ಬಿಬಿಎಂಪಿ ಕಚೇರಿಗಳ ಮೇಲೆ ಮುಂದುವರೆದಿದ ಎಸಿಬಿ ದಾಳಿ

Social Share

ಬೆಂಗಳೂರು,ಫೆ.28-ಬಿಬಿಎಂಪಿ ಕಚೇರಿಗಳ ಮೇಲೆ ಎಸಿಬಿ ದಾಳಿ ಮುಂದುವರೆದಿದೆ. ಕಳೆದ ಶುಕ್ರವಾರ ಬಿಬಿಎಂಪಿ ಕೇಂದ್ರ ಕಚೇರಿ, ನಗರ ಯೋಜನೆ, ಹಣಕಾಸು ಇಲಾಖೆ 8 ವಲಯಗಳ ಕಚೇರಿ ಸೇರಿದಂತೆ 27 ಕಡೆ ಎಸಿಬಿ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದರು.
ಶನಿವಾರ, ಭಾನುವಾರ ರಜೆ ಕಾರಣ ಸ್ಥಗಿತವಾಗಿದ್ದ ದಾಳಿ ಇಂದು ಮುಂದುವರೆದಿದ್ದು ,ಡಿವೈಎಸ್ಪಿ ರವಿಶಂಕರ್ ನೇತೃತ್ವದಲ್ಲಿ ಆಗಮಿಸಿದ ಅಕಾರಿಗಳು, ಬಿಬಿಎಂಪಿ ಆರೋಗ್ಯ ವಿಭಾಗ ಕಚೇರಿಯಲ್ಲಿ ಪರಿಶೀಲನೆ ನಡೆಸಿದರು.
ಪಾಲಿಕೆ ಹೆರಿಗೆ ಆಸ್ಪತ್ರೆಯ ಮುಖ್ಯಸ್ಥರ ಕೊಠಡಿ ಸೇರಿದಂತೆ ವಿವಿಧೆಡೆ ಪರಿಶೀಲನೆ ನಡೆಸಿ ದಾಖಲೆಗಳನ್ನು ವಶಪಡಿಸಿಕೊಂಡರು. ಬಿಡಿಎ ಕಳೆದ ತಿಂಗಳು ಬಿಡಿಎ ಕಚೇರಿ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಬಯಲಿಗೆಳೆದಿದ್ದರು. ಮಹತ್ವದ ದಾಖಲೆಗಳು, ಅಪಾರ ಪ್ರಮಾಣದ ನಗದು, ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಗಿತ್ತು.
ಹಲವರ ವಿರುದ್ಧ ದೂರು ಕೂಡ ದಾಖಲಿಸಲಾಗಿತ್ತು. ಬಿಬಿಎಂಪಿಯಲ್ಲೂ ಸಾಕಷ್ಟು ದೂರುಗಳ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಎಸಿಬಿ ಅಧಿಕಾರಿಗಳು ಶುಕ್ರವಾರ ಏಕಕಾಲದಲ್ಲಿ 27 ಕಡೆ ದಾಳಿ ನಡೆಸಿ ಭ್ರಷ್ಟಾಚಾರ ನಡೆಸಿದ ಸಂಬಂಧ ಭಾರೀ ಪ್ರಮಾಣದ ದಾಖಲೆಗಳನ್ನು ವಶಪಡಿಸಿಕೊಂಡು ತೀವ್ರ ಪರಿಶೀಲನೆ ನಡೆಸುತ್ತಿದ್ದಾರೆ.
ಎಸಿಬಿ ಅಧಿಕಾರಿಗಳ ದಾಳಿಯಿಂದ ಭ್ರಷ್ಟ ಅಧಿಕಾರಿಗಳಲ್ಲಿ ನಡುಕು ಉಂಟಾಗಿದೆ. ಇಂದಿನಿಂದ ಮತ್ತೆ ದಾಳಿ ಮುಂದುವರೆದಿದ್ದು, ವಿವಿಧ ಇಲಾಖೆಯ ಹಲವೆಡೆ ಎಸಿಬಿ ಅಕಾರಿಗಳ ತಂಡ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ಕೈಗೊಂಡಿದೆ.

Articles You Might Like

Share This Article