Thursday, November 21, 2024
Homeಬೆಂಗಳೂರುಅಪ್ರಾಪ್ತರು ವಾಹನ ಚಲಾಯಿಸಿದರೆ ಪೋಷಕರ ವಿರುದ್ಧ ಕ್ರಮ : ದಯಾನಂದ ಎಚ್ಚರಿಕೆ

ಅಪ್ರಾಪ್ತರು ವಾಹನ ಚಲಾಯಿಸಿದರೆ ಪೋಷಕರ ವಿರುದ್ಧ ಕ್ರಮ : ದಯಾನಂದ ಎಚ್ಚರಿಕೆ

ಬೆಂಗಳೂರು, ಮೇ 25- ಅಪ್ರಾಪ್ತರು ವಾಹನ ಚಲಾಯಿಸುವುದು ಅಪರಾಧವಾಗಿದ್ದು, ಅಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಪೋಷಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್‌‍ ಆಯುಕ್ತರಾದ ಬಿ.ದಯಾನಂದ ಎಚ್ಚರಿಕೆ ನೀಡಿದ್ದಾರೆ.

ಎಲೆಕ್ಟ್ರಾನಿಕ್‌ ಸಿಟಿಯ ಐಐಐಟಿ ಕಾಲೇಜು ಆಡಿಟೋರಿಯಂನಲ್ಲಿ ಹಮಿಕೊಂಡಿದ್ದ ಮಾಸಿಕ ಜನ ಸಂಪರ್ಕ ಸಭೆಯಲ್ಲಿ ಮಾತನಾಡಿದ ಅವರು, 18 ವರ್ಷಕ್ಕಿಂತ ಕೆಳಗಿನ ಬಾಲಕ, ಬಾಲಕಿಯರು ಎಷ್ಟೇ ಸಾರ್ಟ್‌ ಇದ್ದರೂ, ಅವರು ಮೊಬೈಲ್‌, ಇನ್ನಿತರ ತಂತ್ರಜ್ಞಾನ ಬಳಕೆ ಮಾಡಿದರೂ ಅವರು ಪ್ರಬುದ್ಧರಾಗಿರುವುದಿಲ್ಲ.

ಒಬ್ಬ ವ್ಯಕ್ತಿಗೆ 18 ವರ್ಷದ ನಂತರ ಡ್ರೈವಿಂಗ್‌ ಲೈಸೆನ್ಸ್ ಕೊಡಲು ವೈಜ್ಞಾನಿಕ ಕಾರಣಗಳಿವೆ. ಅಪ್ರಾಪ್ತರಿಗೆ ಮೆದುಳು ಹೆಚ್ಚು ಪ್ರಬುದ್ಧತೆ ಹೊಂದಿರುವುದಿಲ್ಲ. ನಮ ಮಕ್ಕಳು ಹೆಚ್ಚು ಬುದ್ಧಿವಂತರು, 10 ವರ್ಷಕ್ಕೇ ದ್ವಿಚಕ್ರ ವಾಹನ, 15 ವರ್ಷಕ್ಕೆ ಕಾರು ಚಲಾಯಿಸುತ್ತಾರೆ ಎಂದು ಪೋಷಕರು ತಮ ಮಕ್ಕಳಿಗೆ ವಾಹನದ ಕೀ ಕೊಟ್ಟರೆ ಅವರ ಕೈಗೆ ಆಯುಧ ಕೊಟ್ಟಂತಾಗುತ್ತದೆ ಎಂದರು.

ಸಾರ್ವಜನಿಕ ಸ್ಥಳಗಳಲ್ಲಿ ಅಪ್ರಾಪ್ತರು ವಾಹನ ಚಲಾಯಿಸಿದರೆ ಇದನ್ನು ಗಂಭೀರ ಪ್ರಕರಣ ಎಂದು ಪರಿಗಣಿಸಿ ಜ್ಯುವಿನೈಲ್‌ ಜಸ್ಟೀಸ್‌‍ ಆ್ಯಕ್ಟ್‌ನಲ್ಲಿ ಜಾಮೀನುರಹಿತ ಪ್ರಕರಣ ದಾಖಲಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಪೂಣೆಯಲ್ಲಿ ನಡೆದ ಅಪಘಾತ ಪ್ರಕರಣವೊಂದರಲ್ಲಿ ಐಷಾರಾಮಿ ಕಾರೊಂದನ್ನು ಉದ್ಯಮಿಯೊಬ್ಬರು ತಮ ಮಗನಿಗೆ ಕೊಟ್ಟು ಇಬ್ಬರ ಸಾವಿಗೆ ಕಾರಣವಾಗಿದ್ದರು.ಕುಡಿದು ವಾಹನ ಚಲಾಯಿಸುವುದು, ವೀಲಿಂಗ್‌ನಂತಹ ಯಾವುದೇ ಪ್ರಕರಣದಲ್ಲಿ ಅಪ್ರಾಪ್ತರು ಭಾಗಿಯಾಗಿದ್ದಲ್ಲಿ ಅವರ ತಂದೆ-ತಾಯಿ ಜೈಲಿಗೆ ಹೋಗಬೇಕಾಗುತ್ತದೆ ಎಂದು ಆಯುಕ್ತರು ಎಚ್ಚರಿಸಿದರು.

