Friday, December 6, 2024
Homeಜಿಲ್ಲಾ ಸುದ್ದಿಗಳು | District Newsವಿಜಯಪುರ : ಲಾರಿ-ಕಾರಿನ ನಡುವೆ ಭೀಕರ ಅಪಘಾತ, ಸ್ಥಳದಲ್ಲೇ ನಾಲ್ವರ ಸಾವು

ವಿಜಯಪುರ : ಲಾರಿ-ಕಾರಿನ ನಡುವೆ ಭೀಕರ ಅಪಘಾತ, ಸ್ಥಳದಲ್ಲೇ ನಾಲ್ವರ ಸಾವು

ವಿಜಯಪುರ,ಏ.13- ಲಾರಿ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಬಬಲೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವಿಜಯಪುರದ ನಿವಾಸಿಗಳಾದ ರವಿನಾಥ ಪತ್ತಾರ (52), ಪುಷ್ಪಾ ರವಿನಾಥ ಪತ್ತಾರ (40), ಅರ್ಜುನ ಕುಶಾಲಸಿಂಗ್ ರಜಪೂತ (32) ಮತ್ತು ಮೇಘರಾಜ ರಜಪೂತ (12) ಮೃತ ದುರ್ದೈವಿಗಳು.

ಘಟನೆಯಲ್ಲಿ ಜಯಶ್ರೀ, ಪ್ರೇಮಸಿಂಗ್, ನಯಾರಾ ಗಂಭೀರ ಗಾಯಗೊಂಡಿದ್ದು, ವಿಜಯಪುರ ಜಿಲ್ಲಾಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ದಾಖಲಿಸಲಾಗಿದೆ. ವಿಜಯಪುರದಿಂದ ಈ ನಾಲ್ವರು ಜಮಖಂಡಿಯಲ್ಲಿನ ದೇವಸ್ಥಾನಕ್ಕೆ ಹೋಗುತ್ತಿದ್ದರು.

ಬಬಲೇಶ್ವರ ತಾಲ್ಲೂಕಿನ ಅರ್ಜುಣಗಿ ಗ್ರಾಮದ ಬಳಿ ಜಮಖಂಡಿಯಿಂದ ವಿಜಯಪುರಕ್ಕೆ ಸಿಮೆಂಟ್ ಸಾಗಿಸುತ್ತಿದ್ದ ಲಾರಿ ಅಜಾಗರೂಕತೆಯಿಂದ ಅತಿವೇಗವಾಗಿ ಬಂದು ಇವರ ಕಾರಿಗೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದರೆ, ಇನ್ನುಳಿದ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಸುದ್ದಿ ತಿಳಿದು ವಿಜಯಪುರ ಎಸ್.ಪಿ.ಋಷಿಕೇಶ ಸೋಗೆವಣಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಬಲೇಶ್ವರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ನಾಲ್ವರ ಮೃತದೇಹಗಳನ್ನು ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಒಳಪಡಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

RELATED ARTICLES

Latest News