ನವದೆಹಲಿ, ಮೇ 31- ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯಾಗಿ ವಿಶೇಷ ತನಿಖಾ ದಳ(ಎಸ್‌ಐಟಿ)ದಿಂದ ಬಂಧನಕ್ಕೊಳಗಾಗಿರುವ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರ ಪಾಸ್‌ಪೋರ್ಟ್‌ಗೆ ಸಂಬಂಧಿಸಿದಂತೆ ಮುಂದಿನ ಕ್ರಮವನ್ನು ಜೂ.2ರ ಬಳಿಕ ಕೈಗೊಳ್ಳುವುದಾಗಿ ವಿದೇಶಾಂಗ ಸಚಿವಾಲಯ ಹೇಳಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ವಿದೇಶಾಂಗ ಇಲಾಖೆ ವಕ್ತಾರ ರಣಧೀರ್ ಜೈಸ್ವಾಲ್, ಪಾಸ್‌ಪೋರ್ಟ್ ರದ್ದತಿ ಕೋರಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಮನವಿ ಆಧರಿಸಿ, ನಿಮ ರಾಜತಾಂತ್ರಿಕ ಪಾಸ್ಪೋರ್ಟ್ ಏಕೆ ರದ್ದು ಮಾಡಬಾರದು? ಎಂದು ಪ್ರಶ್ನಿಸಿ ಮೇ 23 ರಂದು ಶೋಕಾಸ್ ನೋಟಿಸ್ ನೀಡಲಾಗಿದೆ. ಅದಕ್ಕೆ ಸ್ಪಷ್ಟಿಕರಣ ನೀಡಲು ಪ್ರಜ್ವಲ್ ರೇವಣ್ಣಗೆ 10 ದಿನಗಳ ಕಾಲಾವಕಾಶ ನೀಡಲಾಗಿದೆ ಎಂದು ಜೈಸ್ವಾಲ್ ಹೇಳಿದ್ದಾರೆ.
10 ದಿನಗಳ ಒಳಗೆ ಪ್ರಜ್ವಲ್ ಸಮಂಜಸವಾಗಿ ಉತ್ತರಿಸದಿದ್ದಲ್ಲಿ ಮುಂದಿನ ಪ್ರಕ್ರಿಯೆಯನ್ನು ಜೂ.2ರ ಬಳಿಕ ಮುಂದುವರೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.