ಬೆಂಗಳೂರು,ಜು.30- ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನಲ್ಲಿ ಮೂರು ದಿನಗಳ ಹಿಂದೆ ನಡೆದ ಬಿಜೆಪಿ ಯುವ ಮುಖಂಡ ಪ್ರವೀಣ್ನೆಟ್ಟಾರು ಕೊಲೆ ಪ್ರಕರಣದ ಬಿಸಿ ಇದೀಗ ಮುಖ್ಯಮಂತ್ರಿ ಹಾಗೂ ಗೃಹ ಸಚಿವರಿಗೂ ತಟ್ಟಿದ್ದು, ಬಿಜೆಪಿ ವಿರುದ್ಧ ಎಬಿವಿಪಿ ಕಾರ್ಯಕರ್ತರು ತಿರುಗಿಬಿದ್ದಿದ್ದಾರೆ.
ಮೂರು ದಿನಗಳ ಹಿಂದಷ್ಟೇ ಬಿಜೆಪಿ ರಾಜ್ಯಾದ್ಯಕ್ಷ ನಳೀನ್ಕುಮಾರ್ ಕಟೀಲ್, ಸಚಿವರಾದ ಸುನೀಲ್ಕುಮಾರ್ ಅಂಗಾರ ಸೇರಿದಂತೆ ವಿವಿಧ ಮುಖಂಡರಿಗೆ ಬಿಸಿ ಮುಟ್ಟಿಸಿದ್ದ ಆರ್ಎಸ್ಎಸ್ನ ಅಂಗ ಸಂಸ್ಥೆಗಳು, ಇದೀಗ ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧವೇ ಎಬಿವಿಪಿ ಕಾರ್ಯಕರ್ತರು ಆಕ್ರೋಶ ಹೊರ ಹಾಕಿದ್ದಾರೆ.
ಬೆಂಗಳೂರಿನ ಜಯಮಾಲ್ನಲ್ಲಿರುವ ಆರಗ ಜ್ಞಾನೇಂದ್ರ ಅವರ ಸರ್ಕಾರಿ ನಿವಾಸಕ್ಕೆ ಬೆಳಗ್ಗೆಯೇ ನೂರಾರು ಕಾರ್ಯಕರ್ತರು ಏಕಾಏಕಿ ನುಗ್ಗಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲವಾಗಿರುವ ಸಚಿವರು ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು.
ಒಂದು ಹಂತದಲ್ಲಿ ಸಚಿವರ ನಿವಾಸದ ಕಾಂಪೌಂಡ್ ಒಳಗೆ ನುಗ್ಗಿ ಹೂ ಕುಂಡಗಳನ್ನು ಒಡೆದು ಹಾಕಿ, ಮನೆಯ ಬಾಗಿಲನ್ನು ಮುರಿದು ಒಳನುಗ್ಗಲು ಕಾರ್ಯಕರ್ತರು ಪ್ರಯತ್ನಿಸಿದರು. ಪರಿಸ್ಥಿತಿ ಕೈ ಮೀರುತ್ತಿರುವುದನ್ನು ಅರಿತ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಪರಿಸ್ಥಿತಿಯನ್ನು ತಿಳಿಗೊಳಿಸುವ ಪ್ರಯತ್ನ ಮಾಡಿದರು.
ಇಷ್ಟಕ್ಕೂ ಜಗ್ಗದ ಎಬಿವಿಪಿ ಕಾರ್ಯಕರ್ತರು ಕಾಂಪೌಂಡ್ ಒಳಗೆ ಸಚಿವ ಜ್ಞಾನೇಂದ್ರ ವಿರುದ್ಧ ಕ್ಕಾರದ ಘೋಷಣೆಗಳನ್ನು ಕೂಗಿ ಪಿಎಫ್ಐ ಮತ್ತು ಎಸ್ಡಿಪಿಐ ಸಂಘಟನೆಗಳನ್ನು ನಿಷೇಸಬೇಕೆಂದು ಘೋಷಣೆ ಕೂಗಿದರು.