ಇಂತಹ ಪ್ರಕರಣದ ಬಗ್ಗೆ ಪೋಷಕರು ಮಕ್ಕಳಿಗೆ ತಿಳಿ ಹೇಳಬೇಕು ಎಂದರು.ಸಾರ್ವಜನಿಕರೊಬ್ಬರು ಪರಪ್ಪನ ಅಗ್ರಹಾರ ಸೆಂಟ್ರಲ್‌ ಜೈಲ್‌ನಲ್ಲಿ ಅಳವಡಿಸಿರುವ ರಾಡರ್‌ನಿಂದಾಗಿ ಸ್ಥಳೀಯ ನಿವಾಸಿಗಳಿಗೆ ತೊಂದರೆಯಾಗುತ್ತಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಆಯುಕ್ತರು, ಈ ಬಗ್ಗೆ ಸರ್ಕಾರದ ಜೊತೆ ಚರ್ಚಿಸಿ ಹೊಸ ತಂತ್ರಜ್ಞಾನ ಅಳವಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಹೊಸೂರು ಮುಖ್ಯರಸ್ತೆಯ ಮಡಿವಾಳ ಬಳಿ ಹೊರರಾಜ್ಯಕ್ಕೆ ತೆರಳುವ ಖಾಸಗಿ ಬಸ್‌‍ಗಳು ಬುಕಿಂಗ್‌ ಕೇಂದ್ರಗಳ ಬಳಿ ನಿಲ್ಲಿಸುವುದರಿಂದ ಟ್ರಾಫಿಕ್‌ ಸಮಸ್ಯೆಯಾಗುತ್ತಿದೆ ಎಂದು ಅಳಲು ತೋಡಿಕೊಂಡರು.

ಸೇಫ್‌ಸಿಟಿಯಡಿ ನಗರದ ಪ್ರಮುಖ ಸ್ಥಳಗಳಲ್ಲಿ ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಇನ್ನೂ ಹೆಚ್ಚು ಸುರಕ್ಷತೆ ಅವಶ್ಯಕತೆ ಇದ್ದಲ್ಲಿ, ತಮ ಮನೆ ಹೊರಗಿನ ಅಥವಾ ತಮ ರಸ್ತೆಯಲ್ಲಿ ಅಳವಡಿಸಿರುವ ಸಿಸಿ ಕ್ಯಾಮರಾದ ಸಂಪರ್ಕವನ್ನು ಸ್ಥಳಿಯ ಪೊಲೀಸರ ಸಲಹೆ ಮೇರೆಗೆ ಸಿಸಿ ಕ್ಯಾಮರಾದ ಸಂಪರ್ಕವನ್ನು ಕಮೆಂಡ್‌ ಸೆಂಟರ್‌ಗೆ ಕೊಡಬಹುದು ಎಂದು ಆಯುಕ್ತರು ತಿಳಿಸಿದ್ದಾರೆ.

ಸಭೆಗೆ ಆಗಮಿಸಿದ್ದ ಸಾರ್ವಜನಿಕರು ಫುಟ್‌ಪಾತ್‌ ಒತ್ತುವರಿ ಸಮಸ್ಯೆ, ಟ್ರಾಫಿಕ್‌ ಸಮಸ್ಯೆ, ಪುಂಡರಿಂದ ವೀಲಿಂಗ್‌ ಹಾವಳಿ, ಬಾರ್‌/ಪಬ್‌ಗಳ ಮುಂದೆ ಪಾರ್ಕಿಂಗ್‌ ಸಮಸ್ಯೆಗಳ ಬಗ್ಗೆ ಆಯುಕ್ತರಿಗೆ ದೂರು ಸಲ್ಲಿಸಿದರು.

RELATED ARTICLES

Latest News