ಕನ್ನಡ ಚಿತ್ರರಂಗದ ಹಿರಿಯ ನಟ ಅಶೋಕ್‍ರಾವ್ ಇನ್ನಿಲ್ಲ

Social Share

ಬೆಂಗಳೂರು, ಫೆ.2- ಕೆಲವು ದಿನಗಳಿಂದ ಕ್ಯಾನ್ಸರ್‍ನಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗದ ಖಳನಟ, ಪೋಷಕ ಪಾತ್ರಗಳಲ್ಲಿ ಗುರುತಿಸಿಕೊಂಡಿದ್ದ ಹಿರಿಯ ನಟ ಅಶೋಕ್‍ರಾವ್ ಅವರು ಇಂದು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ವಿದ್ಯಾರಣ್ಯ ಪುರ ದಲ್ಲಿರುವ ಅವರ ನಿವಾಸದಲ್ಲಿ ಇಂದು ಮಧ್ಯಾಹ್ನ 12 ಗಂಟೆಯವರೆಗೂ ಅಂತಿಮ ದರ್ಶನಕ್ಕೆ ಅನುವು ಮಾಡಿಕೊಟ್ಟು, ಮಧ್ಯಾಹ್ನ 3 ಗಂಟೆಗೆ ಹೆಬ್ಬಾಳದ ಬಳಿಯ ಚಿತಾಗಾರದಲ್ಲಿ ನೆರವೇರಿಸಲಾಗುವುದು ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ.
ಪರಶುರಾಮ, ಬಾ ನಲ್ಲೆ ಮಧುಚಂದ್ರಕೆ, ತವರಿನ ಸಿರಿ, ಸೈನೆಡ್, ಆಟೋಶಂಕರ್ ಸೇರಿದಂತೆ 100ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ.

Articles You Might Like

Share This Article