ಮಂಗಳೂರು, ಮಾ 5: ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಸಿಡ್ ದಾಳಿಗೆ ಒಳಗಾದ ಮೂವರು ವಿದ್ಯಾರ್ಥಿನಿಯರಿಗೆ ರಾಜ್ಯ ಮಹಿಳಾ ಆಯೋಗ ತಲಾ ನಾಲ್ಕು ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ. ರಾಜ್ಯ ಮಹಿಳಾ ಆಯೋಗ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರು ಇಲ್ಲಿನ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆಯುತ್ತಿರುವ ವಿದ್ಯಾರ್ಥಿನೀಯರಿಗೆ ಸಾಂತ್ವಾನ,ದೈಯೇ ಹೇಳಿ ಅವರ ಕುಟುಂಬಗಳಿಗೆ ತಲಾ ನಾಲ್ಕು ಲಕ್ಷ ರೂ.ಗಳ ಪರಿಹಾರವನ್ನು ತಕ್ಷಣವೇ ನೀಡಲಾಗುವುದು ಮತ್ತು ಅವರ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ತಿಳಿಸಿದರು.
ವಿದ್ಯಾರ್ಥಿಗಳು ಚೆನ್ನಾಗಿದ್ದಾರೆ. ನಾನು ಈಗ ನಡೆಯುತ್ತಿರುವ ದ್ವಿತೀಯ ಪಿಯುಸಿ ಪರೀಕ್ಷೆಯ ಬಗ್ಗೆ ಮಾತ್ರ ಚಿಂತಿಸುತ್ತಿದ್ದೇನೆ, ಶಿಕ್ಷಣ ಸಚಿವರೊಂದಿಗೆ ಮಾತನಾಡಿದ ನಂತರ ದಿನದಲ್ಲಿ ವರಿಗೆ ಪರೀಕ್ಷೆ ಬರೆಯುವ ಕುರಿತು ಎದುರಾಗಿರುವ ಚಿಂತೆ ಪರಿಹರಿಸುತ್ತೇನೆ ಎಂದು ಸುದ್ದಿಗಾರರಿಗೆ ತಿಳಿಸಿದರು. ಪ್ರಸ್ತುತ ಪರೀಕ್ಷಾ ಚಕ್ರದಲ್ಲಿಯೇ ಪಿಯು ಬೋರ್ಡ್ ನಡೆಸುತ್ತಿರುವ ಪರೀಕ್ಷೆಗಳನ್ನು ತೆಗೆದುಕೊಳ್ಳಲು ಸಾಧ್ಯವಾಗುವುದೇ ಎಂದು ವಿದ್ಯಾರ್ಥಿಗಳು ತಮ್ಮ ಆತಂಕವನ್ನು ವ್ಯಕ್ತಪಡಿಸಿದ್ದು, ಈ ನಿಟ್ಟಿನಲ್ಲಿ ಅವರಿಗೆ ವ್ಯವಸ್ಥೆ ಮಾಡುವಂತೆ ಶಿಕ್ಷಣ ಸಚಿವರನ್ನು ಮನವಿ ಮಾಡಿದರು.
ನಾನು ಮಕ್ಕಳ ಚಿಂತೆ ಮತ್ತು ಮನಸ್ಥಿತಿಯನ್ನು ಅರ್ಥಮಾಡಿಕೊಂಡಿದ್ದೇನೆ. ನನಗೂ ಪಿಯುಸಿ ಓದುತ್ತಿರುವ ಮಗನಿದ್ದಾನೆ. ನಾನು ಶಿಕ್ಷಣ ಸಚಿವರನ್ನು ಭೇಟಿ ಮಾಡುತ್ತೇನೆ ಎಂದು ಚೌಧರಿ ಹೇಳಿದರು. ಮೂವರು ವಿದ್ಯಾರ್ಥಿಗಳಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ಅವರು ಆರೋಗ್ಯವಾಗಿದ್ದಾರೆ ಎಂದು ಹೇಳಿದರು, ಆದರೆ ಅವರಲ್ಲಿ ಇಬ್ಬರಿಗೆ ಎರಡು ವಾರಗಳ ಸಾಮಾನ್ಯ ಚಿಕಿತ್ಸೆಯ ನಂತರ ಪ್ಲಾಸ್ಟಿಕ್ ಸರ್ಜರಿ ಮಾಡಬೇಕಾಗಿದೆ ಎಂದು ತಿಳಿಸಿದ್ದಾರೆ ಆದರೂ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಲಾಗುವುದು ಮುಂದೆ ಈ ರೀತಿ ಘಟನೆ ನಡೆಯದಂತೆ ತಪ್ಪಿತಸ್ಥನಿಗೆ ಶಿಕ್ಷೆಯಾಗಲಿದೆ ಎಂದು ಭರವಸೆ ನೀಡಿದರು.