ಬೆಂಗಳೂರು,ಅ.28-ಮನೆಯೊಂದಕ್ಕೆ ನುಗ್ಗಿ ಪಶ್ಚಿಮ ಬಂಗಾಳ ಮೂಲದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ವೆಸಗಿ ತಲೆ ಮರೆಸಿಕೊಂಡಿದ್ದ ಪ್ರಮುಖ ಆರೋಪಿಯನ್ನು ಮಾದನಾಯಕನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಮಿಥುನ್ ಬಂಧಿತ ಆರೋಪಿ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮೂವರನ್ನು ಪೊಲೀಸರು ಬಂಧಿಸಿದ್ದರು. ಇವರಿಗೆ ಇಬ್ಬರು ಅಪ್ರಾಪ್ತರು ಸಹಕರಿಸಿದ್ದರು ಎಂಬುವುದು ತನಿಖೆಯಿಂದ ಗೊತ್ತಾಗಿದೆ.
ಗಂಗೊಂಡನ ಹಳ್ಳಿಯಲ್ಲಿ ಮನೆ ಬಾಡಿಗೆ ಪಡೆದು ಪಶ್ಚಿಮ ಬಂಗಾಳ ಮೂಲದ ಮಹಿಳೆ ಹಾಗೂ ಇಬ್ಬರು ಪುರುಷರು ನೆಲೆಸಿದ್ದಾರೆ. ಕಳೆದವಾರ ಈ ಮನೆಗೆ ಹೋದ 6 ಮಂದಿ ದಾಖಲೆಗಳನ್ನು ಪರಿಶೀಲಿಸುವ ನೆಪದಲ್ಲಿ ತಾವು ಪೊಲೀಸರೆಂದು ಪರಿಚಯಿಸಿಕೊಂಡು ಏಕಾಏಕಿ ಒಳಗೆ ನುಗ್ಗಿ ಇಬ್ಬರು ವ್ಯಕ್ತಿಗಳ ಮೇಲೆ ಹಲ್ಲೆ ನಡೆಸಿ ಅವರನ್ನು ಕಟ್ಟಿಹಾಕಿ ನಂತರ ಮಹಿಳೆಯನ್ನು ಪಕ್ಕದ ರೂಮ್‌ಗೆ ಎಳೆದೊಯ್ದು ಸಾಮೂಹಿಕ ಅತ್ಯಾಚಾರ ವೆಸಗಿ ಪರಾರಿಯಾಗಿದ್ದರು.
ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸರು ಘಟನಾ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಕೆಲವೇ ಗಂಟೆಗಳಲ್ಲಿ ಮೂವರನ್ನು ಬಂಧಿಸಿದ್ದರು. ತಲೆ ಮರೆಸಿಕೊಂಡಿದ್ದ ಪ್ರಮುಖ ಆರೋಪಿ ಮಿಥುನ್‌ಗಾಗಿ ಶೋಧ ನಡೆಸುತ್ತಿದ್ದ ಪೊಲೀಸರು ಕೊನೆಗೂ ಆತನನ್ನು ಪತ್ತೆ ಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
