Tuesday, September 2, 2025
Homeಬೆಂಗಳೂರುನಿಯಮ ಉಲ್ಲಂಘಿಸಿ ವಿದೇಶಿ ಪ್ರಜೆಗಳಿಗೆ ಮನೆ ಬಾಡಿಗೆ ನೀಡಿದ ಮಾಲೀಕರ ವಿರುದ್ಧ ಕ್ರಮ

ನಿಯಮ ಉಲ್ಲಂಘಿಸಿ ವಿದೇಶಿ ಪ್ರಜೆಗಳಿಗೆ ಮನೆ ಬಾಡಿಗೆ ನೀಡಿದ ಮಾಲೀಕರ ವಿರುದ್ಧ ಕ್ರಮ

Action taken against landlords who rented out houses to foreign nationals in violation of rules

ಬೆಂಗಳೂರು,ಸೆ.2- ಮನೆ ಮಾಲೀಕರು ವೀಸಾ ನಿಯಮಗಳನ್ನು ಉಲ್ಲಂಘಿಸಿ ವಿದೇಶಿ ಪ್ರಜೆಗಳಿಗೆ ಮನೆ ಬಾಡಿಗೆಗೆ ನೀಡಿದ್ದ ಮನೆ ಮಾಲೀಕರ ವಿರುದ್ಧ ಸಿಸಿಬಿ ಮಹಿಳಾ ಪೊಲೀಸರು ಕ್ರಮಕೈಗೊಂಡಿದ್ದಾರೆ.

ಇಬ್ಬರು ವಿದೇಶಿ ಪ್ರಜೆಗಳು ವಿವಿಧ ವೀಸಾದಡಿಯಲ್ಲಿ ಭಾರತಕ್ಕೆ ಬಂದು, ಅನಧಿಕೃತವಾಗಿ ನಗರದಲ್ಲಿ ವಾಸವಾಗಿರುವ ಬಗ್ಗೆ ಸಿಸಿಬಿ ಮಹಿಳಾ ಸಂರಕ್ಷಣಾ ದಳದ ಅಧಿಕಾರಿ ಮತ್ತು ಸಿಬ್ಬಂದಿಗೆ ಮಾಹಿತಿ ಲಭಿಸಿದೆ.

ಈ ಮಾಹಿತಿಯನ್ನು ಆಧರಿಸಿ, ಅನಧಿಕೃತವಾಗಿ ಇಬ್ಬರು ವಿದೇಶಿ ಮಹಿಳೆಯರು ವಾಸವಾಗಿರುವ ಸ್ಥಳಕ್ಕೆ ದಾವಿಸಿದ ಪೊಲೀಸರು ಆ ಇಬ್ಬರನ್ನು ವಿಚಾರಣೆಗೆ ಒಳಪಡಿಸಿದಾಗ, ಮನೆ ಮಾಲೀಕರು ವಿದೇಶಿ ಪ್ರಜೆಗಳಿಗೆ ಸಂಬಂಧಿಸಿದ ಸಿ ಫಾರಂ ಹಾಗೂ ಇತರೆ ದಾಖಲೆಗಳನ್ನು ಸ್ಥಳೀಯ ಪೊಲೀಸ್‌‍ ಠಾಣೆಗೆ ನೀಡದೆ ಇರುವುದು ಕಂಡು ಬಂದಿದೆ.

ಮನೆ ಮಾಲೀಕರ ವಿರುದ್ಧ ಪರಪ್ಪನ ಅಗ್ರಹಾರ ಪೊಲೀಸ್‌‍ ಠಾಣೆಯಲ್ಲಿ ವಿದೇಶಿ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.ಇಬ್ಬರು ವಿದೇಶಿ ಪ್ರಜೆಗಳನ್ನು ಮುಂದಿನ ಕಾನೂನು ಕ್ರಮಕ್ಕಾಗಿ ಠಾಣೆಯ ಠಾಣಾಧಿಕಾರಿಗಳಿಗೆ ಒಪ್ಪಿಸಲಾಗಿದೆ.ಮನೆ ಮಾಲೀಕರು ತಲೆ ಮರೆಸಿಕೊಂಡಿದ್ದು, ಅವರ ಪತ್ತೆ ಕಾರ್ಯ ಮುಂದುವರೆದಿದ್ದು ತನಿಖೆ ಪ್ರಗತಿಯಲ್ಲಿದೆ.

RELATED ARTICLES

Latest News