ಸ್ಥಳದಲ್ಲಿದ್ದ ಪೆಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಲು ಹರಸಾಹಸಪಟ್ಟರು. ಅಷ್ಟಕ್ಕೂ ಬಗ್ಗದಿದ್ದಾಗ ಅನಿವಾರ್ಯವಾಗಿ ಎಬಿವಿಪಿ ಕಾರ್ಯಕರ್ತರ ಮೇಲೆ ಲಾಠಿ ಪ್ರಹಾರ ನಡೆಸಿ ಎಲ್ಲರನ್ನು ದರದರನೆ ಎಳೆದೊಯ್ದು ಪೊಲೀಸ್ ಜೀಪ್ಗಳಿಗೆ ಹತ್ತಿಸಿಕೊಂಡು ಹೋದರು.
ಪೊಲೀಸ್ ಲಾಠಿಗೂ ಜಗ್ಗದ ಕಾರ್ಯಕರ್ತರು ನಿವಾಸದ ಬಳಿ ದೊಡ್ಡ ದಾಂಧಲೆಯನ್ನೇ ನಡೆಸಿ ಹೈಡ್ರಾಮ ಸೃಷ್ಟಿಸಿದರು. ಮನೆ ಬಾಗಿಲ ಒದ್ದು ಬೀಗ ಒಡೆಯುವ ಪ್ರಯತ್ನ ನಡೆಸಿದರು. ಇನ್ನೇನು ಮನೆಯೊಳಗೆ ನುಗ್ಗೇ ಬಿಟ್ಟರು ಎಂಬಂತ ಪರಿಸ್ಥಿತಿ ನಿರ್ಮಾಣವಾಗುತ್ತಿದ್ದಂತೆ ವಿ ಇಲ್ಲದೆ ಪೆÇಲೀಸರು ಲಾಠಿ ಪ್ರಹಾರ ನಡೆಸಬೇಕಾಯಿತು. ಆದರೂ ಎಬಿವಿಪಿ ಕಾರ್ಯಕರ್ತರು ಮಾತ್ರ ಗೇಟ್ ಹಿಡಿದುಕೊಂಡೇ ಸರ್ಕಾರದ ವಿರುದ್ಧ ತಮ್ಮ ಆಕ್ರೋಶ ಹೊರ ಹಾಕಿದರು. ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ನಡೆದ ಪ್ರತಿಭಟನೆಯಿಂದಾಗಿ ಜಯಮಾಲ್ನ ಮನೆ ಬಳಿ ಆತಂಕದ ಪರಿಸ್ಥಿತಿ ಉಂಟಾಯಿತು.
ಸರ್ಕಾರದ ವಿರುದ್ಧ ಘೋಷಣೆ:
ಪ್ರತಿಭಟನೆ ನಿರತ ಕಾರ್ಯಕರ್ತರು ಸರ್ಕಾರದ ವಿರುದ್ಧ ಆಕ್ರೋಶವನ್ನು ವ್ಯಕ್ತಪಡಿಸಿದ್ದು, ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಾದರಿಯಲ್ಲಿ ಸಮಾಜಘಾತುಕ ಶಕ್ತಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದರು.
ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಕಾರದಲ್ಲಿದ್ದರೂ ಹಿಂದೂ ಕಾರ್ಯಕರ್ತರನ್ನು ರಕ್ಷಣೆ ಮಾಡುವಲ್ಲಿ ವಿಫಲವಾಗಿದೆ. ಕಾನೂನು ಸುವ್ಯವಸ್ಥೆ ಕುಸಿದು ಬಿದ್ದಿದ್ದು, ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಹಾಗೂ ಗೃಹ ಸಚಿವರು ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು.
