಕಸ್ಟಡಿಗೆ

ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ : ಸೂರಜ್ ರೇವಣ್ಣ 8 ದಿನಗಳ ಪೊಲೀಸ್ ಕಸ್ಟಡಿಗೆ

ಬೆಂಗಳೂರು, ಜೂ.24- ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಹಿನ್ನೆಲೆಯಲ್ಲಿ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರನ್ನು 42ನೇ ಎಸಿಎಂಎಂ ಜನಪ್ರತಿನಿಧಿಗಳ ನ್ಯಾಯಾಲಯ ಎಂಟು ದಿನಗಳ ಕಾಲ ಸಿಐಡಿ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದೆ.

ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದ ಹಿನ್ನೆಲೆಯಲ್ಲಿ ಬಂಧನವಾಗಿದ್ದ ಸೂರಜ್ ರೇವಣ್ಣ ಅವರನ್ನು ನಿನ್ನೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ನ್ಯಾಯಾಧೀಶರು 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದ್ದರು.

ಹೆಚ್ಚಿನ ವಿಚಾರಣೆಗಾಗಿ 14 ದಿನಗಳ ಕಾಲ ಕಸ್ಟಡಿಗೆ ನೀಡಬೇಕೆಂದು ಸಿಐಡಿಪೊಲೀಸರು ಮನವಿ ಮಾಡಿದ ಹಿನ್ನೆಲೆಯಲ್ಲಿ ನ್ಯಾಯಾ„ೀಶರಾದ ಶಿವಕುಮಾರ್‍ರವರು 8 ದಿನಗಳ ಕಾಲ ಸೂರಜ್ ಅವರನ್ನು ಸಿಐಡಿ ಕಸ್ಟಡಿಗೆ ನೀಡಿ ಆದೇಶಿಸಿದರು.

RELATED ARTICLES

Latest News