ನಾವು ವೈಯಕ್ತಿಕವಾಗಿ ಯಾರ ವಿರುದ್ಧವೂ ಪ್ರತಿಭಟನೆ ನಡೆಸುತ್ತಿಲ್ಲ. ಎಸ್ಡಿಪಿಐ ಮತ್ತು ಪಿಎಫ್ಐ ಸಂಘಟನೆ ಹಾಗೂ ಅದರ ಮುಖಂಡರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂಬುದು ನಮ್ಮ ಆಗ್ರಹವಾಗಿತ್ತು. ಆದರೆ ಸರ್ಕಾರ ಮೀನಾಮೇಷ ಎಣಿಸಿದ ಪರಿಣಾಮ ಇಂದು ಸಾಲು ಸಾಲು ಹಿಂದೂ ಕಾರ್ಯಕರ್ತರು ಸಾವನ್ನಪ್ಪುತ್ತಿದ್ದಾರೆ. ಇದಕ್ಕೆ ಯಾರು ಹೊಣೆ ಎಂದು ಪ್ರಶ್ನಿಸಿದರು.
ಪೊಲೀಸರ ಮೇಲೆ ದಬ್ಬಾಳಿಕೆ ಆರೋಪ:
ಪ್ರತಿಭಟನೆ ನಡೆಸುತ್ತಿದ್ದ ಪೊಲೀಸರು ಅನಾವಶ್ಯಕವಾಗಿ ಲಾಠಿ ಪ್ರಹಾರ ನಡೆಸಿ ದಬ್ಬಾಳಿಕೆ ನಡೆಸುತ್ತಿದ್ದಾರೆ ಎಂದು ಎಬಿವಿಪಿ ಕಾರ್ಯಕರ್ತರು ಆರೋಪಿಸಿದರು.
ನಾವು ಗೃಹ ಸಚಿವರನ್ನು ಭೇಟಿಯಾಗಿ ಮನವಿ ಪತ್ರ ಸಲ್ಲಿಸಬೇಕೆಂದು ತೀರ್ಮಾನಿಸಿದ್ದೆವು. ಆದರೆ ನಮ್ಮನ್ನು ಒಳ ಬಿಡದೆ ಪೊಲೀಸರು ಲಾಠಿ ಪ್ರಹಾರ ನಡೆಸಿ ದರ್ಪ ತೋರಿಸಿದ್ದಾರೆ ಎಂದು ಆಕ್ರೋಶವನ್ನು ಹೊರಹಾಕಿದರು.
ಸಂದೀಪ್ ಪಾಟೀಲ್ ದೌಡು:
ಪರಿಸ್ಥಿತಿ ಕೈ ಮೀರಿದ್ದನ್ನು ಅರಿತ ಸಿಸಿಬಿಐ ಅಪರ ಆಯುಕ್ತ ಸಂದೀಪ್ ಪಾಟೀಲ್ ಆಗಮಿಸಿ ಅವಲೋಕನ ಮಾಡಿದರು. ಗೃಹ ಸಚಿವರು ಬೆಂಗಳೂರಿನಲ್ಲಿ ಇಲ್ಲ. ಕಾರ್ಯಕ್ರಮ ನಿಮಿತ್ತ ಅವರು ಹೊರ ಹೋಗಿದ್ದಾರೆ.
ಶಾಂತಿಯುತ ಪ್ರತಿಭಟನೆಗೆ ನಮ್ಮ ತಕರಾರು ಇಲ್ಲ. ಆದರೆ ಏಕಾಏಕಿ ಸಚಿವರ ಮನೆಗೆ ನುಗ್ಗುವುದು, ಬಾಗಿಲು ಮುರಿಯುವುದು, ಕ್ಕಾರದ ಘೋಷಣೆ ಕೂಗಲು ಅವಕಾಶವಿಲ್ಲ. ನೀವು ಕಾನೂನು ಕೈಗೆತ್ತಿಕೊಂಡರೆ ಸುಮ್ಮನೆ ಕೂರಲು ಸಾಧ್ಯವಿಲ್ಲ ಎಂದು ಪೊಲೀಸರು ನಡೆಸಿದ ಲಾಠಿ ಪ್ರಹಾರವನ್ನು ಸಮರ್ಥಿಸಿಕೊಂಡರು.